ಉಡುಪಿ | ಸರ್ಕಾರಿ ಆಸ್ಪತ್ರೆಯ ನಿವೇಶನ ಸೊಳ್ಳೆ ಉತ್ಪಾದನೆಯ ಕಾರ್ಖಾನೆ !

Date:

ಹಳೆ ಸರ್ಕಾರಿ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆ ಇದ್ದಿರುವ ಸ್ಥಳದಲ್ಲಿ ಗಿಡಗಂಟಿಗಳು ಬೆಳೆದು, ದಟ್ಟ ಪೊದೆಗಳಾಗಿ ಮಾರ್ಪಟ್ಟಿದೆ. ಸ್ಥಳದಲ್ಲಿ ಕಸ ತ್ಯಾಜ್ಯಗಳು ಎಸೆದಿರುವುದು ಕಂಡುಬಂದಿದೆ. ತ್ಯಾಜ್ಯಗಳು ಕೊಳೆತು ನಾರುತ್ತಿದೆ. ಅಗೆದಿರುವ ಗುಂಡಿಯಲ್ಲಿ ಕೊಳೆಯುತ್ತಿರುವ ತ್ಯಾಜ್ಯಗಳನ್ನು ತೊಳೆದ ಮಳೆನೀರು ಸಂಗ್ರಹಗೊಳ್ಳುತ್ತಿದೆ.

- Advertisement -

ಇಲ್ಲಿಯ ವಾತಾವರಣ ಮಾರಕ ಸೊಳ್ಳೆಗಳ ಸಂತಾನೋತ್ಪತ್ತಿಗೆ ಪೂರಕವಾಗಿದ್ದು, ಸೊಳ್ಳೆಗಳ ಉತ್ಪಾದನೆಯ ಕಾರ್ಖಾನೆಯಾಗಿ ಮಾರ್ಪಟ್ಟಿದೆ. ನಗರದ ಹೃದಯಭಾಗದಲ್ಲಿಯೇ ಈ ಸ್ಥಳ ಇರುವುದರಿಂದ‌ ಸೊಳ್ಳೆ ಕಡಿತದಿಂದ ಉಂಟಾಗುವ ಜ್ವರ ಬಾಧೆಗಳು ಸಾರ್ವಜನಿಕ ವಲಯದಲ್ಲಿ ಪಸರಿಸಲು ಕಾರಣವಾಗುತ್ತಿದೆ. ಈ ಪರಿಸರದಲ್ಲಿ ಯಾತ್ರಿಕರ ವಸತಿ ಗ್ರಹಗಳು, ವಾಣಿಜ್ಯ ಕಟ್ಟಡಗಳು, ಆಭರಣ ಮಳಿಗೆಗಳು, ಜನವಸತಿಗಳು, ಹಾಗೂ ಕೂಸಮ್ಮ ಶಂಭು‌ ಶೆಟ್ಟಿ ಸ್ಮಾರಕ ಹಾಜೀ ಅಬ್ದುಲ್ಲಾ ತಾಯಿ‌ ಮತ್ತು‌‌ ಮಕ್ಕಳ ಆಸ್ಪತ್ರೆಯು ಕಾರ್ಯನಿರ್ವಹಿಸುತ್ತಿದೆ. ಈ ಪರಿಸರದಲ್ಲಿ ಡೆಂಗ್ಯೂ ಹಬ್ಬಿರುವುದು ಧೃಢಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಆರೋಗ್ಯ ಇಲಾಖೆ, ನಗರಾಡಳಿತ, ಜಿಲ್ಲಾಡಳಿತ, ತಕ್ಷಣವಾಗಿ ಈ ಸ್ಥಳದಲ್ಲಿರುವ‌ ಗಿಡಗಂಟಿಗಳ ಕಟಾವು, ಮತ್ತು ಕಸ ತ್ಯಾಜ್ಯಗಳ ತಕ್ಷಣ ತೆರವುಗೊಳಿಸಬೇಕಾಗಿದೆ ಎಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ‌ ಒಳಕಾಡು ತಾರಾನಾಥ್ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ.

ಕವಿ ಮುದಣ್ಣ ಮಾರ್ಗ, ನಗರಸಭೆ ಕಛೇರಿ ಬಳಿಯಲ್ಲಿರುವ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಂಪೌಂಡ್ ಒಳಾಂಗಣದ ಸುತ್ತಲು ಗಿಡ ಗಂಟಿಗಳು ಬೆಳೆದು ನಿಂತಿದೆ. ಉರಗಾದಿ, ವಿಷ ಜಂತುಗಳು ನೆಲೆ ಪಡೆಯಲು ಯೋಗ್ಯ ಸ್ಥಳವಾದಂತಾಗಿದೆ. ಪರಿಸರ ಶುಚಿತ್ವದ ಸಂದೇಶ ಸಾರಬೇಕಾದ ಆಸ್ಪತ್ರೆಯ ಮಡಿಲಿನಲ್ಲಿ ಅಶುಚಿತ್ವದ ವಾತಾವರಣ ಸೃಷ್ಟಿಯಾಗಿರುವುದು ವಿಪರ್ಯಾಸದ ಸಂಗತಿ ಎನಿಸಿಕೊಂಡಿದೆ. ಡೆಂಗ್ಯೂ, ಮಲೇರಿಯಾ ಜ್ವರ ಬಾಧಿಸುವ‌ ಭೀತಿಯು ಎದುರಾಗಿದೆ.

ಪ್ರತಿ ವರ್ಷದ ಮಳೆಗಾಲದಲ್ಲೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಂಪೌಂಡ್ ಒಳಾಂಗಣದಲ್ಲಿ ಗಿಡಗಂಟಿಗಳು ಬೆಳೆದು ಸಮಸ್ಯೆ ಉದ್ಭವಿಸುವುದು ಕಂಡುಬರುತ್ತದೆ. ಹಾಗಾಗಿ ನೆಲವನ್ನು ಸಮತಟ್ಟುಗೊಳಿಸಿ ನೆಲಹಾಸು ಅಳವಡಿಸುವುದರಿಂದ, ಸಮಸ್ಯೆಯಿಂದ ಶಾಶ್ವತ ಪರಿಹಾರ ಪಡೆಯಬಹುದಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಗಮನಿಸಬೇಕಾಗಿದೆ ಎಂದು ಸಾಮಾಜಿಕ ಕಾರ್ಯರ್ಕರ್ತರಾದ ಒಳಕಾಡು, ಮೇಸ್ತರು ಸಲಹೆಯನ್ನು ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...