ಮನೆಕಳ್ಳತನ ಪ್ರಕರಣ: ಇಬ್ಬರು ಅರೆಸ್ಟ್‌; ₹23.56 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶ

Date:

ಉಡುಪಿ ನಗರ ಪೊಲೀಸ್ ಠಾಣಾ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮನೆಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಬಂಧಿಸಿ, ಒಟ್ಟು ₹23,56,230 ಮೌಲ್ಯದ ಚಿನ್ನಾಭರಣ, ಬೆಳ್ಳಿ ಆಭರಣ, ವಿದೇಶಿ ಕರೆನ್ಸಿ, ನಗದು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -

ಆರೋಪಿಗಳನ್ನು ಅರುಣ್ ಎಸ್.ವಿ. (43) ಹಾಗೂ ಕೌಶೀಕ್ (19) ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಆಗಸ್ಟ್ 23ರಂದು ಪೆರಂಪಳ್ಳಿ ಸಂತೋಷನಗರದಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪ್ರಕರಣದ ಹಿನ್ನೆಲೆ

ಆಗಸ್ಟ್ 12ರಂದು ಸನಂ (39), ಪುತ್ತೂರು ಗ್ರಾಮದ ಭಗವತಿ ಲೇಔಟ್ ನಿವಾಸಿ, ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದುಬೈಯಲ್ಲಿದ್ದ ಅವರು ಊರಿಗೆ ಮರಳಿದ್ದು, ಪತಿಯವರು ವಿದೇಶಕ್ಕೆ ತೆರಳಿದ ಬಳಿಕ ಆಗಸ್ಟ್ 8ರಂದು ಸಂಬಂಧಿಕರ ಮನೆಗೆ ತೆರಳಿದ್ದರು. ಆಗಸ್ಟ್ 11ರಂದು ಬೆಳಗ್ಗೆ 11.30ರ ಸುಮಾರಿಗೆ ಮನೆಗೆ ವಾಪಸಾದಾಗ ಮನೆಯ ಟೆರೇಸ್ ಬಾಗಿಲನ್ನು ಕಳ್ಳರು ಯಾವುದೋ ಆಯುಧದಿಂದ ಬಲವಂತವಾಗಿ ತೆರೆದಿರುವುದು ಕಂಡುಬಂದಿತ್ತು.

ಮನೆಯ ಕೋಣೆಯಲ್ಲಿದ್ದ ಕಪಾಟಿನ ಡ್ರಾಯರ್‌ನಲ್ಲಿದ್ದ 10,000 AED ವಿದೇಶಿ ಕರೆನ್ಸಿ ಹಾಗೂ ₹14,000 ನಗದು, ಒಟ್ಟು ಸುಮಾರು ₹2.14 ಲಕ್ಷ ಮೌಲ್ಯದ ಹಣ ಕಳವಾಗಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಆರೋಪಿಗಳು ಹಾಗೂ ಕಳವಾದ ಸೊತ್ತುಗಳ ಪತ್ತೆಗಾಗಿ ಮೇಲಾಧಿಕಾರಿಗಳ ನಿರ್ದೇಶನದಂತೆ ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪನಿರೀಕ್ಷಕ (ತನಿಖೆ) ಪ್ರಕಾಶ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

ಪೊಲೀಸರು ಆರೋಪಿಗಳಿಂದ ಕೆಳಗಿನ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ:

  • ವಿದೇಶಿ ಕರೆನ್ಸಿ ಮತ್ತು ನೋಟುಗಳು – ಅಂದಾಜು ₹2,00,000
  • 1 ಕೆಜಿ 360 ಗ್ರಾಂ ಬೆಳ್ಳಿ ಆಭರಣ – ಅಂದಾಜು ₹2,86,730
  • 1.45 ಗ್ರಾಂ ಚಿನ್ನದ ನಾಣ್ಯಗಳು – ಅಂದಾಜು ₹22,500
  • ಒಂದು ಆಟೋರಿಕ್ಷಾ – ಅಂದಾಜು ₹4,00,000
  • ನಗದು ₹33,000
  • ಎರಡು ಮೊಬೈಲ್ ಫೋನ್‌ಗಳು – ಅಂದಾಜು ₹13,000
  • ಕಳವು ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕ್ – ಅಂದಾಜು ₹45,000
  • ಒಂದು ವಿದೇಶಿ ಕೈಗಡಿಯಾರ – ಅಂದಾಜು ₹30,000
  • 88.400 ಗ್ರಾಂ ಚಿನ್ನ – ಅಂದಾಜು ₹13,26,000

ಒಟ್ಟಾರೆ ₹23,56,230 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಐದು ಪ್ರಕರಣಗಳಲ್ಲಿ ಆರೋಪಿಗಳ ಕೈವಾಡ

ಬಂಧಿತ ಆರೋಪಿಗಳು ಬೀಗ ಹಾಕಿರುವ ಮನೆಗಳನ್ನು ಗುರಿಯಾಗಿಸಿಕೊಂಡು, ಕಳವು ಮಾಡಿದ ಬೈಕ್‌ನಲ್ಲಿ ತೆರಳಿ ಕಳ್ಳತನ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇವರ ವಿರುದ್ಧ ಉಡುಪಿ ನಗರ ಹಾಗೂ ಮಲ್ಪೆ ಪೊಲೀಸ್ ಠಾಣೆಗಳಲ್ಲಿ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ.

  1. ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಉಡುಪಿ ಕೊಡಂಕೂರು ಗ್ರಾಮದ ಶಶಿರೇಖಾ ಅವರ ಮನೆಯಲ್ಲಿ ಕಳ್ಳತನ – ಉಡುಪಿ ನಗರ ಠಾಣೆ ಅಕ್ರಂ 107/2026.
  2. ಆಗಸ್ಟ್ 9ರಂದು ಪುತ್ತೂರು ಗ್ರಾಮದ ಭಗವತಿ ಲೇಔಟ್‌ನ ಸನಂ ಅವರ ಮನೆಯಲ್ಲಿ ಕಳ್ಳತನ – ಉಡುಪಿ ನಗರ ಠಾಣೆ ಅಕ್ರಂ 108/2026.
  3. ಜುಲೈ 10ರಂದು ನೇಜಾರು ಮಸೀದಿ ಬಳಿಯ ಗ್ಯಾರೇಜ್‌ನಿಂದ ಸಂದೇಶ್ ಅವರ ಪಲ್ಸರ್ ಬೈಕ್ ಕಳವು – ಮಲ್ಪೆ ಠಾಣೆ ಅಕ್ರಂ 82/2026.
  4. ಜುಲೈ 17ರಂದು ಕೆಳಾರ್ಕಳಬೆಟ್ಟು ನಿವಾಸಿ ತೃಪ್ತಿ ಅವಿನಾಶ್ ಅವರ ಮನೆಯಲ್ಲಿ ಕಳ್ಳತನ – ಮಲ್ಪೆ ಠಾಣೆ ಅಕ್ರಂ 85/2026.
  5. ಜುಲೈ 14ರಂದು ಕೆಳಾರ್ಕಳಬೆಟ್ಟು ನಿವಾಸಿ ರವಿ ಉಪಾಧ್ಯ ಅವರ ಮನೆಯಲ್ಲಿ ಕಳ್ಳತನ – ಮಲ್ಪೆ ಠಾಣೆ ಅಕ್ರಂ 93/2026.

ಬಂಧಿತ ಮೊದಲ ಆರೋಪಿ ಅರುಣ್ ಆಚಾರಿ ಈ ಹಿಂದೆ ಮಣಿಪಾಲ ಪೊಲೀಸ್ ಠಾಣೆಯ ಅಕ್ರಂ 176/2016ರ ಪೋಕ್ಸೋ ಪ್ರಕರಣದಲ್ಲಿ 9 ವರ್ಷಗಳ ಕಾರಾಗೃಹ ಶಿಕ್ಷೆ ಅನುಭವಿಸಿ, ಜುಲೈ 2025ರಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಐಪಿಎಸ್ ಅವರ ನಿರ್ದೇಶನದಂತೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ ಹಾಗೂ ಉಡುಪಿ ಉಪವಿಭಾಗದ ಡಿವೈಎಸ್‌ಪಿ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಉಡುಪಿ ನಗರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಪಿಎಸ್‌ಐ ಪ್ರಕಾಶ್, ಠಾಣಾ ಸಿಬ್ಬಂದಿಗಳಾದ ಪ್ರಸನ್ನ.ಸಿ., ಜೀವನ್‌ಕುಮಾರ್, ಕೃಷ್ಣದೇವಾಡಿಗ, ಆನಂದ ಗಾಣಿಗ, ಆನಂದ ಎಸ್., ಓಬಳೇಶ್, ಮಣಿಪಾಲ ಠಾಣೆಯ ಮಲ್ಲಯ್ಯ ಹಿರೇಮಠ್ ಹಾಗೂ ಹೇಮಂತ್ ಕುಮಾರ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಸಹಕರಿಸಿದ್ದಾರೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಪೊಲೀಸ್ ಅಭಿರಕ್ಷೆಗೆ ಪಡೆದು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...