ಉಡುಪಿ | ವಾಣಿಜ್ಯ ಸಿಲಿಂಡರ್ ದರ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

Date:

ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ ದರವನ್ನು ಏಕಾಏಕಿ 990 ರೂ.ಗಳಷ್ಟು ಹೆಚ್ಚಿಸಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಶುಕ್ರವಾರ ನಗರದ ಬ್ರಹ್ಮಗಿರಿ ಸರ್ಕಲ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಕೇಂದ್ರ ಸರ್ಕಾರದ ಜನವಿರೋಧಿ ಹಾಗೂ ಬೆಲೆ ಏರಿಕೆ ನೀತಿಗಳನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಪಂಚರಾಜ್ಯಗಳ ಚುನಾವಣೆಯ ಮತದಾನ ಮುಕ್ತಾಯವಾದ ತಕ್ಷಣ ಇರಾನ್-ಅಮೆರಿಕ ಯುದ್ಧದ ನೆಪವೊಡ್ಡಿ ಅಡುಗೆ ಅನಿಲದ ದರವನ್ನು ಏರಿಸಲಾಗಿದೆ. ಇದರ ಪರಿಣಾಮವಾಗಿ ಸಾಮಾನ್ಯ ಜನತೆ, ಮಧ್ಯಮ ವರ್ಗ ಹಾಗೂ ಹೋಟೆಲ್ ಉದ್ಯಮಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಹಾಗೂ ನಿರಂತರ ಬೆಲೆ ಏರಿಕೆ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ವಾಣಿಜ್ಯ ಸಿಲಿಂಡರ್ ದರ ಏರಿಕೆಯಿಂದ ಹೋಟೆಲ್ ಮಾಲಕರಿಗೆ ಮಾತ್ರವಲ್ಲದೆ ಸಾಮಾನ್ಯ ಜನರಿಗೂ ನೇರ ಪರಿಣಾಮ ಉಂಟಾಗಿದೆ. ಸಣ್ಣ ಮತ್ತು ಮಧ್ಯಮ ಮಟ್ಟದ ಹೋಟೆಲ್‌ಗಳು ಈಗಾಗಲೇ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ದರ ಏರಿಕೆಯ ಪರಿಣಾಮವಾಗಿ ಉಡುಪಿಯಲ್ಲೇ ಸುಮಾರು 50ರಿಂದ 60 ಸಣ್ಣಪುಟ್ಟ ಹೋಟೆಲ್‌ಗಳು ಬಾಗಿಲು ಮುಚ್ಚಿವೆ ಎಂದು ಆರೋಪಿಸಿದರು.

WhatsApp Image 2026 05 08 at 10.46.04 PM

ಹೋಟೆಲ್ ಉದ್ಯಮವನ್ನು ಅವಲಂಬಿಸಿಕೊಂಡು ಜೀವನ ಸಾಗಿಸುತ್ತಿದ್ದ ಸಾವಿರಾರು ಕಾರ್ಮಿಕರು ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರಕ್ಕೆ ಬಡವರ ಜೀವನದ ಬಗ್ಗೆ ಯಾವುದೇ ಕಾಳಜಿ ಇಲ್ಲ. ನಿರಂತರ ಬೆಲೆ ಏರಿಕೆ ಮೂಲಕ ಜನರ ಬದುಕನ್ನು ದುಸ್ತರಗೊಳಿಸಲಾಗುತ್ತಿದೆ ಎಂದು ಅವರು ಟೀಕಿಸಿದರು.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಣ್ಣ ಉದ್ದಿಮೆದಾರರು ಹಾಗೂ ವ್ಯಾಪಾರಿಗಳ ಮೇಲೆ ನಿರಂತರವಾಗಿ ಪ್ರಹಾರ ಮಾಡುತ್ತಿದೆ. ಈಗಾಗಲೇ ನಿರುದ್ಯೋಗ, ಬೆಲೆ ಏರಿಕೆ ಮತ್ತು ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಜನಸಾಮಾನ್ಯರನ್ನು ಇನ್ನಷ್ಟು ಕಷ್ಟಕ್ಕೆ ತಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣ ಮಾಡುವ ಪ್ರಯತ್ನ ನಡೆಯುತ್ತಿದೆ. ಜನರ ಗಮನ ಬೇರೆಡೆ ಸೆಳೆಯಲು ಯುದ್ಧದಂತಹ ವಿಷಯಗಳನ್ನು ಬಳಸಿಕೊಂಡು ಬೆಲೆ ಏರಿಕೆಯನ್ನು ಸಮರ್ಥಿಸಿಕೊಳ್ಳಲಾಗುತ್ತಿದೆ. ತಕ್ಷಣವೇ ವಾಣಿಜ್ಯ ಸಿಲಿಂಡರ್ ದರ ಏರಿಕೆಯನ್ನು ಹಿಂಪಡೆದು ಜನರಿಗೆ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದರು.

WhatsApp Image 2026 05 08 at 10.46.04 PM 1

ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರಯ್ಯಾ ಅಂಜುಮ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದ ‘ಅಚ್ಛೇದಿನ್’ ಸಾಮಾನ್ಯ ಜನರಿಗೆ ಬಂದಿಲ್ಲ. ಅದು ಬಿಜೆಪಿಯ ನಾಯಕರಿಗೆ ಹಾಗೂ ಅವರ ಕಾರ್ಪೋರೇಟ್ ಸ್ನೇಹಿತರಿಗೆ ಮಾತ್ರ ಸೀಮಿತವಾಗಿದೆ ಎಂದು ವಾಗ್ದಾಳಿ ನಡೆಸಿದರು.

ತಮ್ಮ ಅಂಧಭಕ್ತರ ಮೂಲಕ ಕೇಂದ್ರ ಸರ್ಕಾರದ ಎಲ್ಲಾ ಜನವಿರೋಧಿ ನೀತಿಗಳನ್ನು ಜನಪರವೆಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. ಆದರೆ ವಾಸ್ತವದಲ್ಲಿ ದೇಶದ ಜನರು ನಿರಂತರ ಬೆಲೆ ಏರಿಕೆ, ನಿರುದ್ಯೋಗ ಹಾಗೂ ಆರ್ಥಿಕ ಒತ್ತಡದಿಂದ ಬಳಲುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾದ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಹರಿಪ್ರಸಾದ್ ರೈ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಅಲೆವೂರು ಹರೀಶ್ ಕಿಣಿ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ, ಶಬರೀಶ್ ಸುವರ್ಣ, ಸಜ್ಜನ್ ಶೆಟ್ಟಿ, ನವೀನ್ ಸಾಲ್ಯಾನ್, ಅಕ್ಷತ್ ಪೈ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...