ಉಡುಪಿ | ತಾಯಿ-ಮಕ್ಕಳ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಮನವಿ: ಶಾಸಕ ಯಶ್ಪಾಲ್ ಸುವರ್ಣ

Date:

ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಹಾಗೂ ಮಕ್ಕಳ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಯಶ್ಪಾಲ್ ಸುವರ್ಣ ಅವರು ಆಸ್ಪತ್ರೆಯ ಮೂಲಸೌಕರ್ಯಗಳನ್ನು ಪರಿಶೀಲಿಸಿ ವೈದ್ಯಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು 200 ಹಾಸಿಗೆ ಸಾಮರ್ಥ್ಯದ ಜಿಲ್ಲಾಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ ಅಗತ್ಯ ವೈದ್ಯಕೀಯ ಹಾಗೂ ಸಿಬ್ಬಂದಿ ಹುದ್ದೆಗಳನ್ನು ಮಂಜೂರು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಪ್ರಸ್ತುತ ಆಸ್ಪತ್ರೆಯಲ್ಲಿ 70 ಹಾಸಿಗೆಗಳನ್ನು ಬಳಕೆ ಮಾಡಿಕೊಂಡು ವೈದ್ಯರು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದರೂ, ವಿಶಾಲ ಕಟ್ಟಡದ ನಿರ್ವಹಣಾ ವೆಚ್ಚವೇ ದೊಡ್ಡ ಸವಾಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಆಸ್ಪತ್ರೆಯ ಲಿಫ್ಟ್ ದುರಸ್ತಿಯಲ್ಲಿದ್ದು, ಹಲವು ಕಡೆಗಳಲ್ಲಿ ಮಳೆನೀರು ಸೋರಿಕೆಯಾಗುತ್ತಿರುವುದು, ಇಲಿ ಹಾಗೂ ಹೆಗ್ಗಣಗಳ ಕಾಟ ಹೆಚ್ಚಿರುವುದು ಗಮನಕ್ಕೆ ಬಂದಿದೆ. ಅಲ್ಲದೆ, ವಿದೇಶದಿಂದ ಆಮದು ಮಾಡಿರುವ ವೈದ್ಯಕೀಯ ಯಂತ್ರೋಪಕರಣಗಳ ನಿರ್ವಹಣೆಯೂ ದುಬಾರಿಯಾಗಿದ್ದು, ಆಸ್ಪತ್ರೆಯ ವಾರ್ಷಿಕ ನಿರ್ವಹಣೆಗೆ ಸುಮಾರು 60 ಲಕ್ಷ ರೂಪಾಯಿ ಅಗತ್ಯವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಈ ಕುರಿತು ನೂತನ ಆರೋಗ್ಯ ಸಚಿವರ ಗಮನಕ್ಕೆ ತಂದು ವಿಶೇಷ ಅನುದಾನ ಬಿಡುಗಡೆಗೆ ಮನವಿ ಮಾಡಲಾಗುವುದು ಎಂದು ಶಾಸಕರು ಹೇಳಿದರು.

1011129746

ವಿದೇಶಿ ಮಾದರಿಯಲ್ಲಿ ನಿರ್ಮಾಣಗೊಂಡಿರುವ ಆಸ್ಪತ್ರೆ ಕಟ್ಟಡದ ನಿರ್ವಹಣೆ ಸರ್ಕಾರಕ್ಕೆ ಕಷ್ಟಕರವಾಗುತ್ತಿರುವ ಹಿನ್ನೆಲೆಯಲ್ಲಿ, ಕಟ್ಟಡದ ಮೂರು ಮಹಡಿಗಳನ್ನು ಮರುವಿನ್ಯಾಸಗೊಳಿಸುವ ಕುರಿತು ತಾಂತ್ರಿಕ ತಜ್ಞರಿಂದ ವರದಿ ಪಡೆಯಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರ ಈ ಕಾರ್ಯಕ್ಕೆ ಅಗತ್ಯ ಅನುದಾನವನ್ನು ತುರ್ತಾಗಿ ಬಿಡುಗಡೆಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ಪರಿಶೀಲನಾ ಸಂದರ್ಭದಲ್ಲಿ ಜಿಲ್ಲಾ ಸರ್ಜನ್ ಡಾ. ಅಶೋಕ್, ಆಸ್ಪತ್ರೆಯ ಉಪ ವೈದ್ಯಾಧಿಕಾರಿ ಡಾ. ಸಂದೀಪ್, ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯ ಹರೀಶ್ ಶೆಟ್ಟಿ ಅಂಬಲಪಾಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...

ವಿಜಯಪುರದಲ್ಲಿ ಜಿ.ಪಂ ತಾ.ಪಂ ಚುನಾವಣೆಯ ಕಾವು; AI ಪೋಸ್ಟರ್‌ಗಳಲ್ಲೂ ಆಕಾಂಕ್ಷಿಗಳ ಅಬ್ಬರ!

ಚುನಾವಣೆಯ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಅಂತಿಮ ಪಟ್ಟಿಯೂ ಸಿದ್ಧವಾಗಿಲ್ಲ. ಆದರೆ,...

ಹುಣಸೂರಿನ ಎರಡು ಜಿಲ್ಲಾ ಪಂಚಾಯತ್ ಕ್ಷೇತ್ರಗಳನ್ನು ಎಸ್‌ಸಿಗೆ ಮೀಸಲಿಡಲು ಒತ್ತಾಯ

ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಎರಡು...

ರಾಸಾಯನಿಕಗಳಿಲ್ಲದೆ ಎಕರೆಗೆ 80 ಟನ್ ಕಬ್ಬು ಬೆಳೆದು ಗಮನ ಸೆಳೆದ ರೈತ ಮಹೇಶ್

ರಾಸಾಯನಿಕ ಗೊಬ್ಬರಗಳು ಹಾಗೂ ಹೊರಗಿನಿಂದ ಖರೀದಿಸುವ ದುಬಾರಿ ಕೃಷಿ ಒಳಸುರಿಗಳ ಬಳಕೆಯಿಲ್ಲದೆ,...