ಉಡುಪಿ | ದ್ವೇಷ ಭಾಷಣ ಪ್ರಕರಣ: ಉಡುಪಿ ನಗರ ಠಾಣೆಗೆ ಹಾಜರಾದ ಶಾಸಕ ಯಶ್ ಪಾಲ್ ಸುವರ್ಣ

Date:

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಗುರುವಾರ ರಾತ್ರಿ ಉಡುಪಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ಪೊಲೀಸರ ವಿಚಾರಣೆಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

ಮಂಗಳವಾರ ಉಡುಪಿ ನಗರದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಅವರು ರಾಹುಲ್ ಗಾಂಧಿ ವಿರುದ್ಧ ಆಕ್ಷೇಪಾರ್ಹ ಹಾಗೂ ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿದ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಪ್ರಕರಣ ದಾಖಲಾದ ಬಳಿಕ ಬುಧವಾರ ಉಡುಪಿ ನಗರ ಪೊಲೀಸರು ಶಾಸಕರ ನಿವಾಸಕ್ಕೆ ತೆರಳಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದರು. ಅದರಂತೆ ಗುರುವಾರ ರಾತ್ರಿ ಸುಮಾರು 8.25ಕ್ಕೆ ಯಶ್ ಪಾಲ್ ಸುವರ್ಣ ಅವರು ನಗರ ಪೊಲೀಸ್ ಠಾಣೆಗೆ ಆಗಮಿಸಿದರು.

ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಕೇಳಿದ್ದು, ಅದಕ್ಕೆ ಶಾಸಕರು ತಮ್ಮ ಉತ್ತರಗಳನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ. ಸುಮಾರು ಒಂದು ಗಂಟೆಗಳ ಕಾಲ ನಡೆದ ವಿಚಾರಣೆಯ ಬಳಿಕ ಅವರು ರಾತ್ರಿ 9.30ರ ಸುಮಾರಿಗೆ ಪೊಲೀಸ್ ಠಾಣೆಯಿಂದ ತೆರಳಿದರು.

ಈ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಪ್ರತಿಕ್ರಿಯೆಸಿದ್ದು, ಪೊಲೀಸರ ನೋಟಿಸ್‌ಗೆ ಸ್ಪಂದಿಸಿ ಅವರು ತನಿಖಾಧಿಕಾರಿ (ಐಒ) ಅವರ ಮುಂದೆ ಹಾಜರಾಗಿ, ತನಿಖೆಯ ವೇಳೆ ಕೇಳಲಾದ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಅವರು ನೀಡಿದ ಉತ್ತರಗಳ ಆಧಾರದ ಮೇಲೆ ಮುಂದಿನ ತನಿಖೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಪ್ರಕರಣದ ತನಿಖೆಯನ್ನು ಉಡುಪಿ ನಗರ ಪೊಲೀಸರು ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...

ಚಿಂತಾಮಣಿ | ನಳಂದ ವಿದ್ಯಾ ಮಂದಿರದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಯಶಸ್ವಿ

ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು...

ಕಲಬುರಗಿ | ಸಾರ್ವಜನಿಕ ಶಿಕ್ಷಣ ಬಲವರ್ಧನೆಗೆ ಎಸ್‌ಎಫ್‌ಐ ಆಗ್ರಹ: 17ನೇ ರಾಜ್ಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಕೆ

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸುವುದು, ಕೋಮು...