ವಿಶ್ವಪ್ರಸಿದ್ಧ ಉಡುಪಿ ಕ್ಷೇತ್ರಕ್ಕೆ ಗೂಂಡಾಗಿರಿ ಶಾಸಕರಿಂದ ಅಪಚಾರ; ಯಶ್‌ಪಾಲ್ ಸುವರ್ಣ ವಿರುದ್ಧ ಸುರೇಶ್ ಶೆಟ್ಟಿ ಬನ್ನಂಜೆ ವಾಗ್ದಾಳಿ

Date:

ವಿಶ್ವಪ್ರಸಿದ್ಧ ಉಡುಪಿ ಕ್ಷೇತ್ರದ ಗೌರವಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಅವರ ಹೇಳಿಕೆಗಳು ಧಕ್ಕೆ ತಂದಿವೆ ಎಂದು ಆರೋಪಿಸಿ, ಉಡುಪಿ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸುರೇಶ್ ಶೆಟ್ಟಿ ಬನ್ನಂಜೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಿಕ್ಷಣ, ಧಾರ್ಮಿಕ ಕ್ಷೇತ್ರಗಳು ಹಾಗೂ ಸಾಂಸ್ಕೃತಿಕ ಪರಂಪರೆಗೆ ಹೆಸರುವಾಸಿಯಾದ ಉಡುಪಿ ಕ್ಷೇತ್ರವನ್ನು ಶಾಸಕರ ಅವಿವೇಕದ ಹೇಳಿಕೆಗಳು ಮತ್ತು ಗೂಂಡಾ ಪ್ರವೃತ್ತಿಯ ರಾಜಕಾರಣದಿಂದ ಅಪಮಾನಿಸಲಾಗಿದೆ ಎಂದು ಆರೋಪಿಸಿದ್ದಾರೆ. ಇಂತಹ ವ್ಯಕ್ತಿ ಉಡುಪಿ ಕ್ಷೇತ್ರವನ್ನು ಪ್ರತಿನಿಧಿಸುವುದು ಜನತೆಗೆ ಅಗತ್ಯವೇ ಎಂಬ ಪ್ರಶ್ನೆ ಉದ್ಭವಿಸಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಅವರ ಕುಟುಂಬದ ವಿರುದ್ಧ ಶಾಸಕ ಯಶ್‌ಪಾಲ್ ಸುವರ್ಣ ನೀಡಿರುವ ಹೇಳಿಕೆ ಅತ್ಯಂತ ಖಂಡನೀಯವಾಗಿದೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಕುಟುಂಬದ ವಿರುದ್ಧ ಇಂತಹ ಪ್ರಚೋದನಕಾರಿ ಭಾಷೆ ಬಳಸಿರುವುದು ಅವರ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಸುರೇಶ್ ಶೆಟ್ಟಿ ಟೀಕಿಸಿದ್ದಾರೆ.

ದೇಶದ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದಾಗ ಅವರ ಮೇಲೆ ಲಾಠಿಚಾರ್ಜ್ ನಡೆಸಿ ದೌರ್ಜನ್ಯ ಎಸಗಲಾಗಿದೆ. ಅಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪರವಾಗಿ ರಾಹುಲ್ ಗಾಂಧಿ ನಿಂತಿರುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ವಿದ್ಯಾರ್ಥಿಗಳ ಪ್ರತಿಭಟನೆಯಿಂದ ಕಂಗೆಟ್ಟಿರುವ ಬಿಜೆಪಿ ನಾಯಕರು ಪ್ರಚೋದನಕಾರಿ ಭಾಷಣಗಳನ್ನು ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಹಿಂದುತ್ವದ ಹೆಸರಿನಲ್ಲಿ ಹಾಗೂ ಮತಗಳ ದುರುಪಯೋಗದ ಮೂಲಕ ಅಧಿಕಾರಕ್ಕೆ ಬಂದಿರುವುದನ್ನು ಬಿಜೆಪಿ ನಾಯಕರು ಮತ್ತು ಶಾಸಕರು ನೆನಪಿಟ್ಟುಕೊಳ್ಳಬೇಕು ಎಂದು ಸುರೇಶ್ ಶೆಟ್ಟಿ ಬನ್ನಂಜೆ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...

ಚಿಂತಾಮಣಿ | ನಳಂದ ವಿದ್ಯಾ ಮಂದಿರದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಯಶಸ್ವಿ

ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು...

ಕಲಬುರಗಿ | ಸಾರ್ವಜನಿಕ ಶಿಕ್ಷಣ ಬಲವರ್ಧನೆಗೆ ಎಸ್‌ಎಫ್‌ಐ ಆಗ್ರಹ: 17ನೇ ರಾಜ್ಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಕೆ

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸುವುದು, ಕೋಮು...

ಉತ್ತರ ಕನ್ನಡ | ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾಗಿ ಗಣೇಶ ಮೊಗೇರ ನೇಮಕ

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಉತ್ತರ ಕನ್ನಡ ಜಿಲ್ಲಾ ಸಂಚಾಲಕರಾಗಿ ಭಟ್ಕಳ...