ಉಡುಪಿ | ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಬೆದರಿಕೆ? ₹42.97 ಲಕ್ಷ ವಂಚನೆ ಆರೋಪ; ಇಬ್ಬರ ಬಂಧನ

Date:

ಮದುವೆ ಪ್ರಸ್ತಾಪದ ವಿಚಾರವಾಗಿ ಪರಿಚಯವಾಗಿದ್ದ ಮಹಿಳೆಯೊಬ್ಬರು ಹಾಗೂ ಇತರರು ಸೇರಿ ಬೆದರಿಕೆ ಹಾಕಿ ಹಂತ ಹಂತವಾಗಿ ₹42,97,350 ಹಣ ಪಡೆದು ವಾಪಸ್ ನೀಡದೆ ವಂಚಿಸಿದ್ದಾರೆ ಎಂದು ಆರೋಪಿಸಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದು ಬಂಧಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

ಉಡುಪಿಯ ನಿರ್ಮಾಣ್ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದಲ್ಲಿ ಕೆಲಸ ಮಾಡುತ್ತಿರುವ ಪ್ರದೀಪ್ ಕೆ. ಅವರು ನೀಡಿದ ದೂರಿನಂತೆ, 2023ರ ಕೊನೆಯ ಭಾಗದಲ್ಲಿ ಹಾಗೂ 2024ರ ಜನವರಿಯಲ್ಲಿ ಕನ್ನಡ ಜೋಡಿ ಮ್ಯಾಟ್ರಿಮೋನಿ ಆ್ಯಪ್ ಮೂಲಕ ನಾಗರತ್ನ ಎಚ್. ಎಂಬವರ ಪರಿಚಯವಾಗಿತ್ತು. ನಾಗರತ್ನ ಅವರು ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ಎಸ್. ಕಡಂಬಿ ವಿದ್ಯಾಕೇಂದ್ರದಲ್ಲಿ ಕನ್ನಡ ಭಾಷಾ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿದ್ದರು. ಮೂಲತಃ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬಡಬೆಟ್ಟು ಹೆಣ್ಬೇರು ನಿವಾಸಿಯಾಗಿರುವ ಅವರು, ಪ್ರದೀಪ್ ಅವರೊಂದಿಗೆ ವಿವಾಹದ ವಿಚಾರವಾಗಿ ಮಾತನಾಡಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಆದರೆ, ಪ್ರದೀಪ್ ಅವರು ಮದುವೆ ಪ್ರಸ್ತಾಪವನ್ನು ಒಪ್ಪದೆ ತಮ್ಮ ಜಾತಿಯ ಯುವತಿಯನ್ನು ವಿವಾಹವಾಗುವುದಾಗಿ ತಿಳಿಸಿ ನಿರಾಕರಿಸಿದ್ದರು. ಬಳಿಕ ನಾಗರತ್ನ ಅವರು ದೂರವಾಣಿ ಕರೆ ಹಾಗೂ ಸಂದೇಶಗಳ ಮೂಲಕ ಸಂಪರ್ಕ ಮುಂದುವರಿಸಿ ತಮ್ಮ ಕಷ್ಟಗಳನ್ನು ಹೇಳಿಕೊಂಡಿದ್ದರು ಎನ್ನಲಾಗಿದೆ.

ಈ ಸಂದರ್ಭ ಜನವರಿ 2024ರಿಂದ ಜನವರಿ 2026ರ ಅವಧಿಯಲ್ಲಿ ನಾಗರತ್ನ ಅವರ ಬ್ಯಾಂಕ್ ಖಾತೆ ಸೇರಿದಂತೆ, ಅವರ ಸಹೋದ್ಯೋಗಿ ಹೇಮಂತ್ ಕರ್ಕೇರಾ, ಚಿಕ್ಕಮ್ಮನ ಮಗ ಪ್ರಮೋದ್ ಹಾಗೂ ಅಕ್ಕ ರೇಣುಕಾ ಅವರ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು ₹42,97,350 ಹಣ ವರ್ಗಾಯಿಸುವಂತೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಹಣವನ್ನು ವಾಪಸ್ ಕೇಳಿದಾಗ, ತಮ್ಮಿಬ್ಬರ ನಡುವೆ ಅಕ್ರಮ ಸಂಬಂಧವಿದೆ ಎಂದು ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಅಲ್ಲದೆ, ಪ್ರದೀಪ್ ಕೆಲಸ ಮಾಡುತ್ತಿರುವ ಉಡುಪಿ ಕಚೇರಿಗೆ ಬಂದು ಸಿಬ್ಬಂದಿ ಹಾಗೂ ಗ್ರಾಹಕರ ಎದುರು ಮಾನಹಾನಿ ಮಾಡುವುದಾಗಿ ಮತ್ತು ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದಲ್ಲದೆ, ಸಹಕಾರಿ ಸಂಸ್ಥೆಯ ಹಣ ದುರುಪಯೋಗಪಡಿಸಿಕೊಂಡು ವಂಚನೆ ಮಾಡುತ್ತಿದ್ದಾರೆ ಎಂದು ಸಂಸ್ಥೆಯ ಮುಂದೆ ಆರೋಪಿಸಿ, ಸುಳ್ಳು ಪತ್ರ ಬರೆದು ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಈ ಸಂಬಂಧ ನಾಗರತ್ನ ಎಚ್., ಹೇಮಂತ್ ಕರ್ಕೇರಾ, ಪ್ರಮೋದ್ ಹಾಗೂ ರೇಣುಕಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರದೀಪ್ ದೂರು ನೀಡಿದ್ದರು. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 135/2026ರಂತೆ ಭಾರತೀಯ ನ್ಯಾಯ ಸಂಹಿತೆಯ ಕಲಂ 61(2), 316(2), 318(2), 308(2), 308(6) ಹಾಗೂ 3(5)ರಡಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಇಬ್ಬರ ಬಂಧನ

ಪ್ರಕರಣದ ಆರೋಪಿಗಳ ಪತ್ತೆಗಾಗಿ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐಗಳಾದ ಭರತೇಶ್ ಕಂಕಣವಾಡಿ ಮತ್ತು ರತ್ನಾಕರ ಕೆ. ಸೇರಿದಂತೆ ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು.

ಈ ತಂಡವು ಅಕ್ಟೋಬರ್ 26ರಂದು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಹಾಗೂ ಬಸವೇಶ್ವರ ನಗರದಲ್ಲಿ ಆರೋಪಿಗಳಾದ ನಾಗರತ್ನ ಎಚ್. (42) ಮತ್ತು ಹೇಮಂತ್ (41) ಅವರನ್ನು ವಶಕ್ಕೆ ಪಡೆದು ತನಿಖಾಧಿಕಾರಿಯ ಮುಂದೆ ಹಾಜರುಪಡಿಸಿತು. ಬಳಿಕ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣದಲ್ಲಿ ಹಣ ವರ್ಗಾವಣೆ, ಬೆದರಿಕೆ ಹಾಗೂ ವಂಚನೆಗೆ ಸಂಬಂಧಿಸಿದ ಆರೋಪಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಜನನ–ಮರಣ ನೋಂದಣಿಯಲ್ಲಿ ಲೋಪಕ್ಕೆ ಅವಕಾಶ ಬೇಡ: ಡಿಸಿ ಆನಂದ ಕೆ. ಸೂಚನೆ

ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಿರ್ವಹಿಸುವುದರ ಜೊತೆಗೆ, ಘಟನೆ...

ಬಾಗಲಕೋಟೆ | ಕಲಾದಗಿಯಲ್ಲಿ 12 ಕ್ವಿಂಟಲ್ ಅಕ್ರಮ ಪಡಿತರ ಅಕ್ಕಿ ಜಪ್ತಿಗೆ ಸೂಚನೆ

ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಕಲಾದಗಿ ಪಟ್ಟಣದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ...

ಬಾಗಲಕೋಟೆ | ಭ್ರಷ್ಟಾಚಾರ ನಿರ್ಮೂಲನೆಗೆ ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಬೇಕು: ನ್ಯಾಯಾಧೀಶ ಆರ್.ಕೆ.ಜಿ.ಎಂ. ಮಹಾಸ್ವಾಮೀಜಿ

ಭ್ರಷ್ಟಾಚಾರ ನಿರ್ಮೂಲನೆ ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ. ಸಮಾಜದ ಪ್ರತಿಯೊಬ್ಬರೂ ಭ್ರಷ್ಟಾಚಾರದ...