ಉಡುಪಿ | ವಿದ್ಯಾರ್ಥಿಗಳ ಭವಿಷ್ಯವನ್ನೇ ಹೊಸಕಿ ಹಾಕುತ್ತಿರುವ ಮೋದಿ ನೇತೃತ್ವದ ಕೇಂದ್ರ ಸರಕಾರ : ಸುರೇಶ್ ಶೆಟ್ಟಿ ಬನ್ನಂಜೆ

Date:

ಕೇಂದ್ರ ಸರ್ಕಾರದ ನೀತಿಗಳಿಂದ ದೇಶದ ಬಡವರು, ಮಧ್ಯಮ ವರ್ಗ, ಕಾರ್ಮಿಕರು ಹಾಗೂ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಇದೀಗ ವಿದ್ಯಾರ್ಥಿಗಳ ಭವಿಷ್ಯದೊಂದಿಗೂ ಚೆಲ್ಲಾಟ ನಡೆಸಲಾಗುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್‌ನ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸುರೇಶ್ ಶೆಟ್ಟಿ ಬನ್ನಂಜೆ ಆರೋಪಿಸಿದ್ದಾರೆ.

- Advertisement -

ಈ ಕುರಿತು ಪ್ರಕಟಣೆ ನೀಡಿರುವ ಅವರು, ನೀಟ್ ಸೇರಿದಂತೆ ಕೇಂದ್ರ ಸರ್ಕಾರದ ಅಧೀನದಲ್ಲಿರುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ನಿರ್ವಹಣೆಯಲ್ಲಿ ನಿರಂತರ ಗೊಂದಲಗಳು ಉಂಟಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗುತ್ತಿದೆ ಎಂದು ಹೇಳಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹೊಣೆಗಾರಿಕೆ ಕುರಿತು ಪ್ರಶ್ನೆ ಎತ್ತಿದ ಅವರು, ಶಿಕ್ಷಣ ಕ್ಷೇತ್ರದಲ್ಲಿನ ಅವ್ಯವಸ್ಥೆಗಳ ನಡುವೆಯೂ ಕೇಂದ್ರ ಸರ್ಕಾರ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳದಿರುವುದು ವಿಷಾದನೀಯ ಎಂದಿದ್ದಾರೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಜೀವನ ದುಸ್ತರವಾಗಿದ್ದು, ಕೇಂದ್ರ ಸರ್ಕಾರದ ಆರ್ಥಿಕ ಮತ್ತು ಶಿಕ್ಷಣ ನೀತಿಗಳ ಬಗ್ಗೆ ಜನರು ಗಂಭೀರವಾಗಿ ಚಿಂತನೆ ನಡೆಸಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ದೇಶದ ವಿದ್ಯಾರ್ಥಿಗಳು, ಯುವಜನತೆ ಹಾಗೂ ಜನಸಾಮಾನ್ಯರು ಕೇಂದ್ರ ಸರ್ಕಾರದ ಕಾರ್ಯವೈಖರಿಯನ್ನು ಅರಿತುಕೊಂಡು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಅಗತ್ಯವಿದೆ ಎಂದು ಸುರೇಶ್ ಶೆಟ್ಟಿ ಬನ್ನಂಜೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...