ಉಡುಪಿ | ಈಜಲು ತೆರಳಿದ ಯುವಕರು ನೀರುಪಾಲು; ಬೈಂದೂರಿನಲ್ಲಿ ಕೊಲೆ ಯತ್ನ ಆರೋಪಿಗಳ ಆತ್ಮಹತ್ಯೆ

Date:

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು ಭರತ್ ಪೂಜಾರಿ (29) ಮತ್ತು ಹರ್ಷನ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಇತ್ತ ಬೈಂದೂರಿನಲ್ಲಿ ವಿಠ್ಠಲ್ ನಾಯಕ್ (35) ಮತ್ತು ಭವ್ಯಾ ಅಲಿಯಾಸ್ ನಿಶ್ಮಿತಾ (33) ಹೆಸರಿನ ಕೊಲೆ ಪ್ರಕರಣದ ಆರೋಪಿಗಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

- Advertisement -

ಐವರು ಸ್ನೇಹಿತರು ಮಂಗಿಲಾರು ಮಾರ್ಗವಾಗಿ ಸುಮಾರು 2 ಕಿ.ಮೀ. ದುರ್ಗಮ ದಾರಿ ಕ್ರಮಿಸಿ ನದಿಗೆ ತಲುಪಿದ್ದು, ಆಳವಾದ ನೀರಿಗೆ ತೆರಳಿದ್ದ ಭರತ್ ಮತ್ತು ಹರ್ಷನ್ ನೀರಿನಲ್ಲಿ ಮುಳುಗಿದರು. ಅಗ್ನಿಶಾಮಕ ದಳ ಸಿಬ್ಬಂದಿ ಸುಮಾರು 3 ಕಿ.ಮೀ. ನಡೆದು ಸ್ಥಳಕ್ಕೆ ತಲುಪಿ, ಮೂರು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದೇ ವೇಳೆಗೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಳ ಪ್ರದೇಶದಲ್ಲಿ ಸೌಪರ್ಣಿಕಾ ನದಿ ಸಮೀಪ ನೇಣುಬಿಗಿದ ಸ್ಥಿತಿಯಲ್ಲಿ ಓರ್ವ ಪುರುಷ ಮತ್ತು ಓರ್ವ ಮಹಿಳೆಯ ಮೃತದೇಹಗಳು ಪತ್ತೆಯಾಗಿವೆ. ಮೃತರನ್ನು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಸೆಪ್ಟೆಂಬರ್ 11ರಂದು ದಾಖಲಾಗಿದ್ದ ಅಪರಾಧ ಪ್ರಕರಣದ ಆರೋಪಿಗಳಾದ ವಿಠ್ಠಲ್ ನಾಯಕ್ (35) ಮತ್ತು ಭವ್ಯಾ ಅಲಿಯಾಸ್ ನಿಶ್ಮಿತಾ (33) ಎಂದು ಗುರುತಿಸಲಾಗಿದೆ. SOCO ತಂಡ ಪರಿಶೀಲನೆ ನಡೆಸುತ್ತಿದ್ದು, ಮುಂದಿನ ತನಿಖೆ ಮುಂದುವರಿದಿದೆ.

m 165

ಪ್ರಕರಣದ ಹಿನ್ನೆಲೆ: ವಿಠ್ಠಲ್ ನಾಯಕ್ ಮತ್ತು ಭವ್ಯಾ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ವಿಠ್ಠಲ್ ವಿವಾಹಿತನಾಗಿದ್ದು, ಆತನ ಪತ್ನಿಗೆ ವಿಷಪ್ರಯೋಗ ಮಾಡಿ ಕೊಲೆ ಮಾಡಲು ಯತ್ನಿಸಿದ ಗಂಭೀರ ಆರೋಪ ಇವರಿಬ್ಬರ ಮೇಲಿತ್ತು. ಈ ಕೊಲೆ ಯತ್ನದ ಆರೋಪಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 11ರಂದು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು. ಈ ಘಟನೆಯ ಬಳಿಕ ಇಬ್ಬರೂ ಸೆಪ್ಟೆಂಬರ್ 29ರಂದು ಬೈಂದೂರಿನ ಸಮೀಪ ಸೌಪರ್ಣಿಕಾ ನದಿ ಬದಿಯ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆ ಪರಿಹಾರವಲ್ಲ 5 4
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಳಿಕೋಟಿ | ₹2,500 ಬರ ಪರಿಹಾರಕ್ಕೆ ವಿರೋಧ: ಸರ್ಕಾರಕ್ಕೇ ದೇಣಿಗೆ ನೀಡಲು ರೈತ ಸಂಘ ಸಿದ್ಧತೆ

ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ₹2,500 ಬರ...

‘SIR’ ತರಾತುರಿ, ದಾಖಲೆಗಳ ಗೊಂದಲದ ನಡುವೆ ಮತದಾನದ ಹಕ್ಕಿನ ಆತಂಕ: ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ರಾಜ್ಯಾದ್ಯಂತ...

ಅಮೆರಿಕದ ಮತದಾರರಿಗೆ ‘ಎಚ್ಚೆತ್ತುಕೊಳ್ಳಿ’ ಎಂದ ಇರಾನ್: ಟ್ರಂಪ್‌ರನ್ನು ತಿರಸ್ಕರಿಸುವಂತೆ 25 ಪುಟಗಳ ಪತ್ರ ಬಿಡುಗಡೆ

ಅಮೆರಿಕದ ಮಧ್ಯಂತರ ಚುನಾವಣೆಗಳು (Midterm Elections) ಸಮೀಪಿಸುತ್ತಿರುವಂತೆಯೇ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ...