ಉಡುಪಿ : ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು

Date:

ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ ಸಮೀಪ ಹೆರಂಜೆಯಲ್ಲಿ ಸಂಭವಿಸಿದೆ.

- Advertisement -

ಮೃತ ಬಾಲಕನನ್ನು ದಕ್ಷ್ ಪೂಜಾರಿ (1.5) ಎಂದು ಗುರುತಿಸಲಾಗಿದೆ. ಈತ ಹೆರಂಜೆಯ ಪ್ರಶಾಂತ್ ಪೂಜಾರಿ ಹಾಗೂ ಸುಚಿತ್ರ ಪೂಜಾರಿ ದಂಪತಿಯ ಪುತ್ರನಾಗಿದ್ದಾನೆ. ದಕ್ಷ್ ಗೆ ದಿಯಾ (6) ಎಂಬ ಅಕ್ಕ ಇದ್ದು, ಆಕೆ ಬ್ರಹ್ಮಾವರದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಪ್ರಶಾಂತ್ ಪೂಜಾರಿ ಅವರು ಕಳೆದ ಸುಮಾರು 13 ವರ್ಷಗಳಿಂದ ಬ್ರಹ್ಮಾವರ ಗಾಂಧಿ ಮೈದಾನದ ಸಮೀಪ ಸಣ್ಣ ಗಾಡಿಯಲ್ಲಿ ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದು, ಕುಟುಂಬ ಜೀವನ ಸಾಗಿಸುತ್ತಿದ್ದರು.

ಮಾಹಿತಿಗಳ ಪ್ರಕಾರ ಮಂಗಳವಾರ ಬೆಳಿಗ್ಗೆ ಸುಮಾರು 8.15 ಗಂಟೆಯ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಗಳು ದಿಯಾಳನ್ನು ಶಾಲಾ ಬಸ್ಸಿಗೆ ಕಳುಹಿಸಲು ಸುಚಿತ್ರ ಪೂಜಾರಿ ಅವರು ಮಗ ದಕ್ಷ್ನನ್ನು ಕೈಯಲ್ಲಿ ಎತ್ತಿಕೊಂಡು ಮನೆಯಿಂದ ಹೊರಟಿದ್ದರು. ಈ ವೇಳೆ ರಸ್ತೆಯ ಬದಿಯಲ್ಲಿದ್ದ ಸುಮಾರು 40 ಅಡಿ ಎತ್ತರದ ತೆಂಗಿನ ಮರದಿಂದ ತೆಂಗಿನಕಾಯಿ ಕೆಳಗೆ ಬಿದ್ದು ದಕ್ಷ್ ತಲೆಗೆ ಬಡಿದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ತಕ್ಷಣ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ವೈದ್ಯರು ಶಸ್ತ್ರಚಿಕಿತ್ಸೆಯನ್ನೂ ನಡೆಸಿದ್ದರೂ, ತಲೆಯ ಮೆದುಳಿಗೆ ತೀವ್ರ ಪೆಟ್ಟಾಗಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಮಲ್ಹಾರ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ...

ಉಡುಪಿ | ಜ್ಞಾನೇಶ್ ಕುಮಾರ್ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹಿಸಿ ಆಕ್ರೋಶ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ...

ಕಲಬುರಗಿ | ನಕಲಿ ಎಸ್‌ಟಿ ಪ್ರಮಾಣ ಪತ್ರಗಳಿಗೆ ಕಡಿವಾಣ, ಮೀಸಲಾತಿ ರಕ್ಷಣೆಗೆ ಆಗ್ರಹ

ನಕಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಜಾತಿ ಪ್ರಮಾಣಪತ್ರಗಳ ಹಾವಳಿಗೆ ಕಡಿವಾಣ ಹಾಕಬೇಕು...

ಕಲಬುರಗಿ | ಸಿಮೆಂಟ್ ಕಂಪನಿಯಲ್ಲಿ ಡೀಸೆಲ್ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಚಿಂಚೋಳಿ ತಾಲೂಕಿನ ಮಿರಿಯಾಣ ಪೊಲೀಸ್ ಠಾಣೆ ವ್ಯಾಪ್ತಿಯ ಸಿಮೆಂಟ್ ಕಂಪನಿಯ ಆವರಣದಲ್ಲಿ...