ಉಡುಪಿ | ಯಶ್ಪಾಲ್ ಸುವರ್ಣ ಭಾಷಣ ಭಯೋತ್ಪಾದಕ ಕೃತ್ಯ; ತಕ್ಷಣ ಬಂಧಿಸಬೇಕು: ಸುಂದರ ಮಾಸ್ಟರ್ ಆಗ್ರಹ

Date:

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಮಾಡಿರುವ ಭಾಷಣವು ಭಯೋತ್ಪಾದಕ ಕೃತ್ಯಕ್ಕೆ ಸಮಾನವಾಗಿದ್ದು, ಅವರನ್ನು ಕೂಡಲೇ ಬಂಧಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್‌ವಾದ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ಟರ್ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜನಪ್ರತಿನಿಧಿಯಾಗಿರುವ ವ್ಯಕ್ತಿಯೊಬ್ಬರು ಪುಡಿರೌಡಿಯ ರೀತಿಯ ವರ್ತನೆ ಪ್ರದರ್ಶಿಸುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಂಶವನ್ನು ಧ್ವಂಸ ಮಾಡುವುದಾಗಿ ಹಾಗೂ ನಟ ಪ್ರಕಾಶ್ ರಾಜ್ ಅವರನ್ನು ಅರಬ್ಬೀ ಸಮುದ್ರಕ್ಕೆ ಎಸೆದು ಮೀನಿಗೆ ಆಹಾರವಾಗುವ ಪರಿಸ್ಥಿತಿ ಬರಬಹುದು ಎಂಬ ರೀತಿಯ ಹೇಳಿಕೆಗಳು ಹಿಂಸೆಗೆ ಪ್ರಚೋದನೆ ನೀಡುವಂತಿವೆ ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಮನುಷ್ಯನ ನಾಲಿಗೆ ಆತನ ಸಂಸ್ಕಾರ ಮತ್ತು ಇತಿಹಾಸವನ್ನು ಪ್ರತಿಬಿಂಬಿಸುತ್ತದೆ ಎಂಬ ಮಾತು ಯಶ್ಪಾಲ್ ಸುವರ್ಣ ಅವರ ವಿಚಾರದಲ್ಲಿ ಅಕ್ಷರಶಃ ಸತ್ಯವಾಗಿದೆ ಎಂದು ಹೇಳಿರುವ ಸುಂದರ ಮಾಸ್ಟರ್, ಇಂತಹ ಹೇಳಿಕೆಗಳು ಉಡುಪಿಯ ಶಾಂತಿಯುತ ವಾತಾವರಣಕ್ಕೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳ ಬಗ್ಗೆ ಅವಹೇಳನಕಾರಿ ರೀತಿಯಲ್ಲಿ ಮಾತನಾಡಿರುವುದನ್ನು ಖಂಡಿಸಿರುವ ಅವರು, ಉಡುಪಿಯ ವಿದ್ಯಾರ್ಥಿಗಳು ಪ್ರಬುದ್ಧರಾಗಿದ್ದು, ಸತ್ಯಾಸತ್ಯತೆ ಅರಿಯುವ ಸಾಮರ್ಥ್ಯ ಹೊಂದಿದ್ದಾರೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಸಂದರ್ಭದಲ್ಲಿ ಪ್ರಜಾಸತ್ತಾತ್ಮಕ ರೀತಿಯಲ್ಲಿ ಉತ್ತರ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ.

ಇದೇ ವೇಳೆ, ಡ್ರಗ್ಸ್ ದಂಧೆಯ ಕುರಿತು ಯಶ್ಪಾಲ್ ಸುವರ್ಣ ಅವರಿಗೆ ಮಾಹಿತಿ ಇದೆ ಎಂದು ಅವರೇ ಹೇಳಿರುವ ಹಿನ್ನೆಲೆಯಲ್ಲಿ, ಸಂಬಂಧಪಟ್ಟ ತನಿಖಾ ಸಂಸ್ಥೆಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಮುಂದಿನ ದಿನಗಳಲ್ಲಿ ಸಮಾಜದಲ್ಲಿ ದ್ವೇಷ ಮತ್ತು ಅಶಾಂತಿ ಸೃಷ್ಟಿಸುವಂತಹ ಹೇಳಿಕೆಗಳು ಮುಂದುವರಿದರೆ, ಸಂವಿಧಾನ ಪರ ಸಂಘಟನೆಗಳು ಅನಿರ್ದಿಷ್ಟಾವಧಿ ಚಳುವಳಿ ರೂಪಿಸಲು ಮುಂದಾಗಬೇಕಾದ ಪರಿಸ್ಥಿತಿ ಎದುರಾಗಲಿದೆ ಎಂದು ಸುಂದರ ಮಾಸ್ಟರ್ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾಂಡೇಲಿ | ಆಶ್ರಯ ನಿವೇಶನ ಅಕ್ರಮವಾಗಿ ನೋಂದಣಿ ಆರೋಪ: ಕ್ರಮಕ್ಕೆ ಆಗ್ರಹಿಸಿ ದೂರು

ದಾಂಡೇಲಿ: ಜೋಯಿಡಾ ತಾಲೂಕಿನ ವೆಂಕಟೇಶ @ ಸ್ವಾಮಿ ಸುಬ್ಬಯ್ಯ ಭೂಪಾನಿ ಅವರಿಗೆ...

ಮುಂಡಗೋಡ | ಜುವೆಲರ್ಸ್ ಅಂಗಡಿಯಲ್ಲಿ 1.30 ಲಕ್ಷ ರೂ. ಮೌಲ್ಯದ ಬೆಳ್ಳಿ ಕಾಲು ಚೈನ್ ಕಳವು

ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯಲ್ಲಿರುವ ಶ್ರೀ ರಾಜಲಕ್ಷ್ಮೀ ಜುವೆಲರ್ಸ್ ಅಂಗಡಿಯಲ್ಲಿ ಸುಮಾರು...

ವಿಜಯಪುರ | ಡಾ. ಅಣ್ಣಾಭಾವು ಸಾಠೆ ಅವರಿಗೆ ‘ಭಾರತ ರತ್ನ’ ನೀಡಿ; ರಾಜ್ಯದಲ್ಲಿ ಜಯಂತಿ ಆಚರಿಸಿ

ಲೋಕಶಾಹಿರ ಡಾ. ಅಣ್ಣಾಭಾವು ಸಾಠೆ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ...

ರಾಯಚೂರು | ರಕ್ತನಿಧಿ ಕೇಂದ್ರ ಸ್ಥಾಪನೆ ಜೀವ ರಕ್ಷಣೆಯ ಮಹತ್ವದ ಕಾರ್ಯ: ಸಂಸದ ಜಿ.ಕುಮಾರ ನಾಯಕ

ರಕ್ತ ನಿಧಿ ಕೇಂದ್ರ ಬಹಳ ಅವಶ್ಯಕವಾಗಿದ್ದು ಇಂತಹ ಮಹತ್ವದ ಕಾರ್ಯಗಳು ಜನರ...