ಉಡುಪಿ | ಕೈಗಾರಿಕೋದ್ಯಮಿಗಳು ನಿಗಧಿತ ಕಾಲಾವಧಿಯ ಒಳಗೆ ಯೋಜನೆ ಪೂರ್ಣಗೊಳಿಸಿ : ಡಿಸಿ ಸ್ವರೂಪ ಟಿ.ಕೆ

Date:

ಕೈಗಾರಿಕೆ ಘಟಕಗಳ ಸ್ಥಾಪನೆಯೊಂದಿಗೆ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಿ, ಆಸಕ್ತ ಉದ್ಯಮಿಗಳಿಗೆ ಹಂಚಿಕೆ ಮಾಡಿದ್ದು, ಘಟಕಗಳನ್ನು ನಿಗಧಿತ ಕಾಲಾವಧಿಯ ಒಳಗೆ ಯೋಜನೆಗಳನ್ನು ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಮಂಜೂರಾತಿಯನ್ನು ರದ್ದುಪಡಿಸಿ, ನವ ಉದ್ಯಮಿಗಳಿಗೆ ಹಂಚಿಕೆ ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಕೈಗಾರಿಕಾ ಸ್ಪಂದನ, ಜಿಲ್ಲಾ ಮಟ್ಟದ ರಫ್ತು ಉತ್ತೇಜನ ಸಮಿತಿ ಸಭೆ, ಪ್ರಧಾನಮಂತ್ರಿಯವರ ಉದ್ಯೋಗ ಸೃಜನ ಯೋಜನೆಯ ಡಿ.ಎಲ್.ಎಂ.ಸಿ ಸಭೆ ಹಾಗೂ ಪಿ.ಎಂ ವಿಶ್ವಕರ್ಮ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಕೈಗಾರಿಕಾ ಪ್ರದೇಶಗಳಲ್ಲಿ ಕೈಗಾರಿಕಾ ಘಟಕ ಸ್ಥಾಪನೆಗೆ ಹೆಚ್ಚಿನ ಕಾಲಾವಕಾಶ ಪಡೆದಿರುವ ಘಟಕಗಳು ನಿಗಧಿತ ಅವಧಿಯಲ್ಲಿ ಯೋಜನೆಯನ್ನು ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಸದ್ರಿರವರಿಗೆ ಮಂಜೂರಾಗಿರುವ ನಿವೇಶನವನ್ನು ರದ್ದುಪಡಿಸಿ, ಹೊಸದಾಗಿ ಅರ್ಜಿ ಸಲ್ಲಿಸಿರುವ ಉದ್ಯಮಿಗಳಿಗೆ ನಿವೇಶನವನ್ನು ಹಂಚಿಕೆ ಮಾಡಲು ಕ್ರಮವಹಿಸಬೇಕು ಎಂದು ಕೆ.ಐ.ಎ.ಡಿ.ಬಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಕೈಗಾರಿಕೋದ್ಯಮಿಗಳು ಘಟಕ ಸ್ಥಾಪನೆಗೆ ಹಂಚಿಕೆಯಾದ ನಿವೇಶನಗಳಲ್ಲಿ ಉದ್ದಿಮೆ ಪ್ರಾರಂಭಿಸದೇ ಪ್ರತೀ ಸಭೆಯಲ್ಲಿಯೂ ವಿವಿಧ ನೆಪವೊಡ್ಡಿ ಹೆಚ್ಚುವರಿ ಕಾಲಾವಕಾಶ ಕೋರುತ್ತಾರೆ. ಹೆಚ್ಚುವರಿ ಕಾಲಾವಕಾಶ ಪಡೆದ ಹಾಗೂ ಚಟುವಟಿಕೆ ಬದಲಾಯಿಸಿಕೊಂಡ ಘಟಕಗಳ ಸ್ಥಿತಿ-ಗತಿಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ವರದಿ ನೀಡುವಂತೆ ತಿಳಿಸಿದ ಅವರು, ಇದು ಪುನರಾವರ್ತನೆಯಾದಲ್ಲಿ ಕೈಗಾರಿಕೆ ಪ್ರಾರಂಭಿಸಲು ನಿವೇಶನ ಕೋರಿ ಅರ್ಜಿ ಸಲ್ಲಿಸುವ ಆಸಕ್ತರುಗಳಿಗೆ ನಿವೇಶನವನ್ನು ಮರು ಹಂಚಿಕೆ ಮಾಡಲು ಕ್ರಮವಹಿಸಲಾಗುವುದು ಎಂದರು.

ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಹೆಬ್ರಿ ತಾಲೂಕು ಶಿವಪುರದಲ್ಲಿ 74.84 ಎಕ್ರೆ ಹಾಗೂ ಕೆರೆಬೆಟ್ಟುವಿನಲ್ಲಿ 38.75 ಎಕ್ರೆ ಖಾಸಗಿ ಹಾಗೂ ಸರ್ಕಾರಿ ಜಮೀನು ಸೇರಿದಂತೆ ಒಟ್ಟು 113.59 ಎಕ್ರೆ ಜಮೀನಿನ ಗಡಿ ಗುರುತಿಸುವ ಕಾರ್ಯವನ್ನು ಆದ್ಯತೆ ಮೇಲೆ ಕೈಗೊಳ್ಳುವಂತೆ ಹಿಂದಿನ ಸಭೆಯಲ್ಲಿ ಸೂಚಿಸಿದ್ದು, ಅದರಂತೆ ಅರಣ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಮೋಜಿಣಿ ಶಿವಮೊಗ್ಗ ಇವರು ಜಂಟಿ ಸಮೀಕ್ಷೆ ನಡೆಸಿದ್ದು, ಶೀಘ್ರವಾಗಿ ಗಡಿ ಕಲ್ಲುಗಳನ್ನು ಅಳವಡಿಸುವ ಕಾರ್ಯವನ್ನು ಈಗಾಗಲೇ ಕೈಗೊಂಡಿದ್ದು, ವರದಿಯನ್ನು ಆದ್ಯತೆಯ ಮೇಲೆ ಶೀಘ್ರದಲ್ಲಿಯೇ ನೀಡಬೇಕೆಂದರು.

ಬ್ರಹ್ಮಾವರ ತಾಲೂಕು ಉಪ್ಪೂರಿನಲ್ಲಿ 101.1950 ಎಕ್ರೆ ಖಾಸಗಿ ಜಮೀನನ್ನು ಸಣ್ಣ ಕೈಗಾರಿಕಾ ವಸಾಹತು ಸ್ಥಾಪನೆಗೆ ಗುರುತಿಸಲಾಗಿದ್ದು, ಈ ಕುರಿತ ಪ್ರಸ್ತಾವನೆಗೆ ಸಂಬಂಧಿಸಿದಂತೆ ಬೇಡಿಕೆಯ ವಿವರಗಳನ್ನು ಮಾನ್ಯ ಸಚಿವರಿಗೆ ಸಲ್ಲಿಸಲಾಗಿದೆ. ಸರಕಾರದ ಮಟ್ಟದಲ್ಲಿ ಇದನ್ನು ಅನುಸರಿಸಿ, ಕೈಗಾರಿಕಾ ಪ್ರದೇಶಗಳ ಪ್ರಸ್ತಾನಬೆಗೆ ಅನುಮೋದನೆ ಪಡೆಯಬೇಕು ಎಂದರು.

ಉಡುಪಿ ತಾಲೂಕು ಕೋಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರ್ಣಂಕಿಲ ಗ್ರಾಮದ ಸ.ನಂ. 06 ರಲ್ಲಿನ 28 ಎಕರೆ ಸರ್ಕಾರಿ ಜಮೀನಿನಲ್ಲಿ ಕೈಗಾರಿಕಾ ವಸಾಹತು ಸ್ಥಾಪಿಸಲು ಮಂಜೂರು ಮಾಡುವಂತೆ ಉಡುಪಿ ತಹಶೀಲ್ದಾರರಿಗೆ ಪತ್ರ ಬರೆಯಲಾಗಿದ್ದು, ಈ ಬಗ್ಗೆ ಕ್ರಮವಹಿಸುವಂತೆ ತಿಳಿಸಿದರು.

1010177264


ಜಿಲ್ಲೆಯ ವಿವಿಧ ಕೈಗಾರಿಕಾ ಪ್ರದೇಶಗಳಲ್ಲಿ ಗುತ್ತಿಗೆ ಕರಾರು ನಿರ್ವಹಿಸಿಕೊಂಡು ಯೋಜನೆ ಪ್ರಾರಂಭಿಸದೇ ಇರುವ ಘಟಕಗಳ ಮಾಹಿತಿ ಪಡೆದು ಮಾತನಾಡಿದ ಜಿಲ್ಲಾಧಿಕಾರಿಗಳು, ನಂದಿಕೂರು, ಬೆಳಪು ಹಾಗೂ ಮಿಯ್ಯಾರು ಕೈಗಾರಿಕಾ ಪ್ರದೇಶದ 18.39 ಎಕ್ರೆಯಲ್ಲಿ ಒಟ್ಟು 26 ಘಟಕಗಳು ಗುತ್ತಿಗೆ ಕರಾರು ನಿರ್ವಹಿಸಿಕೊಂಡಿದ್ದು, 6 ಘಟಕಗಳು ಅನುಷ್ಠಾನದ ಹಂತದಲ್ಲಿದ್ದು, 1 ಘಟಕವು ನ್ಯಾಯಾಲಯದ ಹಂತದಲ್ಲಿದ್ದು, 19 ಘಟಕಗಳು ಯಾವುದೇ ಕೆಲಸ ಆರಂಭಿಸಿರುವುದಿಲ್ಲ. ಘಟಕ ಪ್ರಾರಂಭಿಸದೇ ಇರುವ ಉದ್ದಿಮೆದಾರರ ಕರಾರು ರದ್ದುಪಡಿಸಿ, ಕೈಗಾರಿಕಾ ಘಟಕ ಸ್ಥಾಪನೆಗೆ ಮುಂದೆ ಬರುವ ಆಸಕ್ತರಿಗೆ ಅವಕಾಶ ಕಲ್ಪಿಸಬೇಕು ಎಂದರು.

ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಬೆಳಪು ಕೈಗಾರಿಕಾ ಪ್ರದೇಶದ ಸಂಪರ್ಕ ರಸ್ತೆ ವಿಸ್ತರಣೆಗೆ ಅಗತ್ಯವಿರುವ ಭೂಸ್ವಾಧೀನ ಕಾರ್ಯವನ್ನು ಶೀಘ್ರವಾಗಿ ಕೈಗೊಳ್ಳುವುದರೊಂದಿಗೆ ಭೂ ಮಾಲೀಕರಿಗೆ ಪರಿಹಾರಧನ ಪಾವತಿಸುವ ಕಾರ್ಯವನ್ನು ಚುರುಕುಗೊಳಿಸಬೇಕು. ಮಿಯ್ಯಾರು ಕೈಗಾರಿಕಾ ಪ್ರದೇಶದಲ್ಲಿನ ಕೈಗಾರಿಕಾ ಘಟಕಗಳಲ್ಲಿ ಹಾಲಿ ಇರುವ ಪರಿವರ್ತಕಗಳು ಓವರ್‌ಲೋಡ್ ಆಗುವುದರಿಂದ ಹೆಚ್ಚುವರಿ ವಿದ್ಯುತ್ ಪರಿವರ್ತಕ ಅಥವಾ ಹಾಲಿ ಇರುವ ಪರಿವರ್ತಕದ ಸಾಮರ್ಥ್ಯವನ್ನು ಹೆಚ್ಚಿಸಲು ಆದ್ಯತೆಯ ಮೇಲೆ ಕ್ರಮವಹಿಸಬೇಕೆಂದರು.

ಕೌಶಲ್ಯಾಭಿವೃದ್ಧಿ ಇಲಾಖೆಯು ಕೈಗಾರಿಕೆಗಳಿಗೆ ಸಂಬAಧಪಟ್ಟ ಕೌಶಲ್ಯಗಳ ಕೋರ್ಸುಗಳನ್ನು ಹೆಚ್ಚುವರಿಯಾಗಿ ತಮ್ಮ ಕೋರ್ಸುಗಳಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಐ.ಟಿ.ಐ, ಡಿಪ್ಲೋಮಾ ಪಡೆದ ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದ ಅವರು, ಉದ್ಯಮಿಗಳು ಬ್ಯಾಂಕುಗಳಲ್ಲಿ ಕೈಗಾರಿಕಾ ಘಟಕಕ್ಕೆ ಸಾಲ ಸೌಲಭ್ಯ ಪಡೆಯುವ ಸಂದರ್ಭದಲ್ಲಿ ಬ್ಯಾಂಕುಗಳ ಸಿಬಿಲ್ ರೇಟಿಂಗ್ಸ್ ಕ್ರಮದಿಂದ ತೊಂದರೆ ಅನುಭವಿಸುತ್ತಿದ್ದು, ಈ ಬಗ್ಗೆ ಲೀಡ್ ಬ್ಯಾಂಕ್ ಅಧಿಕಾರಿಗಳು ಆರ್.ಬಿ.ಐ ಅಧಿಕಾರಿಗಳ ಗಮನಕ್ಕೆ ತರುವುದರೊಂದಿಗೆ ಸಮಸ್ಯೆ ಬಗೆಹರಿಸಲು ಕ್ರಮವಹಿಸುವಂತೆ ಸೂಚಿಸಿದರು.

ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಫಲಾನುಭವಿಗಳ 570 ಘಟಕಗಳಿಗೆ 2190.10 ಲಕ್ಷ ರೂ. ಮಾರ್ಜಿನ್ ಹಣ ಬಿಡುಗಡೆಯಾಗಬೇಕಿದ್ದು, ಈವರೆಗೆ 233 ಘಟಕಗಳಿಗೆ 872.08 ಲಕ್ಷ ರೂ. ಮಾತ್ರ ಬಿಡುಗಡೆಯಾಗಿದೆ. ಬಾಕಿ ಉಳಿದ 337 ಘಟಕಗಳಿಗೆ 1318.02 ಲಕ್ಷ ರೂ. ಮಾರ್ಜಿನ ಹಣ ಶೀಘ್ರದಲ್ಲಿ ನೀಡಲು ಕ್ರಮವಹಿಸುವಂತೆ ಸೂಚನೆ ನೀಡಿದರು.

ಪಿ.ಎಂ ವಿಶ್ವಕರ್ಮ ಯೋಜನೆಯಡಿ ಆರ್ಥಿಕ ನೆರವು ಪಡೆಯಲು 5875 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದು, 1383 ಅರ್ಜಿಗಳು ತಿರಸ್ಕೃತಗೊಂಡು, 4064 ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡಲು ಸಾಲಸೌಲಭ್ಯ ಮಂಜೂರಾಗಿದ್ದು, 3782 ಫಲಾನುಭವಿಗಳಿಗೆ 37.07 ಕೋಟಿ ರೂ. ಆರ್ಥಿಕ ಸಹಾಯಧನ ವಿತರಿಸಲಾಗಿದೆ ಎಂದ ಅವರು, ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಪಿ.ಎಂ. ವಿಶ್ವಕರ್ಮ ಯೋಜನೆಯಡಿ ಕೌಶಲ್ಯಾಭಿವೃದ್ಧಿ ತರಬೇತಿ ಪಡೆದ ಆಸಕ್ತರಿಗೆ ಟೂಲ್ ಕಿಟ್ ವಿತರಿಸುವಂತೆ ತಿಳಿಸಿದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ವಸಂತ ಕಿಣಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ನಗರಸಭೆ ಆಯುಕ್ತ ಮಂಹಾತೇಶ ಹಂಗರಗಿ, ಕಾಸಿಯಾ ಪ್ರತಿನಿಧಿ ಹರೀಶ್ ಕುಂದರ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಜಿಲ್ಲೆಯ ಸಣ್ಣ ಕೈಗಾರಿಕಾ ಉದ್ದಿಮೆದಾರರು ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಇಸ್ಪೀಟ್ ಜೂಜಾಟ; 11 ಜನರ ಬಂಧನ, ₹24,600 ನಗದು ಜಪ್ತಿ

ನಗರದ ಹೊರವಲಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 11 ಜನರನ್ನು...

ಕಲಬುರಗಿ | ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ; 6 ಮಂದಿ ಬಂಧನ

ನಗರದ ಶ್ರೀನಿವಾಸ ಸರಡಗಿ ಕ್ರಾಸ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ...

ಕಲಬುರಗಿ | ನ.12ರಂದು ನಗರದ ಹಲವು ಬಡಾವಣೆಗಳಲ್ಲಿ 5 ಗಂಟೆ ವಿದ್ಯುತ್ ವ್ಯತ್ಯಯ

ನಗರದ ಜಿಐಎಸ್ ಸ್ಟೇಷನ್‌ನಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 12ರಂದು...

ಮತ್ಸ್ಯಗಂಧ ಸೂಪರ್‌ಫಾಸ್ಟ್ ರೈಲು ಇನ್ನು ಎಕ್ಸ್‌ಪ್ರೆಸ್‌ ರೈಲಾಗಿ ಸಂಚಾರ; ಟಿಕೆಟ್ ದರ ಕಡಿತ

ಮುಂಬಯಿ ಲೋಕಮಾನ್ಯ ತಿಲಕ್ ಟರ್ಮಿನಲ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಸಂಚರಿಸುವ...