ಉಡುಪಿ | ಸಂಸದರು ವಾರಾಹಿ ನೀರಾವರಿ ಯೋಜನೆಯ ವಾಸ್ತವ ಅರಿತು ಮಾತನಾಡಲಿ : ಕೆ. ವಿಕಾಸ್ ಹೆಗ್ಡೆ

Date:

ಸಿದ್ಧಾಪುರ ಗ್ರಾಮದ ಹೋರಿಯಬ್ಬೆಯಲ್ಲಿನ ವರಾಹಿ ಡೈವರ್ಶನ್ ವೀಯರ್ ಬಗ್ಗೆ ವಾಸ್ತವದ ಅರಿವಿಲ್ಲದೆ ಜನರನ್ನು ಮತ್ತು ಸರ್ಕಾರವನ್ನು ದಾರಿತಪ್ಪಿಸುತ್ತಿರುವ ಸಂಸದ ಬಿ. ವೈ. ರಾಘವೇಂದ್ರ ಎಂದು ಕುಂದಾಪುರ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಮಾಣಿ ಜಲಾಶಯದಿಂದ ಹೊರಬಂದ ನೀರು ವರಾಹಿ ನದಿ ಮೂಲಕ ಸಿದ್ಧಾಪುರ ಗ್ರಾಮದ ಹೋರಿಯಬ್ಬೆಯಲ್ಲಿ ಶೇಖರಣೆಯಾಗುತ್ತದೆ. ಈ ಡೈವರ್ಶನ್ ವಿಯರ್ 1100 ಕ್ಯೂಸೆಕ್ಸ್ ನೀರು ಸಂಗ್ರಹಿಸಿಕೊಳ್ಳುವ ಸಾಮರ್ಥ್ಯ ಹೊಂದಿದೆ. ಈ ಡೈವರ್ಶನ್ ವಿಯರ್ ನಿರ್ಮಾಣವಾಗಿರುವುದು ಕೇವಲ ವರಾಹಿ ನೀರಾವರಿ ಯೋಜನೆಯ ಎಡ ದಂಡೆ, ಬಲ ದಂಡೆ ಮತ್ತು ಏತ ನೀರಾವರಿಯ ಕಾಲುವೆಗಳಿಗೆ ನೀರುಣಿಸಲು, ಉಳಿದ ಎಲ್ಲಾ ಇತರೇ ಯೋಜನೆಗಳಿಗೆ ವರಾಹಿ ನದಿಯಿಂದಲೇ ನೀರನ್ನು ಎತ್ತಬೇಕು. ಆದರೆ ರೈತರ ಜೀವನಾಡಿಯಾದ ವರಾಹಿ ಡೈವರ್ಶನ್ ವಿಯರ್ ನಿಂದಲೇ ಸಿದ್ಧಾಪುರ ಏತ ನೀರಾವರಿ ಯೋಜನೆಗೆ ನೀರನ್ನು ಎತ್ತ ಬೇಕು ಎನ್ನುವ ಸಂಸದರ ಒತ್ತಾಯ ವರಾಹಿ ನದಿ ಪಾತ್ರದ ರೈತರ ಹಾಗೂ ವರಾಹಿ ನದಿ ನೀರನ್ನೇ ನಂಬಿ ಬದುಕುತ್ತಿರುವ ಕುಂದಾಪುರ ಪುರಸಭೆ ಹಾಗೂ ಸುಮಾರು ಹನ್ನೆರಡು ಗ್ರಾಮ ಪಂಚಾಯತುಗಳ ಜನಸಾಮಾನ್ಯರಿಗೆ ಮಾಡುತ್ತಿರುವ ದ್ರೋಹವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಸಂಸದರು ಹೇಳಿದಂತೆ ವರಾಹಿ ಡೈವರ್ಶನ್ ವಿಯರ್ ಪಕ್ಕದಲ್ಲೇ ಸಿದ್ಧಾಪುರ ಏತ ನೀರಾವರಿ ಯೋಜನೆಯ ಜಾಕ್ ವೆಲ್ ನಿರ್ಮಾಣವಾದರೆ ಡೈವರ್ಶನ್ ವಿಯರ್ ಗೆ ಅಪಾಯ ಕಟ್ಟಿಟ್ಟಬುತ್ತಿ. ಕುಂದಾಪುರ ತಾಲ್ಲೂಕು ರೈತ ಸಂಘ ಸಿದ್ಧಾಪುರ ಏತ ನೀರಾವರಿ ಯೋಜನೆ ಆದಷ್ಟು ಬೇಗ ಜಾರಿಯಾಗಲಿ ಎಂದು ಆಶಿಸುತ್ತದೆ ಆದರೆ ಈ ಯೋಜನೆಯ ಜಾಕ್ ವೆಲ್ ಮಾತ್ರ ವರಾಹಿ ನದಿ ಪಕ್ಕದಲ್ಲೇ ನಿರ್ಮಾಣವಾಗಬೇಕು ಇಲ್ಲದೆ ಇದ್ದರೆ ವರಾಹಿ ನದಿ ಪಾತ್ರದ ರೈತರು ಹಾಗೂ ಕುಡಿಯುವ ನೀರು ಬಳಕೆದಾರರನ್ನು ಸೇರಿಸಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಖಂಡಿಸಿ ಕೃಷ್ಣರಾಜ...

ಕಾರವಾರ | ಚುನಾವಣಾ ಆಯೋಗ ಸುಧಾರಣೆಗೆ ಆಗ್ರಹ: ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ KPRS ಒತ್ತಾಯ

ಕಾರವಾರ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ...

ಹಾಸನ | ಹೇಮಾವತಿ ನಾಲೆ: ಯುವಕನ ಮೃತ ದೇಹ ಪತ್ತೆ 

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಹೇಮಾವತಿ ನಾಲೆಯಲ್ಲಿ ಯುವಕನ ಮೃತ ದೇಹ...

ಹಾಸನ | ‘ಪ್ರಜಾಸೇವಾ’ ಇಬ್ಬರ ಅಧಿಕಾರಿಗಳು ಅಮಾನತು; ಡಿಸಿ ಆದೇಶ 

ಹಾಸನ ಜಿಲ್ಲೆ  ಸಕಲೇಶಪುರ ತಾಲೂಕಿನಲ್ಲಿ ನಡೆದ ‘ಪ್ರಜಾಸೇವಾ’ ಆಂದೋಲನದಲ್ಲಿ ಸಾರ್ವಜನಿಕರಿಂದ ಸಾಲು...