ಉಡುಪಿ | ಉಚ್ಚಿಲ ದಸರಾ ಶೋಭಾಯಾತ್ರೆ: ಅ. 21ರಂದು ವಾಹನ ಸಂಚಾರಕ್ಕೆ ಬದಲಿ ಮಾರ್ಗ

Date:

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ-ಉಚ್ಚಿಲ ದಸರಾ 2026ರ ಅಂಗವಾಗಿ ಅಕ್ಟೋಬರ್ 21ರಂದು ಬೃಹತ್ ಶೋಭಾಯಾತ್ರೆ ನಡೆಯಲಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾವಣೆ ಹಾಗೂ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.

- Advertisement -

ಶೋಭಾಯಾತ್ರೆಯು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 3ರಿಂದ ರಾತ್ರಿ 11ರವರೆಗೆ ಕೆಲವು ಮಾರ್ಗಗಳಲ್ಲಿ ಘನ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ ಮಾತುಗಳಿಂದ ಹಾಲಕ್ಕಿಗಳ ಮತ ದೋಚಿ ಗೆದ್ದವರು ಕೃತಘ್ನರಾಗಿದ್ದಾರೆ. ಎಸ್ಟಿ ಮೀಸಲಾತಿ ಸೌಲಭ್ಯ ಅಷ್ಟು ಸುಲಭಕ್ಕೆ ಹಾಕ್ಕಿಗಳಿಗೆ ದಕ್ಕಲು ಪ್ರಬಲ ಮೇಲ್ವರ್ಗದ...

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳು ಮಧ್ಯಾಹ್ನ 3ರಿಂದ ರಾತ್ರಿ 11ರವರೆಗೆ ಕಟಪಾಡಿ-ಶಿರ್ವ-ಬೆಳ್ಮಣ್-ಪಡುಬಿದ್ರಿ ಮಾರ್ಗವಾಗಿ ಸಂಚರಿಸಬೇಕು. ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುವ ಘನ ವಾಹನಗಳ ಸಂಚಾರಕ್ಕೂ ಇದೇ ಅವಧಿಯಲ್ಲಿ ನಿರ್ಬಂಧ ವಿಧಿಸಲಾಗಿದೆ.

WhatsApp Image 2026 10 20 at 4.42.13 PM

ಉಡುಪಿಯಿಂದ ಬಜ್ಪೆ ವಿಮಾನ ನಿಲ್ದಾಣಕ್ಕೆ ತೆರಳುವ ವಾಹನಗಳು ಕಟಪಾಡಿ-ಶಿರ್ವ-ಬೆಳ್ಮಣ್-ಮುಂಡ್ಕೂರು ಮಾರ್ಗವನ್ನು ಬಳಸುವಂತೆ ಸೂಚಿಸಲಾಗಿದೆ.

ಟ್ರಕ್, ಲಾರಿ, ಟ್ಯಾಂಕರ್ ಸೇರಿದಂತೆ ಘನ ವಾಹನಗಳ ಚಾಲಕರು ರಾತ್ರಿ 9 ಗಂಟೆಯವರೆಗೆ ಕುಂದಾಪುರ ಮತ್ತು ಉಡುಪಿ ವ್ಯಾಪ್ತಿಯ ಟ್ರಕ್ ಬೇಗಳಲ್ಲಿ ವಾಹನಗಳನ್ನು ನಿಲುಗಡೆಗೊಳಿಸಿ, ಬಳಿಕ ಪ್ರಯಾಣ ಮುಂದುವರಿಸಬೇಕು. ಉಡುಪಿಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರಿಗೆ ತೆರಳುವ ರಾತ್ರಿ ಪ್ರಯಾಣಿಕ ಬಸ್ಸುಗಳು ರಾತ್ರಿ 9 ಗಂಟೆಯ ನಂತರ ಸಂಚರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮಗಳು 1989ರ ನಿಯಮ 221(5)(ಎ)ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಶೋಭಾಯಾತ್ರೆಯ ಸಂದರ್ಭದಲ್ಲಿ ಸಾರ್ವಜನಿಕರು ಸಂಚಾರ ನಿಯಮಗಳನ್ನು ಪಾಲಿಸಿ, ನಿಗದಿಪಡಿಸಿರುವ ಬದಲಿ ಮಾರ್ಗಗಳನ್ನು ಬಳಸುವ ಮೂಲಕ ಸುಗಮ ಸಂಚಾರಕ್ಕೆ ಸಹಕರಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಭರವಸೆಗಳನ್ನು ಈಡೇರಿಸಲು ನ.26ರವರೆಗೆ ಗಡುವು: ಕಬ್ಬು ಬೆಳೆಗಾರರ ಪ್ರತಿಭಟನೆ ತಾತ್ಕಾಲಿಕ ಅಂತ್ಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ನಡೆದ ಸುದೀರ್ಘ ಚರ್ಚೆಯ ಬಳಿಕ...

ಹಾಸನ | ಉಸ್ತುವಾರಿ ಸಚಿವರ ಕಾರ್ಯವೈಖರಿ ಬಗ್ಗೆ ಬೇಸರ; ಶಾಸಕ ಸ್ವರೂಪ್ ಪ್ರಕಾಶ್

ಜಿಲ್ಲೆಗೆ ಸಚಿವ ಶಿವಲಿಂಗೇಗೌಡರು ದೊಡ್ಡಮಂಡಿಗನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಂಬಂಧಪಟ್ಟ...