ವಿಶ್ವ ವಿಕಲಚೇತನರ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

Date:

ವಿಶ್ವ ವಿಕಲಚೇತನರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಸಮರ್ಪಕವಾಗಿ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಜಿಲ್ಲಾಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಡಿಸೆಂಬರ್ 3ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೂ ಮುನ್ನ ವಿಶೇಷಚೇತನ ಮಕ್ಕಳು ಸಿದ್ಧಪಡಿಸಿರುವ ಕರಕುಶಲ ವಸ್ತುಗಳ ಪ್ರದರ್ಶನ ಆಯೋಜಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ವಿಶೇಷಚೇತನರು ಹಾಗೂ ವಿಶೇಷ ಮಕ್ಕಳನ್ನು ಕಾರ್ಯಕ್ರಮಕ್ಕೆ ಕರೆತರುವಂತೆ ವಿಶೇಷ ಶಾಲೆಗಳ ಮುಖ್ಯಸ್ಥರು ಮತ್ತು ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಕ್ರಮವಹಿಸಬೇಕು ಎಂದರು.

ವಿಶೇಷಚೇತನರಿಗಾಗಿ ಕ್ರೀಡಾಕೂಟ ಆಯೋಜಿಸಿ, ವಿಜೇತರಿಗೆ ಜಿಲ್ಲಾಮಟ್ಟದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಬೇಕು. ಅಲ್ಲದೆ, ವಿಶೇಷಚೇತನರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸ್ಪರ್ಧೆಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಸೂಚಿಸಿದರು.

ಕಾರ್ಯಕ್ರಮದಂದು ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಗಣ್ಯರು ಹಾಗೂ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ವೇದಿಕೆ ಕಾರ್ಯಕ್ರಮಕ್ಕೆ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮುಂಚಿತವಾಗಿ ಪೂರ್ಣಗೊಳಿಸಬೇಕು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ವಿಶೇಷಚೇತನರನ್ನು ಗುರುತಿಸಿ ಗೌರವಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿಶೇಷಚೇತನರು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ವ್ಯಾಪಕ ಪ್ರಚಾರ ಕೈಗೊಂಡು, ಎಲ್ಲ ಇಲಾಖೆಗಳು ಮತ್ತು ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಇದೇ ವೇಳೆ ನವೆಂಬರ್ ತಿಂಗಳ ಅಂತ್ಯದಲ್ಲಿ 21 ಬಗೆಯ ಅಂಗವಿಕಲತೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾ ಡಿ.ಡಿ.ಆರ್.ಸಿ ಕೇಂದ್ರ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳು ಹಾಗೂ ಎಂ.ಆರ್.ಡಬ್ಲ್ಯುಗಳ ಸಹಯೋಗದಲ್ಲಿ ವಿಕಲಚೇತನರ ಸಪ್ತಾಹ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ವಿಶೇಷಚೇತನರಿಗೆ ಸರ್ಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳು ಮತ್ತು ಯೋಜನೆಗಳ ಕುರಿತು ಹೆಚ್ಚಿನ ಅರಿವು ಮೂಡಿಸಲು ಕ್ರಮವಹಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಕೆ., ವಿಕಲಚೇತನರ ಸ್ವಯಂಸೇವಾ ಸಂಸ್ಥೆಗಳು ಹಾಗೂ ಪುನರ್ವಸತಿ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʻಈ ದಿನʼ ಓದುಗರ ಸಮಾವೇಶ: ಮಂಗಳೂರಿನಲ್ಲಿ ಯಶಸ್ವಿ ಪೂರ್ವಭಾವಿ ತಯಾರಿ ಸಭೆ

ಸತ್ಯ, ನ್ಯಾಯ ಮತ್ತು ಪ್ರೀತಿಯ ತಳಹದಿಯೊಂದಿಗೆ ಜನರೇ ಕಟ್ಟಿಕೊಳ್ಳುತ್ತಿರುವ ವಿನೂತನ ಡಿಜಿಟಲ್...

ವಿಜಯಪುರ | ಕೈಗಾರಿಕಾ ಕ್ರಾಂತಿಗೆ ಮುನ್ನುಡಿ: 12,000 ಉದ್ಯೋಗ ಸೃಷ್ಟಿಯ ಗುರಿ

ಕೈಗಾರಿಕೆಗಳನ್ನು ಬೆಂಗಳೂರು ಸುತ್ತಮುತ್ತ ಮಾತ್ರ ಸೀಮಿತಗೊಳಿಸದೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೂ ವಿಸ್ತರಿಸುವ...

ವಿಜಯಪುರ | ಆಲಮಟ್ಟಿ ನೀರು ತೆಲಂಗಾಣಕ್ಕೆ ಹರಿಸಿದ್ದರ ಲೆಕ್ಕ ಕೊಡಿ: ರೈತ ಸಂಘ ಆಗ್ರಹ

ವಿಜಯಪುರ–ಬಾಗಲಕೋಟ ಜಿಲ್ಲೆಗಳ ರೈತರಿಗೆ ಸಮರ್ಪಕ ನೀರು ಒದಗಿಸದೆ, ಆಲಮಟ್ಟಿ ಜಲಾಶಯದಿಂದ ನಾರಾಯಣಪುರದ...

ಮುಳಬಾಗಿಲು | ಅಕ್ರಮ ಮರಳು ಫಿಲ್ಟರ್ ದಂಧೆ: ನಂಗಲಿ ಪಿಎಸ್ಐ,ಎಸ್‌ಬಿ ಕಾನ್ಸ್‌ಟೇಬಲ್ ಅಮಾನತು

ಅಕ್ರಮ ಮರಳು ಫಿಲ್ಟರ್ ದಂಧೆ ತಡೆಯುವಲ್ಲಿ ವಿಫಲವಾದ ಹಾಗೂ ಅಕ್ರಮ ಚಟುವಟಿಕೆಗಳಿಗೆ...