ಉಡುಪಿ | ವರಾಹಿ ಏತ ನೀರಾವರಿ ಸ್ಥಗಿತಕ್ಕೆ ಕೇಂದ್ರ ಸರ್ಕಾರವೇ ಹೊಣೆ : ವಿಕಾಸ್ ಹೆಗ್ಡೆ

Date:

ಶೇಖಡಾ 90 ರಷ್ಟು ಕಾಮಗಾರಿ ಮುಗಿದು ಅರಣ್ಯ ಇಲಾಖೆಯ ಅನುಮತಿ ದೊರೆಯದೆ ರೈತರ ಬಹು ವರ್ಷದ ನೀರಿಕ್ಷೆಯ ವರಾಹಿ ಮೂಲ ಯೋಜನೆಯ ಏತ ನೀರಾವರಿ ಕಾಲುವೆ ಕಾಮಗಾರಿ ಹಳ್ಳ ಹಿಡಿಯಲು ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಬಿಜೆಪಿ ಜನಪ್ರತಿನಿದಿನಗಳೆ ನೇರ ಹೊಣೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆರೋಪ ಮಾಡಿದ್ದಾರೆ.

- Advertisement -

ವರಾಹಿ ಏತ ನೀರಾವರಿ ಯೋಜನೆ ಮುಕ್ತಾಯದ ಹಂತದಲ್ಲಿದ್ದು ಈಗ ಕಾಮಗಾರಿ ಇರುವ ಹಂತದಲ್ಲೇ ಸ್ಥಗಿತಗೊಳ್ಳುವ ನೀರಾವರಿ ಇಲಾಖೆಯ ಆದೇಶ ಅದೆಷ್ಟೋ ವರ್ಷಗಳಿಂದ ನೀರಿಗಾಗಿ ಕಾಯುತ್ತಿರುವ ರೈತ ಬಂಧುಗಳಿಗೆ ಬರಸಿಡಿಲು ಬಡಿದಂತಾಗಿದೆ. ಫಲವತ್ತಾದ ಭೂಮಿ ಕಳೆದುಕೊಂಡರೂ ಸಹ ಉಳಿದ ಭೂಮಿಗೆ ಹಾಗೂ ನೀರಿನ ಆಶ್ರಯಕ್ಕಾಗಿ ಕಾಯುತ್ತಿರುವ ಅದೆಷ್ಟೋ ರೈತರಿಗೆ ಹಾಗೂ ಕುಡಿಯುವ ನೀರು ಬಳಕೆದಾರರ ಬಹು ನಿರೀಕ್ಷೆಯ ವರಾಹಿ ಏತ ನೀರಾವರಿ ಹಾದು ಹೋಗುವ ಬಿಲ್ಲಾಡಿ, ಶಿರಿಯಾರ, ಆವರ್ಸೆ, ಮಂದಾರ್ತಿ, ಬ್ರಹ್ಮಾವರ ಮುಂತಾದ ಭಾಗಗಳ ರೈತರಿಗೆ ಅನ್ಯಾಯ ಮಾಡಿದ್ದು ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಬಿಜೆಪಿ ಜನಪ್ರತಿನಿದಿನಗಳು. ಮಾಹಿತಿಯಂತೆ ವರಾಹಿ ನೀರಾವರಿ ಯೋಜನೆಗೆ ಅಗತ್ಯವಾದ ಅರಣ್ಯ ಭೂಮಿ ಈಗಾಗಲೇ ಅರಣ್ಯ ಇಲಾಖೆಯಿಂದ ಅನುಮತಿ ದೊರೆತು ಅವುಗಳ ಸಂಪೂರ್ಣ ಬಳಕೆಯಾಗಿದೆ, ಇನ್ನು ಹೆಚ್ಚುವರಿ ಅರಣ್ಯ ಭೂಮಿಯನ್ನು ಮಂಜೂರು ಮಾಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ ಆದರೆ ಅನುಮತಿಗಾಗಿ ಪ್ರಸ್ತಾವನೆ ಸಲ್ಲಿಸುವುದು ರಾಜ್ಯ ಸರ್ಕಾರ ಆದರೆ ಅದೆಷ್ಟೋ ವರ್ಷಗಳಿಂದ ಜಿಲ್ಲೆಯ ಶಾಸಕರುಗಳು ಹಾಗೂ ಸಂಸದರು ಬಿಜೆಪಿ ಪಕ್ಷದವರು. ಈಗ ತಮ್ಮ ತಪ್ಪನ್ನು ಮರೆಮಾಚಲು ರೈತರ ಸಭೆಗಳನ್ನು ನಡೆಸಿ ಬಿಜೆಪಿ ಮುಖಂಡರುಗಳು ನಾಟಕ ಮಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಪ್ರಯಾಣಿಕರಲ್ಲಿ, ವಿಶೇಷವಾಗಿ ಮಹಿಳೆಯರಲ್ಲಿ ಭಯದ...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಬಿಜೆಪಿ ಮುಖಂಡರಿಗಳಿಗೆ ನಿಜವಾಗಿ ಈ ಸಮಸ್ಯೆ ಪರಿಹಾರ ಆಗಬೇಕು ಎಂದಿದ್ದರೆ ಅವರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಂಬಂಧಿತ ಇಲಾಖಾ ಸಚಿವರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡಿ ಸಮಸ್ಯೆಯನ್ನು ಮನವರಿಕೆ ಮಾಡಲಿ, ಅದನ್ನಾ ಬಿಟ್ಟು ರಾಜ್ಯ ಸರ್ಕಾರ, ಗುತ್ತಿಗೆದಾರರನ್ನು ಬೊಟ್ಟು ಮಾಡುವುದು ಸರಿಯಲ್ಲಾ. ಯೋಜನೆ ಪ್ರಾರಂಭವಾಗಿ ಏಳು ವರ್ಷವಾಗಿದೆ, ಏಳೂ ವರ್ಷಗಳಿಂದ ಇಲ್ಲಿನ ಶಾಸಕರು ಹಾಗೂ ಸಂಸದರು ಬಿಜೆಪಿ ಪಕ್ಷದವರು, ಈ ಸಮಸ್ಯೆಗಳಿಗೆ ಅವರಲ್ಲಿನ ಜನಪರ ಹಾಗೂ ರೈತಪರ ಕಾಳಜಿಯ ಕೊರತೆಯೇ ಕಾರಣ. ಇನ್ನಾದರೂ ಬಿಜೆಪಿ ನಾಯಕರುಗಳು ಬೀದಿ ನಾಟಕ ಮಾಡುವುದನ್ನು ಬಿಟ್ಟು ವರಾಹಿ ಏತ ನೀರಾವರಿ ಯೋಜನೆ ಶೀಘ್ರ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಿ ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...