ಕಾಂಗ್ರೆಸ್ ಹಾಗೂ ಸಿಜೆಪಿ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರತಿಭಟನಾ ಕಾರ್ಯಕ್ರಮದ ವೇಳೆ ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಪ್ರಚೋದನಕಾರಿ ಹಾಗೂ ದ್ವೇಷ ಭಾಷಣ (ಹೇಟ್ ಸ್ಪೀಚ್) ಮಾಡಿದ್ದಾರೆ ಎಂಬ ಆರೋಪದಡಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಅವರು ನೀಡಿದ ದೂರಿನ ಆಧಾರದ ಮೇಲೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಸಂಖ್ಯೆ 103/2026 ದಾಖಲಿಸಲಾಗಿದೆ.
ಪ್ರಕರಣದಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 57, 192, 196(2), 352, 353(2) ಹಾಗೂ 351(2)ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆಯನ್ನು ಪೊಲೀಸರು ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.







