ಉಡುಪಿ | ಮೇ 18ರಂದು ಬೃಹತ್ ಉದ್ಯೋಗ ಮೇಳ

Date:

ಉಡುಪಿ ನಗರದ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ನಡೆಯಲಿರುವ ಮಹಾರುದ್ರಯಾಗದ ಪ್ರಯುಕ್ತ ಮೇ 18ರಂದು ಕೊಡವೂರಿನ ವಿಪ್ರಶ್ರೀ ಸಭಾಭವನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಉದ್ಯೋಗ ಮೇಳದ ಅಧ್ಯಕ್ಷೆ ಡಾ. ದಿವ್ಯಾ ರಾಣಿ ತಿಳಿಸಿದ್ದಾರೆ.

- Advertisement -

ಉದ್ಯೋಗ ಮೇಳ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೇಳದಲ್ಲಿ 60ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, 6,000ಕ್ಕೂ ಅಧಿಕ ಉದ್ಯೋಗಾವಕಾಶಗಳು ಲಭ್ಯವಿರಲಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಮ್ಯಾನೇಜ್‌ಮೆಂಟ್, ಎಂಜಿನಿಯರಿಂಗ್, ಉತ್ಪಾದನಾ ವಲಯ, ಆರೋಗ್ಯ ಸೇವೆ, ಹೋಟೆಲ್, ಬ್ಯಾಂಕಿಂಗ್ ಮತ್ತು ಹಣಕಾಸು, ಮಾರಾಟ ಮತ್ತು ಮಾರುಕಟ್ಟೆ, ತಾಂತ್ರಿಕ ಸೇವೆಗಳು, ಲಾಜಿಸ್ಟಿಕ್ಸ್ ಸೇರಿದಂತೆ ವಿವಿಧ ಕ್ಷೇತ್ರಗಳ ಕಂಪನಿಗಳು ಮೇಳದಲ್ಲಿ ಭಾಗವಹಿಸಲಿವೆ ಎಂದು ಹೇಳಿದರು.

ಟೊಯೋಟಾ-ಕಿರ್ಲೋಸ್ಕರ್, ಇನ್‌ವೆಂಜರ್ ಟೆಕ್ನಾಲಜೀಸ್, ಮೆಜೆಸ್ಟಿಕ್ ಗ್ಲೋಬಲ್ ಲಾಜಿಸ್ಟಿಕ್ಸ್, ಅನಾನ್ ಗ್ರೂಪ್, ವಿನ್‌ಮ್ಯಾನ್ ಸಾಫ್ಟ್‌ವೇರ್, ಅಮೆಜಾನ್, ಬ್ರೇವರಾ ಟೆಕ್ನಾಲಜೀಸ್, ವಿಆರ್‌ಎನ್ ಇನ್ಫೋಟೆಕ್, ಡಾ. ರೆಡ್ಡೀಸ್ ಫೌಂಡೇಶನ್, ಸ್ವಿಗ್ಗಿ, ಎಚ್‌ಡಿಎಫ್‌ಸಿ ಬ್ಯಾಂಕ್, ಮಣಿಪಾಲ್ ಪೇಮೆಂಟ್ ಅಂಡ್ ಐಡೆಂಟಿಟಿ ಹಾಗೂ ಅಕೋಲೇಡ್ ಸೇರಿದಂತೆ ಅನೇಕ ಪ್ರಮುಖ ಕಂಪನಿಗಳು ಪಾಲ್ಗೊಳ್ಳಲಿವೆ ಎಂದು ತಿಳಿಸಿದರು.

ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್, ಐಟಿಐ, ಪಿಯುಸಿ, ಎಸ್‌ಎಸ್‌ಎಲ್‌ಸಿ ಹಾಗೂ ವಿವಿಧ ಕೌಶಲ್ಯ ಆಧಾರಿತ ಅರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳು ಲಭ್ಯವಿರಲಿವೆ. ಅಭ್ಯರ್ಥಿಗಳು ನೇರ ಸಂದರ್ಶನಗಳಲ್ಲಿ ಭಾಗವಹಿಸುವುದರ ಜೊತೆಗೆ ಕಂಪನಿ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿ ಬೆಂಗಳೂರು, ಮೈಸೂರು, ಮಂಗಳೂರು ಹಾಗೂ ಉಡುಪಿಯ ಉದ್ಯೋಗಾವಕಾಶಗಳ ಕುರಿತು ಮಾಹಿತಿ ಪಡೆಯಬಹುದು ಎಂದರು.

ಈ ಬಾರಿ ವಿಶೇಷವಾಗಿ ಸ್ಟಾರ್ಟ್‌ಅಪ್ ಹಾಗೂ ಸ್ವಯಂ ಉದ್ಯೋಗ ಮಾರ್ಗದರ್ಶನ ಕಾರ್ಯಕ್ರಮಗಳನ್ನು ಪರಿಚಯಿಸಲಾಗುತ್ತಿದೆ. ಮಣಿಪಾಲ್ ಯುನಿವರ್ಸಲ್ ಬಿಸಿನೆಸ್ ಇಂಕ್ಯೂಬೇಟರ್ಸ್, ಯೆನೆಪೊಯ ಟೆಕ್ನಾಲಜಿ ಇಂಕ್ಯೂಬೇಟರ್ ಹಾಗೂ ರುಡೈಟಿ ಸಂಸ್ಥೆಗಳು ಉದ್ಯಮ ಆರಂಭಿಸಲು ಬಯಸುವ ಯುವಕರಿಗೆ ಮಾರ್ಗದರ್ಶನ ಮತ್ತು ಮೆಂಟರ್‌ಶಿಪ್ ನೀಡಲಿವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರೇವತಿ ನಾಡ್ಗಿರಿ, ಸಾತ್ವಿಕ್ ಎಸ್. ಆಚಾರ್ಯ ಹಾಗೂ ಧೃವ್ ರಾಜ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...