ಉಡುಪಿ | ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ: ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಪ್ರಾಣಾಪಾಯದಿಂದ ಪಾರು

Date:

ವೇಗವಾಗಿ ಬಂದ ಕೆಎಸ್ಆರ್‌ಟಿಸಿ ವೋಲ್ವೋ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

ಉಡುಪಿಯ ನಿಟ್ಟೂರು ಸಮೀಪ ಬೈಕ್‌ನಲ್ಲಿ ಸಂಚರಿಸುತ್ತಿದ್ದ ವಿಶು ಶೆಟ್ಟಿ ಅವರ ಬೈಕ್‌ಗೆ ವೇಗವಾಗಿ ಬಂದ ಕೆಎಸ್ಆರ್‌ಟಿಸಿ ವೋಲ್ವೋ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಬಸ್ ನಿಲ್ಲಿಸದೆ ಚಾಲಕ ವಾಹನವನ್ನು ಚಲಾಯಿಸಿಕೊಂಡು ತೆರಳಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಇತ್ತ ಬೆಲೆ ಏರಿಕೆಯ ‘ಬರೆ’, ಅತ್ತ 1 ಟ್ರಿಲಿಯನ್‌...

ಒಂದೆಡೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದ್ದರೆ, ಇನ್ನೊಂದೆಡೆ ರಾಜ್ಯ ಕಾಂಗ್ರೆಸ್‌ ಸರ್ಕಾರ "ಟ್ರಿಲಿಯನ್ ಡಾಲರ್ ಆರ್ಥಿಕತೆ"ಯ ಭವ್ಯ ಚಿತ್ರಣವನ್ನು ಸಾರ್ವಜನಿಕರ ಮುಂದಿಡುತ್ತಿವೆ. ಸದ್ಯ ಕರ್ನಾಟಕದಲ್ಲಿ ಕಂಡುಬರುತ್ತಿರುವ...

ಮಧ್ಯಂತರ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಗರ್ವಭಂಗ: ಸೊಕ್ಕು ಮುರಿದ...

ಈ ಚುನಾವಣಾ ಫಲಿತಾಂಶದಿಂದ ಟ್ರಂಪ್ ಅವರು ತಮ್ಮ ಅಧ್ಯಕ್ಷ ಸ್ಥಾನವನ್ನು ಕಳೆದುಕೊಳ್ಳುವುದಿಲ್ಲ. ಆದರೆ, ಮುಂದಿನ ಜನವರಿ 3ರಂದು ಹೊಸ ಕಾಂಗ್ರೆಸ್ (ಸಂಸತ್ತು) ಅಸ್ತಿತ್ವಕ್ಕೆ ಬಂದ ಬಳಿಕ ಅವರ ಆಡಳಿತದ ಹಾದಿ ಅತ್ಯಂತ ದುರ್ಗಮವಾಗಲಿದೆ....

ಅದೇ ರಸ್ತೆಯಲ್ಲಿ ಬರುತ್ತಿದ್ದ ಅಂಬಲಪಾಡಿಯ ಪಡುಮನೆ ಸುರೇಶ್ ಅವರು ಗಾಯಗೊಂಡಿದ್ದ ವಿಶು ಶೆಟ್ಟಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಅಪಘಾತದಲ್ಲಿ ವಿಶು ಶೆಟ್ಟಿ ಅವರ ಕೈ ಹಾಗೂ ಕಾಲಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೈದ್ಯರು ಅವರಿಗೆ ಸುಮಾರು 20 ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ.

ಘಟನೆ ಕುರಿತು ಸಂಚಾರಿ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಮುಂದಿನ ಕ್ರಮದ ನಿರೀಕ್ಷೆಯಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಹಾಲು, ಬಸ್ ದರ ಏರಿಕೆ ಹಿಂಪಡೆಯಲು ಅಪ್ಪುರಾಜ್ ನಿಮಾದಾರ ಆಗ್ರಹ

ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೇರುತ್ತಿರುವ...

ಚಿಕ್ಕಮಗಳೂರು | ಯುವತಿ ಸಾವು : ಠಾಣೆ ಎದುರು ಪ್ರತಿಭಟನೆ 

ವಿಷ ಸೇವಿಸಿ ಯುವತಿ ಸಾವನಪ್ಪಿರುವ ಘಟನೆ ಬಗ್ಗೆ ಠಾಣೆ ಮುಂದೆ ಪ್ರತಿಭಟನೆ...

ಚಿಕ್ಕಮಗಳೂರು | ಸೈಬರ್ ವಂಚನೆ: 1.68 ಲಕ್ಷ ಹಣ ದುರ್ಬಳಕೆ

ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಬಸ್‌ನಲ್ಲಿ ಪ್ರಯಾಣಿಸುವಾಗ ಆಕಸ್ಮಿಕವಾಗಿ ಕಳೆದುಹೋದ ಮೊಬೈಲ್ ಫೋನನ್ನು...