ಉಡುಪಿ | ಸರಕಾರದ ಯೋಜನೆಗಳು ನ್ಯಾಯಯುತವಾಗಿ ಸಮುದಾಯದ ಕೈ ಸೇರಿದಾಗ ಜಯಂತಿ ಆಚರಣೆ ಅರ್ಥಪೂರ್ಣ

Date:

ಜಗತ್ತು ಕಂಡ ಸರ್ವಶ್ರೇಷ್ಠ ಪುರುಷ ಶ್ರೀರಾಮ. ಶ್ರೀ ರಾಮನ ಆದರ್ಶಗಳನ್ನು ನಮಗೆ ತಿಳಿಸಿ ಕೊಟ್ಟವರು ಮಹರ್ಷಿ ವಾಲ್ಮೀಕಿ. ಸಮಾಜದಲ್ಲಿ ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಉತ್ಕೃಷ್ಟ ಆಡಳಿತ ನೀಡಿದ ಶ್ರೀರಾಮನ ವ್ಯಕ್ತಿತ್ವವನ್ನು ಜಗತ್ತಿಗೆ ಪರಿಚಯಿಸಿದ ಮಹರ್ಷಿ ವಾಲ್ಮೀಕಿಯವರ ಹೆಸರಿನಲ್ಲಿ ನೀಡಲಾಗುವ ಸರಕಾರದ ಯೋಜನೆಗಳು ನ್ಯಾಯಯುತವಾಗಿ ಸಮುದಾಯದ ಕೈ ಸೇರಿದಾಗ ಜಯಂತಿ ಆಚರಣೆಗಳು ಅರ್ಥಪೂರ್ಣವಾಗುತ್ತದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಅಭಿಪ್ರಾಯಪಟ್ಟರು.

- Advertisement -

ಅವರು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ನಗರಸಭೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಸಂಘಟನೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಪಂಚಾಯತ್ ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಸರಕಾರವು ಪ.ಜಾತಿ ಹಾಗೂ ಪ.ಪಂಗಡದ ಸಮುದಾಯದವರಿಗಾಗಿ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸುವ ಕೆಲಸಗಳನ್ನು ಇಲಾಖೆಗಳು ಕೈಗೊಳ್ಳಬೇಕು. ಆಚರಣೆಗಳು ಕೇವಲ ಮಾಲಾರ್ಪಣೆಗೆ ಸೀಮಿತವಾಗದೆ ಯೋಜನೆಗಳ ಲಾಭ ಸಮುದಾಯದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ಕೊರಗ ಸಮುದಾಯವು ಕಳೆದ ಕೆಲವು ತಿಂಗಳುಗಳಿಂದ ವಿಮೆ, ಆಹಾರದ ಕಿಟ್, ಹಾಗೂ ವಿದ್ಯಾರ್ಥಿವೇತನ ದೊರಕದೆ ಸಮಸ್ಯೆ ಎದುರಿಸುತ್ತಿದೆ. ಈ ಬಗ್ಗೆ ಸರಕಾರದ ಗಮನ ಸೆಳೆಯಲಾಗುವುದು. ಪ.ಜಾತಿ ಹಾಗೂ ಪ.ಪಂಗಡದ ಸಮುದಾಯಗಳಿಗೆ ನೀಡಲಾಗುತ್ತಿರುವ ಅನುದಾನಗಳು ಕ್ಲಪ್ತ ಸಮಯಕ್ಕೆ ಅವರಿಗೆ ತಲುಪಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದ ಅವರು ಮುಂದಿನ ದಿನಗಳಲ್ಲಿ ಸಮುದಾಯಗಳಿರುವಲ್ಲಿಗೆ ತೆರಳಿ ಅವರ ಜೊತೆಗೆ ಕಾರ್ಯಕ್ರಮಗಳನ್ನು ಆಚರಿಸಲು ಪ್ರಯತ್ನಿಸಲಾಗುವುದು ಎಂದರು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮಾತನಾಡಿ, ಮಹರ್ಷಿ ವಾಲ್ಮೀಕಿಗಳ ಜೀವನವು ನಮಗೆ ಬದುಕಿನ ಬದಲಾವಣೆಯ ಘಟ್ಟಗಳನ್ನು ತಿಳಿಸುತ್ತದೆ. ಮೊದಲನೆಯದು ನಮ್ಮ ಕರ್ಮಗಳಿಗೆ ನಾವೇ ಜವಾಬ್ದಾರರು ನಮ್ಮ ಕರ್ಮಗಳನ್ನು ಯಾರೂ ನಮ್ಮೊಂದಿಗೆ ಹಂಚಿಕೊಳ್ಳುವುದಿಲ್ಲ. ನಾವು ಮಾಡುವ ಸತ್ಕರ್ಮಗಳು ಬದುಕಿದ್ದಾಗಲೂ ನಾವು ಈ ಜಗತ್ತನ್ನು ಬಿಟ್ಟು ಹೋದಾಗಲೂ ನಮ್ಮ ಜೊತೆ ಬರುತ್ತದೆ. ಎರಡನೆಯದಾಗಿ ಒಂದು ಕ್ಷಣದ ಒಂದು ಆಲೋಚನೆ ಹೇಗೆ ನಮ್ಮ ಬದುಕನ್ನು ಬದಲಾಯಿಸಬಹುದು ಎನ್ನುವುದನ್ನು ತೋರಿಸಿಕೊಡುತ್ತದೆ. ನಮ್ಮ ಜೀವನದಲ್ಲಿ ನಾವು ಒಂದು ಕ್ಷಣದಲ್ಲಿ ತೆಗೆದುಕೊಂಡ ಒಳ್ಳೆಯ ಅಥವಾ ಕೆಟ್ಟ ನಿರ್ಧಾರಗಳು ನಮ್ಮ ಬದುಕನ್ನೇ ಬದಲಾಯಿಸಬಲ್ಲವು ಎನ್ನುವ ದೃಷ್ಟಾಂತವನ್ನು ವಾಲ್ಮೀಕಿಗಳ ಜೀವನ ನಮಗೆ ತೋರಿಸಿಕೊಡುತ್ತದೆ. ಪ್ರಯತ್ನಪೂರ್ವಕವಾಗಿ ನಾವು ಸದಾ ಇತರರಿಗೆ ಒಳ್ಳೆಯದನ್ನೇ ಮಾಡಬೇಕು ಎಂದರು.

ಶ್ರೀನಾರಾಯಣಗುರು ಅಭಿವೃದ್ದಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮಾತನಾಡಿ, ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಆಗಿನ ಜನಜೀವನವನ್ನು ನಮಗೆ ತಿಳಿಸಿಕೊಟ್ಟವರು ಆದಿಕವಿ ಮಹರ್ಷಿ ವಾಲ್ಮೀಕಿ. ಮಹನೀಯರು ರಾಮಾಯಣ, ಮಹಾಭಾರತ ಮಾಹಾಕಾವ್ಯಗಳ ಮೂಲಕ ಮನುಷ್ಯನೊಳಗಿರುವ ವಿಕೃತಿಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ನಮ್ಮೊಳಗಿನ ವಿಕೃತಿಗಳು ಮರೆಯಾಗಿ ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ವಾಲ್ಮೀಕಿ, ಶ್ರೀರಾಮ, ಸೀತೆ, ಭರತನಂತಹ ಮಹಾಪುರುಷರ ಜೀವನ ನಮಗೆ ಮಾದರಿಯಾಗಬೇಕು. ಬೇಡನ ಬಾಣಕ್ಕೆ ಬಲಿಯಾದ ಕ್ರೌಂಚ ಪಕ್ಷಿಗಳ ಅಗಲುವಿಕೆಯ ನೋವಿನಿಂದ ಹುಟ್ಟಿದ ಶ್ಲೋಕವೊಂದು ಮುಂದೆ ನಾರದರ ಮಾರ್ಗದರ್ಶನದಿಂದ ರಾಮಾಯಣ ಮಹಾಕಾವ್ಯವಾಗಿ ರೂಪುತಳೆಯಿತು. ವಾಲ್ಮೀಕಿಯವರ ಅಂತರಂಗದೊಳಗಿನ ದಯೆ-ಕರುಣೆ ರಾಮಾಯಣ ಮಾಹಾಕಾವ್ಯ ರಚಿಸಲು ಸ್ಪೂರ್ತಿಯಾಯಿತು. ಹಲವಾರು ಕವಿಗಳು ರಾಮಾಯಣವನ್ನು ಮರುರಚಿಸಿದ್ದಾರೆ ಆದರೆ ವಾಲ್ಮೀಕಿಯವರು ರಚಿಸಿದ ರಾಮಾಯಣ ಅದ್ವಿತೀಯವಾಗಿದ್ದು ಅದಕ್ಕೆ ಸಾಟಿ ಇಲ್ಲ ಎಂದರು.

WhatsApp Image 2026 10 26 at 7.58.08 PM

ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಉಪ ಪ್ರಾಂಶುಪಾಲ ಚಂದ್ರಶೇಖರ್ ಶೆಟ್ಟಿ ಮಹರ್ಷಿ ವಾಲ್ಮೀಕಿ ಅವರ ಜೀವನ ಮತ್ತು ವ್ಯಕ್ತಿತ್ವದ ಕುರಿತು ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಹತ್ತನೇ ತರಗತಿಯಲ್ಲಿ 619 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಚೇರ್ಕಾಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಮಂಜುನಾಥ್ ಇವರಿಗೆ 1 ಲಕ್ಷ ರೂ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. ಪದವಿಪೂರ್ವ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮನೀಷಾ, ಅಶ್ವಿತಾ, ಶ್ರಾವ್ಯ, ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸ್ವಸ್ತಿ, ಲಾವಣ್ಯ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ನೋಣಯ್ಯ ರೆಂಜಾಳ, ಡಾ.ಅಶ್ವಿತಾ ಹಾಗೂ ಮಹಾಬಲ ನಾಯ್ಕ್ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಪರಿಶಿಷ್ಟ ವರ್ಗಗಳ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ಸಮನ್ವಯಾಧಿಕಾರಿ ನಾರಾಯಣಸ್ವಾಮಿ ಸ್ವಾಗತಿಸಿ, ಐಟಿಡಿಪಿ ಸಿಬ್ಬಂದಿ ಶ್ರೀದೇವಿ ನಿರೂಪಿಸಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅ.27ರಂದು ಕಾಂಗ್ರೆಸ್‌ನ ‘ಸಂಘಟನಾ ಸೃಜನ್-2’ ಅಭಿಯಾನ ಸಭೆ

ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಅಕ್ಟೋಬರ್ 27ರಂದು (ಮಂಗಳವಾರ) ಬೆಳಿಗ್ಗೆ 11...

ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರೂಪಿಸಿದ...

ಯಾದಗಿರಿ | ಮೂರು ದಶಕಗಳಿಂದ ಡಾಂಬರು ಕಾಣದ ರಸ್ತೆ: ರೈತರ ಸಂಚಾರಕ್ಕೆ ಸಂಕಷ್ಟ

ಶಹಾಪುರ ತಾಲೂಕಿನ ತಿಪ್ಪನಹಳ್ಳಿ ಮಾರ್ಗವಾಗಿ ಅನವಾರ, ಬೊಮ್ಮನಹಳ್ಳಿ, ಅಯ್ಯಾಳ ಕೆ.ಟಿ., ವಡಿಗೇರ,...

ಉಡುಪಿ | ಸಾರಾಯಿ ಅಂಗಡಿಗೆ ಜಾಗವಿದೆ, ದಲಿತರಿಗೆ ನಿವೇಶನವಿಲ್ಲವೇ? : ಕೃಷ್ಣ ಮೂಡುಬೆಳ್ಳೆ

ಡಿಸಿ ಮನ್ನಾ ಜಮೀನು ಹಾಗೂ ವಸತಿ ನಿವೇಶನಗಳ ಹಕ್ಕುಪತ್ರ ವಿತರಣೆಯಲ್ಲಿ ದಲಿತರಿಗೆ...