ಉಡುಪಿ | ವಿದ್ಯಾರ್ಥಿ-ಯುವಜನ ವಿರೋಧಿ ಬಿಜೆಪಿ ಸರ್ಕಾರ: ಕೆ. ವಿಕಾಸ್ ಹೆಗ್ಡೆ ಆರೋಪ

Date:

ದೇಶದ ರಾಜಧಾನಿಯಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳು ಹಾಗೂ ಯುವಜನರ ವಿರುದ್ಧ ಕೇಂದ್ರ ಸರ್ಕಾರ ಅಮಾನುಷವಾಗಿ ನಡೆದುಕೊಳ್ಳುತ್ತಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆರೋಪಿಸಿದ್ದಾರೆ.

- Advertisement -

ಪತ್ರಿಕಾ ಪ್ರಕಟಣೆಯಲ್ಲಿ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಟೀಕಿಸಿದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಯನ್ನು ಆಲಿಸಬೇಕಾದ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸದಲ್ಲಿರುವುದು ದುರದೃಷ್ಟಕರ ಬೆಳವಣಿಗೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿ, ಭಾರಿ ಜನಪ್ರಿಯತೆ ಗಳಿಸಿದರೂ ಸದಾ ವಿನಯ ಮತ್ತು ಸರಳತೆ ದೇವಾ ಅವರಲ್ಲಿ ಎದ್ದು ಕಾಣುತ್ತಿತ್ತು. ಇಂತಹ...

ಜಿರಳೆ ಪ್ರತಿಕೃತಿ ದಹನದ ನೆಪದಲ್ಲಿ ಯುವ ದನಿಯನ್ನು ಹತ್ತಿಕ್ಕುವ...

ದೆಹಲಿಯ ಪೀತಾಂಪುರದಲ್ಲಿ ಮಂಗಳವಾರ ನಡೆದ ದಸರಾ ಆಚರಣೆಯು ಈ ಬಾರಿ ಧಾರ್ಮಿಕ ಶ್ರದ್ಧೆಗಿಂತ ಹೆಚ್ಚಾಗಿ ಆಡಳಿತಾರೂಢ ಬಿಜೆಪಿ ಸರ್ಕಾರದ ಅಹಂಕಾರ ಮತ್ತು ಯುವಜನ ವಿರೋಧಿ ಮನಸ್ಥಿತಿಯ ನೇರ ಪ್ರದರ್ಶನವಾಗಿ ಮಾರ್ಪಟ್ಟಿತು. ರಾವಣ, ಕುಂಭಕರ್ಣ...

ಪಶ್ಚಿಮ ಪದವೀಧರರ ಕ್ಷೇತ್ರ: ಭದ್ರಕೋಟೆ ಮರುಹಿಡಿಯಲು ಕಾಂಗ್ರೆಸ್ ಯತ್ನ;...

ಪಶ್ಚಿಮ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣಾ ಕಾವು ಗರಿಗೆದರಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ನಡುವೆ ಜಿದ್ದಾಜಿದ್ದಿಗೆ ವೇದಿಕೆ ಸಜ್ಜಾಗಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಪಶ್ಚಿಮ ಪದವೀಧರರ ಕ್ಷೇತ್ರವೀಗ ಬಿಜೆಪಿಯ...

ಯುವಜನರು ಮತ್ತು ವಿದ್ಯಾರ್ಥಿಗಳ ಪರ ಎಂದು ಹೇಳಿಕೊಳ್ಳುವ ಬಿಜೆಪಿ, ವಾಸ್ತವದಲ್ಲಿ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ ಅವರು, ವಿದ್ಯಾರ್ಥಿ ಸಮುದಾಯ ಮತ್ತು ನಿರುದ್ಯೋಗಿ ಯುವಕರ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರ ಯುವಜನರ ಹಿತಕ್ಕಾಗಿ ಕೆಲಸ ಮಾಡಿದ ಪಕ್ಷ ಕಾಂಗ್ರೆಸ್ ಎಂದು ಹೇಳಿದ ಅವರು, ಮತದಾನದ ಹಕ್ಕು, ಶಿಕ್ಷಣ, ಉದ್ಯೋಗ ಮತ್ತು ಸಮಾನ ಅವಕಾಶಗಳನ್ನು ಕಾಂಗ್ರೆಸ್ ಒದಗಿಸಿದೆ ಎಂದು ಪ್ರತಿಪಾದಿಸಿದರು.

ಭಾಷಣ ಮತ್ತು ಭರವಸೆಗಳ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳು ಮತ್ತು ಯುವಜನತೆಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದ ಕೆ. ವಿಕಾಸ್ ಹೆಗ್ಡೆ, ಮುಂದಿನ ದಿನಗಳಲ್ಲಿ ವಿದ್ಯಾರ್ಥಿ ಹಾಗೂ ಯುವ ಸಮುದಾಯ ಸೂಕ್ತ ಉತ್ತರ ನೀಡಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.23ರಂದು ‘ಊರೂರೂ ಜಂತರ್ ಮಂತರ್’ ಉಡುಪಿಯಲ್ಲೂ ಪ್ರತಿಭಟನೆ ಮತ್ತು ಜಾಥಾ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಮತದಾರರ...

ಉಡುಪಿಯಲ್ಲಿ ನವೀಕೃತ ಆಭರಣ ಜ್ಯುವೆಲ್ಲರ್ಸ್ ಮಳಿಗೆ ಅ. 21ರಂದು ಪುನರಾರಂಭ

ಉಡುಪಿ ನಗರದ ಸಿಬಿ ರಸ್ತೆಯಲ್ಲಿರುವ ಆಭರಣ ಜ್ಯುವೆಲ್ಲರ್ಸ್‌ನ ಮೂಲ ಮಳಿಗೆಯನ್ನು ಆಧುನಿಕ...

ಉಡುಪಿ | ಉಚ್ಚಿಲ ದಸರಾ ಶೋಭಾಯಾತ್ರೆ: ಅ. 21ರಂದು ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ-ಉಚ್ಚಿಲ ದಸರಾ 2026ರ ಅಂಗವಾಗಿ...

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...