ಉಡುಪಿ | ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಸಾಲ–ಸಹಾಯಧನಕ್ಕೆ ಅರ್ಜಿ ಆಹ್ವಾನ

Date:

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ನಿಗಮದ ವತಿಯಿಂದ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಹೊಸದು ಹಾಗೂ ನವೀಕರಣ ಅರಿವು–ಶೈಕ್ಷಣಿಕ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಾಂಗ ಯೋಜನೆ, ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆ ಹಾಗೂ ಹೊಲಿಗೆ ಯಂತ್ರ/ಝೀಗ್ ಝ್ಯಾಗ್ ಯೋಜನೆಗಳಡಿ ಸೌಲಭ್ಯ ಒದಗಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಅರ್ಹ ಫಲಾನುಭವಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್‌ಜಿ ಜನಸ್ನೇಹಿ ಕೇಂದ್ರ ಹಾಗೂ ನಾಗರಿಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ ಅಥವಾ ಕೇಂದ್ರ ಕಚೇರಿಯ 080-22374848 / 7899899039 ಸಂಖ್ಯೆಗೆ ಸಂಪರ್ಕಿಸಬಹುದು. ಉಡುಪಿ ಜಿಲ್ಲಾ ಮಟ್ಟದಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ – 0820-2574882 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಈಶಾನ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಶೇ. 86.02ರಷ್ಟು ಮತದಾನ

ಅಕ್ಟೋಬ‌ರ್ 23ರಂದು ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು, ಒಟ್ಟು...

ವಿಜಯಪುರ |ಯುವಜನತೆ ಚೆನ್ನಮ್ಮಳ ಧೈರ್ಯ, ದೇಶಪ್ರೇಮವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲಿ: ಡಾ. ಆನಂದ ಕೆ.

ಬ್ರಿಟಿಷರ ದಬ್ಬಾಳಿಕೆ ಮತ್ತು ಅನ್ಯಾಯದ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ವೀರರಾಣಿ ಕಿತ್ತೂರು...

ಕಲಬುರಗಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ, ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಒತ್ತಾಯಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಮುಖ್ಯ...

ಉಡುಪಿ ಜಿಲ್ಲೆಯಲ್ಲಿ 484 ಕೈಗಾರಿಕಾ ಹುದ್ದೆಗಳು ಖಾಲಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಮುಂದೆ ಬರುತ್ತಿರುವ ಉದ್ಯಮಿಗಳಿಗೆ ಅಗತ್ಯ...