ಉಡುಪಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ

Date:

SIR (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆ ರದ್ದುಪಡಿಸುವುದು, ಮತದಾರರ ಪಟ್ಟಿಯಿಂದ ತೆಗೆದುಹಾಕಿರುವ ಅರ್ಹ ಮತದಾರರ ಹೆಸರುಗಳನ್ನು ಮರು ಸೇರ್ಪಡೆಗೊಳಿಸುವುದು ಹಾಗೂ ಚುನಾವಣಾ ಆಯೋಗದ ಸ್ವಾಯತ್ತತೆ ಕಾಪಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು.

- Advertisement -

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಹಾಗೂ ಸಹಬಾಳ್ವೆಯ ನಿಕಟಪೂರ್ವ ಅಧ್ಯಕ್ಷ ಅಮೃತ್ ಶೆಣೈ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿ ಕುರಿತು ಪ್ರಶ್ನೆಗಳನ್ನು ಎತ್ತಿದರು. ಚುನಾವಣಾ ಆಯೋಗವು ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕಾಗಿದ್ದು, ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...
Advertisements

SIR ಪ್ರಕ್ರಿಯೆಯ ಹೆಸರಿನಲ್ಲಿ ಸಾರ್ವಜನಿಕರಿಂದ ವಿವಿಧ ದಾಖಲೆಗಳನ್ನು ಕೇಳಲಾಗುತ್ತಿದ್ದು, ಇದರಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದ ಅವರು, ಪಾರದರ್ಶಕತೆ ಹಾಗೂ ಎಲ್ಲರನ್ನು ಒಳಗೊಳ್ಳುವಿಕೆಯೇ ಪ್ರಜಾಪ್ರಭುತ್ವದ ಪ್ರಮುಖ ಆಶಯಗಳಾಗಿವೆ ಎಂದರು.

Advertisements
WhatsApp Image 2026 09 25 at 8.31.52 PM 1

ವೆಲ್ಫೇರ್ ಪಾರ್ಟಿ ಉಡುಪಿ ಜಿಲ್ಲಾಧ್ಯಕ್ಷ ಇದ್ರಿಸ್ ಹೂಡೆ ಮಾತನಾಡಿ, ಚುನಾವಣಾ ಆಯೋಗವು ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಧಕ್ಕೆ ತರುವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದರು. SIR ಪ್ರಕ್ರಿಯೆಯ ಮೂಲಕ ಮತದಾರರ ಹಕ್ಕಿಗೆ ಧಕ್ಕೆ ಉಂಟಾಗುವ ಸಾಧ್ಯತೆಯಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಪಾಡಬೇಕು ಎಂದು ಆಗ್ರಹಿಸಿದರು.

ಚುನಾವಣೆಗಳು ಮತ್ತು ಮತದಾರರ ಪಟ್ಟಿ ಕುರಿತಂತೆ ಸಾರ್ವಜನಿಕರಲ್ಲಿ ಹಲವು ಅನುಮಾನಗಳು ಮೂಡಿವೆ. ಇವಿಎಂ ಹಾಗೂ SIR ಪ್ರಕ್ರಿಯೆ ಕುರಿತು ಕೇಳಿಬರುತ್ತಿರುವ ಆರೋಪಗಳಿಗೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ದಲಿತ ಹಿತರಕ್ಷಣಾ ವೇದಿಕೆಯ ಸಂಜೀವ್ ಬಾಳ್ಕೂರ್ ಮಾತನಾಡಿ, ಮತದಾನದ ಹಕ್ಕು ಸಂವಿಧಾನ ನೀಡಿರುವ ಮಹತ್ವದ ಹಕ್ಕಾಗಿದ್ದು, ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾನದ ಹಕ್ಕಿನಿಂದ ವಂಚಿತರಾಗಬಾರದು. SIR ಪ್ರಕ್ರಿಯೆಯನ್ನು ತಕ್ಷಣ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಪ್ರಮುಖ ಬೇಡಿಕೆಗಳು

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು, SIR ಪ್ರಕ್ರಿಯೆ ರದ್ದುಪಡಿಸಬೇಕು, ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ ಅರ್ಹ ಮತದಾರರ ಹೆಸರುಗಳನ್ನು ಮರು ಸೇರ್ಪಡೆಗೊಳಿಸಬೇಕು ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಮತ್ತು ಚುನಾವಣಾ ಆಯೋಗದ ಸ್ವಾಯತ್ತತೆ ಖಾತರಿಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ಅಬ್ದುಲ್ ಅಝೀಜ್ ಉದ್ಯಾವರ ನೆರವೇರಿಸಿದರು. ವೆಲ್ಫೇರ್ ಪಾರ್ಟಿಯ ಉಪಾಧ್ಯಕ್ಷ ವಿಜಯ ಪಡುಕುದ್ರು, ಸಾಮಾಜಿಕ ಹೋರಾಟಗಾರ ಚಾರ್ಲ್ಸ್ ಅಂಬ್ಲೇರ್, ಅನ್ವರ್ ಅಲಿ ಕಾಪು, ಆಸೀಪ್ ಜಿಡಿ, ಮಮ್ತಾಝ್ ಹೂಡೆ, ಅಬ್ದುಲ್ ರಝಾಕ್ ನಕ್ವಾ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬರಗಾಲ ಪರಿಹಾರಕ್ಕೆ ಆಗ್ರಹ: ಸೆ.28ರಂದು ಡಿಸಿ ಕಚೇರಿ ಮುಂದೆ ರೈತರ ಪ್ರತಿಭಟನೆ

ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲವನ್ನು ಎದುರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು...

ಹುಬ್ಬಳ್ಳಿ | ವೇಗದ ಬೈಕ್ ಚಾಲನೆ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ; 7 ಮಂದಿ ವಿರುದ್ಧ ಪ್ರಕರಣ ದಾಖಲು

ಹುಬ್ಬಳ್ಳಿ ನವನಗರದ ನಂದೀಶ್ವರ ನಗರದಲ್ಲಿ ಮನೆ ಎದುರಿನ ರಸ್ತೆಯಲ್ಲಿ ಬೈಕ್‌ನ್ನು ವೇಗವಾಗಿ...

ವಿಜಯಪುರ | ಬೋಧಕರ ಕೊರತೆ: ಪಿಎಚ್‌ಡಿ ವಿದ್ಯಾರ್ಥಿನಿಯರಿಂದಲೇ ಪಿಜಿ ಪಾಠ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ (ಪಿಜಿ) ತರಗತಿಗಳಿಗೆ...

ಗುಳೇದಗುಡ್ಡ | ಎರಡು ತಿಂಗಳಿಂದ 108 ಆಂಬುಲೆನ್ಸ್ ಸೇವೆ ಸ್ಥಗಿತ

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕು ಕೇಂದ್ರವಾಗಿರುವ ಗುಳೇದಗುಡ್ಡದಲ್ಲಿ ತುರ್ತು ಚಿಕಿತ್ಸೆಗೆ ಪ್ರಮುಖ...