ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

Date:

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಿತ್ಯ ಜೀವನದಲ್ಲಿ ಪಾಲಿಸಬೇಕೆಂದು ಶಾಸಕ ಯಶ್ ಪಾಲ್ ಎ ಸುವರ್ಣ ಹೇಳಿದರು.

- Advertisement -

ಅವರು ಇಂದು ನಗರದ ಅಜ್ಜರಕಾಡು ಭುಜಂಗ ಶೆಟ್ಟಿ ಪಾರ್ಕಿನ ಗಾಂಧಿ ಕಟ್ಟೆಯಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ನಗರಸಭೆ ಉಡುಪಿ ಇವರ ಸಹಯೋಗದಲ್ಲಿ ಆಯೋಜಿಸಿಲಾದ ಜಿಲ್ಲಾಮಟ್ಟದ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಸ್ವಾತಂತ್ರ ಪೂರ್ವದಲ್ಲಿ ಮಹಾತ್ಮ ಗಾಂಧೀಜಿಯವರು ಸತ್ಯ ಹಾಗೂ ಅಹಿಂಸ ಹೋರಾಟ ದಿಂದ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟರು, ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರು ಉಡುಪಿಯ ನಗರದ ಅಜ್ಜರಕಾಡುವಿಗೆ ಭೇಟಿ ನೀಡಿ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರನ್ನು ಒಂದೆಡೆ ಸೇರಿಸಿ ಸ್ವಾತಂತ್ರ್ಯ ಹೋರಾಟಕ್ಕೆ ಕರೆ ನೀಡಿದ್ದರು.
ಅವರ ಸವಿನೆನಪಿಗಾಗಿ ಇಲ್ಲಿ ಗಾಂಧೀಜಿಯವರ ಪುತ್ಥಳ್ಳಿಯನ್ನು ಭುಜಂಗಶೆಟ್ಟಿ ಪಾರ್ಕಿನಲ್ಲಿ ನಿರ್ಮಾಣ ಮಾಡಲಾಗಿದೆ ಹಾಗೂ ಜಿಲ್ಲಾ ಆಟದ ಮೈದಾನಕ್ಕೆ ಮಹಾತ್ಮ ಗಾಂಧೀಜಿಯವರ ಹೆಸರನ್ನು ಇಡಲಾಗಿದೆ ಎಂದರು.

ಗಾಂಧೀಜಿಯವರ ಜಯಂತಿ ಅಂಗವಾಗಿ ಸ್ವಚ್ಛತಾ ಅಭಿಯಾನದ ಕಾರ್ಯಕ್ರಮವನ್ನು ರಾಷ್ಟ್ರದಾದ್ಯಂತ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ದೇಶದ ಎಲ್ಲೆಡೆ ಸ್ವಚ್ಛ ಭಾರತ ಅಭಿಯಾನವನ್ನು ಆಯೋಜಿಸಿದರು. ವಿಶ್ವದ ಎಲ್ಲಾ ರಾಷ್ಟ್ರಗಳು ಸಹ ಇದನ್ನು ಅನುಸರಿಸುತ್ತಿದ್ದಾರೆ ಎಂದ ಅವರು, ಉಡುಪಿ ನಗರವನ್ನು ಸ್ವಚ್ಛ ನಗರವನ್ನಾಗಿಸಲು ಎಲ್ಲರೂ ಕೈಜೋಡಿಸೋಣ ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಮಾತನಾಡಿ, ನಮ್ಮ ರಾಷ್ಟ್ರಪಿತರಾದ ಮಹಾತ್ಮ ಗಾಂಧೀಜಿಯವರು ಸತ್ಯ, ಅಹಿಂಸೆ ಮಾರ್ಗವನ್ನು ಅನುಸರಿಸಿ ಎಲ್ಲಾ ವರ್ಗದ ಜನರನ್ನು ಒಟ್ಟುಗೂಡಿಸುವುದರೊಂದಿಗೆ ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟರು. ಅವರ ತ್ಯಾಗವನ್ನು ನಾವೆಲ್ಲರೂ ಸ್ಮರಿಸಲೇಬೇಕು ಎಂದ ಅವರು , ಗಾಂಧೀಜಿಯವರ ಆಶಯದಂತೆ ಸ್ವಚ್ಛತೆಗೆ ಆದ್ಯತೆ ನೀಡುವುದರೊಂದಿಗೆ ಅವರ ಕನಸನ್ನು ನನಸು ಮಾಡಿಸುವ ಮೂಲಕ ಅವರಿಗೆ ಗೌರವ ಸಲ್ಲಿಸೋಣ ಎಂದರು. ಲಾಲ್ ಬಹದ್ದೂರ್ ಶಾಸ್ತ್ರಿ ಅವರ 122ನೇ ಜನ್ಮ ದಿನಾಚರಣೆ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಆಬೀದ್ ಗದ್ಯಾಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಶೆಟ್ಟಿ, ನಗರಸಭಾ ಆಯುಕ್ತ ಮಹಾಂತೇಶ್ ಹಂಗರಗಿ ,ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್.ಬಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...