ಉಡುಪಿ | ವೃದ್ಧೆಯನ್ನು ಭಾವನಾತ್ಮಕವಾಗಿ ನಂಬಿಸಿ ಚಿನ್ನದ ಸರ ಕಳವು; ಆರೋಪಿ ಬಂಧನ

Date:

ವೃದ್ಧೆಯೊಬ್ಬರನ್ನು ಭಾವನಾತ್ಮಕವಾಗಿ ನಂಬಿಸಿ ಮನೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣವನ್ನು ಹಿರಿಯಡ್ಕ ಠಾಣಾ ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿ ₹1.85 ಲಕ್ಷ ಮೌಲ್ಯದ 15 ಗ್ರಾಂ ಚಿನ್ನ ಹಾಗೂ ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್‌ನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ಬಂಧಿತ ಆರೋಪಿಯನ್ನು ಉಡುಪಿ ಜಿಲ್ಲೆಯ ಪುತ್ತೂರು ಗ್ರಾಮದ ಸುಬ್ರಹ್ಮಣ್ಯ ನಗರದ ನಿವಾಸಿ, ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಉಮೇಶ್ ಶೆಟ್ಟಿ (45) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಘಟನೆಯ ವಿವರ

ಕುಕ್ಕೆಹಳ್ಳಿ ಗ್ರಾಮದ ಬಡಪಾಲು ನಿವಾಸಿ ಬಾಬಿ ಹಾಂಡ್ತಿ (75) ಅವರ ಮನೆಯಲ್ಲಿ ಸೆಪ್ಟೆಂಬರ್ 13ರಂದು ಈ ಕಳವು ಪ್ರಕರಣ ನಡೆದಿತ್ತು. ಬೆಳಿಗ್ಗೆ ಸುಮಾರು 10.30ರ ವೇಳೆಗೆ 40ರಿಂದ 45 ವರ್ಷ ವಯಸ್ಸಿನ ವ್ಯಕ್ತಿಯೊಬ್ಬ ಮನೆಗೆ ಬಂದು, ಬಾಬಿ ಹಾಂಡ್ತಿ ಅವರ ಮಗ ದಿನೇಶ್ ಮೃತಪಟ್ಟಿರುವ ವಿಷಯ ತನಗೆ ತಿಳಿದಿದೆ ಎಂದು ಹೇಳಿದ್ದ. ಮರುದಿನ ಮನೆಗೆ ವಿಮಾ ಅಧಿಕಾರಿಗಳು ಬರಲಿದ್ದು, ಹೆಚ್ಚಿನ ಹಣ ಬಿಡುಗಡೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದ.

1013271375

ನಂತರ ಮಧ್ಯಾಹ್ನ ಬಾಬಿ ಹಾಂಡ್ತಿ ಅವರು ಕುತ್ತಿಗೆಯಲ್ಲಿದ್ದ ಸುಮಾರು ಎರಡು ಪವನ್ ಚಿನ್ನದ ಸರವನ್ನು ಮನೆಯೊಳಗಿನ ಮೇಜಿನ ಮೇಲೆ ಇಟ್ಟಿದ್ದರು. ಮಧ್ಯಾಹ್ನ 1.30ರ ಸುಮಾರಿಗೆ ಬೆಳಿಗ್ಗೆ ಬಂದಿದ್ದ ವ್ಯಕ್ತಿ ಮತ್ತೆ ಮನೆಗೆ ಬಂದು ಅವರೊಂದಿಗೆ ಮಾತನಾಡಿ ಸಮಾಧಾನಪಡಿಸಿದ್ದ. ಈ ವೇಳೆ ಮನೆಯ ಜಗುಲಿಯಲ್ಲಿ ಕುಳಿತುಕೊಳ್ಳುವಂತೆ ಹೇಳಿ, ಬಾಬಿ ಹಾಂಡ್ತಿ ಅವರು ತೋಟಕ್ಕೆ ತೆರಳಿ ದನವನ್ನು ಕೊಟ್ಟಿಗೆಗೆ ಕಟ್ಟಿ ವಾಪಸ್ ಬಂದಾಗ ಆ ವ್ಯಕ್ತಿ ನಾಪತ್ತೆಯಾಗಿದ್ದ. ಬಳಿಕ ಮೇಜಿನ ಮೇಲಿಟ್ಟಿದ್ದ ಚಿನ್ನದ ಸರವೂ ಕಾಣೆಯಾಗಿರುವುದು ಗಮನಕ್ಕೆ ಬಂದಿತ್ತು.

ಈ ಕುರಿತು ಸೆಪ್ಟೆಂಬರ್ 14ರಂದು ಬಾಬಿ ಹಾಂಡ್ತಿ ಅವರ ಪುತ್ರ ಶಂಕರ ಕುಲಾಲ್ (53) ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿ ಆರೋಪಿಯ ಪತ್ತೆ

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಸುಮಾರು 50ರಿಂದ 60 ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ತಾಂತ್ರಿಕ ಮಾಹಿತಿಯ ಆಧಾರದಲ್ಲಿ ಆರೋಪಿಯನ್ನು ಪತ್ತೆಹಚ್ಚಿದ್ದಾರೆ. ಅಕ್ಟೋಬರ್ 23ರಂದು ಉಡುಪಿ ಸುಬ್ರಹ್ಮಣ್ಯ ನಗರದ ಆತನ ಮನೆಯ ಬಳಿ ಆರೋಪಿಯನ್ನು ವಶಕ್ಕೆ ಪಡೆದು, ₹1.85 ಲಕ್ಷ ಮೌಲ್ಯದ 15 ಗ್ರಾಂ ಚಿನ್ನ ಹಾಗೂ ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್‌ನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಹಾಗೂ ಪೊಲೀಸ್ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ನೇತೃತ್ವದಲ್ಲಿ ಪಿಎಸ್‌ಐ ಪುನೀತ್ ಕುಮಾರ್ ಬಿ.ಇ. (ಕಾ.ಸು.) ಮತ್ತು ಸಿಬ್ಬಂದಿಗಳಾದ ಪ್ರವೀಣ್ ರೈ, ಪ್ರವೀಣ್ ಶೆಟ್ಟಿ, ರಮೇಶ್ ಹೆರ್ಗ, ಕೃಷ್ಣ ಪೂಜಾರಿ ಹಾಗೂ ಮಹಾಂತೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ನವೆಂಬರ್ 20, 21ರಂದು ಜೈವಿಕ ತಂತ್ರಜ್ಞಾನ ಕುರಿತು ರಾಷ್ಟ್ರೀಯ ಕಾರ್ಯಾಗಾರ

ಬಿವಿವಿಎಸ್ ರಿಸರ್ಚ್ ಸೆಂಟರ್ ಫಾರ್ ಎಕ್ಸಲೆನ್ಸ್ ವತಿಯಿಂದ ನವೆಂಬರ್ 20 ಮತ್ತು...

ರೈತರ ಸಂಕಷ್ಟ ನಿವಾರಿಸಲಿ, ಕಣ್ಣೀರು ಸುರಿಸುವ ಸಭೆಯಾಗದಿರಲಿ: ಕುರುಬೂರು ಶಾಂತಕುಮಾರ್

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಅಕ್ಟೋಬರ್ 26ರಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ...

‘ SIR’ ಫಾರಂ-7 ದುರ್ಬಳಕೆ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಿ: ಜಾಗೃತ ಕರ್ನಾಟಕ ಒತ್ತಾಯ

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ...