ಉಡುಪಿ | ಅಣಕು ನ್ಯಾಯಾಲಯ ಸ್ಪರ್ಧೆಗಳು ವಕೀಲ ವೃತ್ತಿಗೆ ದಿಕ್ಕು ತೋರಿಸುತ್ತವೆ: ನ್ಯಾಯಮೂರ್ತಿ ಎಂ.ಜಿ. ಉಮಾ

Date:

ವಕೀಲ ವೃತ್ತಿಯಲ್ಲಿ ಯಶಸ್ಸು ಸಾಧಿಸಲು ಸಾಕ್ಷಿಗಳು ಮತ್ತು ಕಕ್ಷಿಗಾರರೊಂದಿಗೆ ಉತ್ತಮ ಬಾಂಧವ್ಯ, ಸಮರ್ಪಕ ವಾದಪತ್ರಗಳ ರಚನೆ ಹಾಗೂ ಮೌಖಿಕ ವಾಕ್‌ಚಾತುರ್ಯ ಮಾತ್ರವಲ್ಲದೆ ಸಹಾನುಭೂತಿ ಮತ್ತು ಮಾನವೀಯತೆ ಅತ್ಯಂತ ಅಗತ್ಯವೆಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಎಂ.ಜಿ. ಉಮಾ ಅಭಿಪ್ರಾಯಪಟ್ಟರು.

- Advertisement -

ಅವರು ಉಡುಪಿಯ ವೈಕುಂಠಬಾಳಿಗಾ ಕಾನೂನು ಕಾಲೇಜಿನಲ್ಲಿ ಆಯೋಜಿಸಲಾದ 10ನೇ ವರ್ಷದ ಅಡ್ವೊಕೇಟ್ ಪಿ. ಶಿವಾಜಿ ಶೆಟ್ಟಿ ಸ್ಮಾರಕ ರಾಷ್ಟ್ರೀಯ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಇಂತಹ ಅಣಕು ನ್ಯಾಯಾಲಯ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ವಕೀಲ ವೃತ್ತಿಗೆ ಅಗತ್ಯವಾದ ಕೌಶಲ್ಯಗಳನ್ನು ಅರಿತುಕೊಳ್ಳಲು ಇದು ಪ್ರಾಯೋಗಿಕ ಮಾರ್ಗದರ್ಶನ ಒದಗಿಸುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಬೆಂಗಳೂರಿನ ಆಲೆಯನ್ಸ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ಕಾನೂನು ಕಾಲೇಜಿನ ಪ್ರಾಕ್ತನ ಪ್ರಾಂಶುಪಾಲರಾದ ಪ್ರೊ. (ಡಾ.) ಪ್ರಕಾಶ್ ಕಣಿವೆ ಮುಖ್ಯ ಅತಿಥಿಯಾಗಿ ಭಾಗವಹಿಸಿ, ರಾಷ್ಟ್ರೀಯ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಗಳ ಆರಂಭಿಕ ಹಂತಗಳ ಕುರಿತು ವಿವರಿಸಿದರು.

ವಿಬಿಸಿಎಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಖ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಿ. ಪಿ. ಶಿವಾಜಿ ಶೆಟ್ಟಿ ಅವರ ಧರ್ಮಪತ್ನಿ ಜಯಂತಿ ಶಿವಾಜಿ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾನವಿಕ ವಿಭಾಗದ ಮುಖ್ಯಸ್ಥರಾದ ಪ್ರೊ. ರೋಹಿತ್ ಎಸ್. ಅಮೀನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀಧರ್ ಪಿ.ಎಸ್., ಸಹಾಯಕ ಪ್ರಾಧ್ಯಾಪಕರಾದ ಡಾ. ಶ್ರೀನಿವಾಸ ಪ್ರಸಾದ್ ಹಾಗೂ ಅಣಕು ನ್ಯಾಯಾಲಯ ಸಮಿತಿಯ ಕಾರ್ಯದರ್ಶಿಗಳಾದ ಸಾಯಿ ರಮ್ಯ ಮತ್ತು ಅಪರ್ಣಲಕ್ಷ್ಮೀ ಉಪಸ್ಥಿತರಿದ್ದರು.

ಶ್ರೀನಿಧಿ ಪ್ರಾರ್ಥನೆ ಸಲ್ಲಿಸಿದರು. ರಿಶಾಲಿ ವಂದಿಸಿದರು. ಸಿಮ್ರಾನ್ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...