ಶಾಸಕ ಯಶ್ಪಾಲ್ ಸುವರ್ಣ ಸಹಿತ ಬಿಜೆಪಿ ನಾಯಕರು ಅಧಿಕಾರದ ಅಮಲಿನ ಹೇಳಿಕೆಗಳನ್ನು ನಿಲ್ಲಿಸಿ : ವೆರೋನಿಕಾ ಕರ್ನೆಲಿಯೋ

Date:

ಅಧಿಕಾರದ ಅಮಲಿನಲ್ಲಿ ನೀಡುತ್ತಿರುವ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ಬಿಜೆಪಿ ನಾಯಕರು ತಕ್ಷಣ ನಿಲ್ಲಿಸಬೇಕು ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಗ್ರಹಿಸಿದ್ದಾರೆ.
ಉಡುಪಿ ಶಾಸಕರಾದ ಯಶಪಾಲ್ ಸುವರ್ಣ ಅವರೇ , ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಅವರು ಅಧಿಕಾರದ ಅಮಲಿನಲ್ಲಿ ಅಲ್ಲ, ದೇಶದ ವಿದ್ಯಾರ್ಥಿಗಳು ಮತ್ತು ಯುವಜನರಿಗೆ ಉತ್ತಮ ಭವಿಷ್ಯ ನಿರ್ಮಿಸಬೇಕು, ದೇಶದ ಜನರು ಸುರಕ್ಷಿತ ಹಾಗೂ ನೆಮ್ಮದಿಯ ಬದುಕು ನಡೆಸಬೇಕು, ಯಾರೂ ಹಸಿದ ಹೊಟ್ಟೆಯಲ್ಲಿ ಮಲಗಬಾರದು ಹಾಗೂ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು ಸೇರಿದಂತೆ ಹಿರಿಯ ನಾಯಕರು ಕಂಡ ಭಾರತದ ಕನಸು ನನಸಾಗಬೇಕು ಎಂಬ ಚಿಂತನೆಯಲ್ಲಿದ್ದಾರೆ.

- Advertisement -

ಒರ್ವ ಲೋಕಸಭೆಯ ವಿರೋಧ ಪಕ್ಷದ ನಾಯಕನ ವಿರುದ್ದ ಶಾಸಕರು ನೀಡಿರುವ ಬಾಲಿಶ ಹೇಳಿಕೆ ಖಂಡನೀಯ. ಜವಾಬ್ದಾರಿಯುತ ಸ್ಥಾನದಲ್ಲಿದ್ದು ಜನರಿಗೆ ಉತ್ತರದಾಯಿತ್ವ ಆಗಬೇಕಾದವರು  ಜನರನ್ನು ಹಿಂಸೆಗೆ ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಉಡುಪಿಯಂತಹ ಬುದ್ದಿವಂತರ ಜಿಲ್ಲೆಯ ದುರಂತವಾಗಿದೆ. ಜಿಲ್ಲೆಯಲ್ಲಿ ರಾಜಕೀಯ ಸಿದ್ದಾಂತಗಳು ಬೇರೆ ಇದ್ದರೂ ಕೂಡ ಯಾವುದೇ ಪಕ್ಷದ ನಾಯಕರುಗಳು ಈ ಹಿಂದೆ ಇಂತಹ ಅಸಂಬದ್ಧ ಹೇಳಿಕೆಗಳನ್ನು ನೀಡಿದ ಉದಾಹರಣೆಗಳಿಲ್ಲ ಆದರೆ ಶಾಸಕ ಯಶಪಾಲ ಸುವರ್ಣ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಹೇಳಿಕೆ ನೀಡಿರುವುದು ಅವರ  ಸಂಸ್ಕಾರವನ್ನು ತೋರಿಸುತ್ತದೆ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯನ್ನು ಉದ್ದೇಶಿಸಿ ಬಿಜೆಪಿ ನಾಯಕರು “ಕಾಕ್ರೋಚ್” ಎಂದು ಕರೆದಿರುವುದನ್ನು ಖಂಡಿಸಿದ ಅವರು, “ಕಾಕ್ರೋಚ್ಗಳಿಗೆ ₹100ರ ಔಷಧಿ ಸಿಂಪಡಿಸಬೇಕು” ಎಂದು ಹೇಳುವವರು, ಅದೇ ವಿದ್ಯಾರ್ಥಿಗಳ ಹೋರಾಟದ ಒತ್ತಡಕ್ಕೆ ಶಿಕ್ಷಣ ಸಚಿವರ ರಾಜೀನಾಮೆ ಆಗಿರುವುದನ್ನು ಹೇಗೆ ಸಮರ್ಥಿಸುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಒಡಿಶಾದ ಬಿಜೆಪಿ ಸಂಸದೆ ಅಪರಾಜಿತಾ ಸಾರಂಗಿ ಅವರ ಪುತ್ರಿ ಅರ್ಚಿತಾ ಸಚಿನ್ ರಾಹರ್ ಮತ್ತು ಅಸ್ಸಾಂ ಸಚಿವ ಕೇಶಬ್ ಮಹಂತ ಅವರ ಪುತ್ರಿ ದಿಬಿಸಾ ಮಹಂತ ಅವರು CJP (ಕಾಕ್ರೋಚ್ ಜನತಾ ಪಾರ್ಟಿ) ನೇತೃತ್ವದ ವಿದ್ಯಾರ್ಥಿ ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಸಂದರ್ಭದಲ್ಲಿ ಅದರ ಬಗ್ಗೆ ಬಿಜೆಪಿ ನಾಯಕರು ಏನು ಹೇಳುತ್ತಾರೆ?
ಯುವಕರು ಮತ್ತು ವಿದ್ಯಾರ್ಥಿಗಳು ದೇಶದ ಬೆನ್ನೆಲುಬಾಗಿದ್ದು, ಅವರು ಸಮಾಜದ ಸಮಸ್ಯೆಗಳ ಬಗ್ಗೆ ಜಾಗೃತರಾಗಿ ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುತ್ತಿದ್ದಾರೆ. ಅವರ ಭವಿಷ್ಯದೊಂದಿಗೆ ರಾಜಕೀಯ ಆಟವಾಡಬಾರದು. ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು, ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವತ್ತ  ಕೇಂದ್ರ ಸರ್ಕಾರ ಹಾಗೂ
ಆಡಳಿತ ಪಕ್ಷ ಗಮನ ಹರಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...

ಚಿಂತಾಮಣಿ | ನಳಂದ ವಿದ್ಯಾ ಮಂದಿರದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಯಶಸ್ವಿ

ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು...

ಕಲಬುರಗಿ | ಸಾರ್ವಜನಿಕ ಶಿಕ್ಷಣ ಬಲವರ್ಧನೆಗೆ ಎಸ್‌ಎಫ್‌ಐ ಆಗ್ರಹ: 17ನೇ ರಾಜ್ಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಕೆ

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸುವುದು, ಕೋಮು...