ಉಡುಪಿ | ಜು.31ರಿಂದ ‘ಸ್ವದೇಶಿ ಖಾದ್ಯ ಮೇಳ’ ಸ್ಥಳೀಯ ಉದ್ಯಮಿಗಳಿಗೆ ಪ್ರೋತ್ಸಾಹ, ಸ್ವದೇಶಿ ಉತ್ಪನ್ನಗಳಿಗೆ ಉತ್ತೇಜನ

Date:

“ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸಿ – ಸ್ಥಳೀಯ ಉದ್ಯಮಿಗಳನ್ನು ಪ್ರೋತ್ಸಾಹಿಸಿ” ಎಂಬ ಧ್ಯೇಯದೊಂದಿಗೆ ಜುಲೈ 31ರಿಂದ ಆಗಸ್ಟ್ 2ರವರೆಗೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಮೂರು ದಿನಗಳ ‘ಸ್ವದೇಶಿ ಖಾದ್ಯ ಮೇಳ’ ಆಯೋಜಿಸಲಾಗಿದೆ.

- Advertisement -

ಸಮಾಜಸೇವಕ, ಕಾಂಗ್ರೆಸ್ ಮುಖಂಡ, ಅನೇಕ ದೈವ-ದೇವಸ್ಥಾನಗಳ ಜೀರ್ಣೋದ್ಧಾರದ ರೂವಾರಿಗಳೂ ಹಾಗೂ ಕನ್ನರ್ಪಾಡಿ ಜಯದುರ್ಗ ಪರಮೇಶ್ವರಿ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷರೂ ಆದ ಕೆ. ಕೃಷ್ಣಮೂರ್ತಿ ಆಚಾರ್ಯ ಅವರ ಸಾರಥ್ಯದಲ್ಲಿ ಈ ಮೇಳ ಅದ್ದೂರಿಯಾಗಿ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಪ್ರತಿದಿನ ಬೆಳಿಗ್ಗೆ 10ರಿಂದ ರಾತ್ರಿ 10 ಗಂಟೆಯವರೆಗೆ ನಡೆಯುವ ಮೇಳದಲ್ಲಿ ಸ್ವದೇಶಿ ತಿಂಡಿ-ತಿನಿಸುಗಳು, ತುಳುನಾಡಿನ ವಿಶೇಷ ಖಾದ್ಯಗಳು, ವಿವಿಧ ಬಗೆಯ ದೋಸೆಗಳು, ಹಲಸಿನ ಹಣ್ಣಿನಿಂದ ತಯಾರಿಸಲಾದ ವೈವಿಧ್ಯಮಯ ಆಹಾರಗಳು, ಮಳೆಗಾಲದ ವಿಶೇಷ ತಿನಿಸುಗಳು ಹಾಗೂ ಸ್ಥಳದಲ್ಲೇ ತಯಾರಿಸಿ ನೀಡುವ ಹಲವು ಲೈವ್ ಫುಡ್‌ಗಳು ಲಭ್ಯವಿರಲಿವೆ.

ಇದರ ಜೊತೆಗೆ ಸಾವಯವ ಉತ್ಪನ್ನಗಳು, ಕರಕುಶಲ ವಸ್ತುಗಳು, ಫ್ಯಾನ್ಸಿ ಸಾಮಗ್ರಿಗಳು, ಗೃಹೋಪಯೋಗಿ ವಸ್ತುಗಳು ಸೇರಿದಂತೆ ವಿವಿಧ ಸ್ವದೇಶಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟವೂ ನಡೆಯಲಿದೆ.

ಮೂರು ದಿನಗಳ ಈ ಮೇಳದಲ್ಲಿ ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಸ್ಥಳೀಯ ಉದ್ಯಮಿಗಳು ಹಾಗೂ ಸಣ್ಣ ವ್ಯಾಪಾರಿಗಳಿಗೆ ತಮ್ಮ ಉತ್ಪನ್ನಗಳನ್ನು ಜನರಿಗೆ ಪರಿಚಯಿಸಿ ವ್ಯಾಪಾರ ವಿಸ್ತರಿಸಿಕೊಳ್ಳಲು ಉತ್ತಮ ವೇದಿಕೆಯನ್ನು ಒದಗಿಸುವುದು ಮೇಳದ ಪ್ರಮುಖ ಉದ್ದೇಶವಾಗಿದೆ. ಅಲ್ಲದೆ, ಸ್ಥಳೀಯ ರೈತರಿಗೆ ಪ್ರೋತ್ಸಾಹ ನೀಡುವುದು, ಸಾವಯವ ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸುವುದು ಹಾಗೂ ಆರೋಗ್ಯಕರ ಸ್ವದೇಶಿ ಆಹಾರ ಮತ್ತು ಉತ್ಪನ್ನಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...

ಚಿಂತಾಮಣಿ | ನಳಂದ ವಿದ್ಯಾ ಮಂದಿರದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಯಶಸ್ವಿ

ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು...

ಕಲಬುರಗಿ | ಸಾರ್ವಜನಿಕ ಶಿಕ್ಷಣ ಬಲವರ್ಧನೆಗೆ ಎಸ್‌ಎಫ್‌ಐ ಆಗ್ರಹ: 17ನೇ ರಾಜ್ಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಕೆ

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸುವುದು, ಕೋಮು...