ಉಡುಪಿ | ಉದ್ಯಾವರದಲ್ಲಿ ನಾಳೆ (ಆ.30) ‘ಮಂಜಣ್ಣನ ನೆನಪು–14’ ಕಾರ್ಯಕ್ರಮ

Date:

2017ನೇ ಸಾಲಿನ ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಸಂಸ್ಥೆಯ ಗೌರವಾಧ್ಯಕ್ಷರಾಗಿದ್ದ ಹಾಗೂ ಉದ್ಯಾವರ ಗ್ರಾಮದ ಅಭಿವೃದ್ಧಿಯ ಹರಿಕಾರ ಮಂಜುನಾಥ ಉದ್ಯಾವರ ಅವರ 14ನೇ ಪುಣ್ಯತಿಥಿ ಅಂಗವಾಗಿ ‘ಮಂಜಣ್ಣನ ನೆನಪು–14’ ಕಾರ್ಯಕ್ರಮ ಆ.30ರಂದು ಸಂಜೆ 5 ಗಂಟೆಗೆ ಉದ್ಯಾವರ ಮೇಲ್ಪೇಟೆ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ತರ ಸುವರ್ಣ ಸಂಭ್ರಮ ಸಭಾಂಗಣದಲ್ಲಿ ನಡೆಯಲಿದೆ.

- Advertisement -

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸರಕಾರದ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಮಂಜುನಾಥ ಪೂಜಾರಿ, ಪಡುಬಿದ್ರಿ ಸಿ.ಎ. ಬ್ಯಾಂಕ್ ಅಧ್ಯಕ್ಷ ವೈ. ಸುಧೀರ್ ಕುಮಾರ್ ಹಾಗೂ ಉದ್ಯಾವರ ಶಂಭುಕಲ್ಲು ಶ್ರೀ ವೀರಭದ್ರ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಉಲ್ಲಾಸ ಆರ್. ಶೆಟ್ಟಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಮಂಗಳೂರಿನ ಕಲಾಭಿ ಥಿಯೇಟರ್ ತಂಡದಿಂದ ವಿಲಿಯಂ ಷೇಕ್ಸ್‌ಪಿಯರ್ ಅವರ ‘ಮ್ಯಾಕ್ಬೆತ್’ ನಾಟಕದ ರೂಪಾಂತರವಾದ ‘ಮಾರಿ ಕಾಡ್’ ತುಳು ಆಪ್ತರಂಗ ಪ್ರಯೋಗ ಪ್ರದರ್ಶನಗೊಳ್ಳಲಿದೆ.

‘ಮಾರಿ ಕಾಡ್’ ನ ಕನ್ನಡ ರೂಪಾಂತರವನ್ನು ಡಾ. ಚಂದ್ರಶೇಖರ ಕಂಬಾರ, ತುಳು ರೂಪಾಂತರವನ್ನು ಡಾ. ಮೀನಾಕ್ಷಿ ರಾಮಚಂದ್ರ ಮಾಡಿದ್ದು, ರೋಹಿತ್ ಎಸ್. ಬೈಕಾಡಿ ನಿರ್ದೇಶನ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...