ಚಿಕ್ಕಬಳ್ಳಾಪುರ | ಜಿಲ್ಲಾದ್ಯಂತ ಸಿಇಟಿ ಪರೀಕ್ಷೆ ಸುಸೂತ್ರ

Date:

7302 ವಿದ್ಯಾರ್ಥಿಗಳ ಪೈಕಿ 5275 ಹಾಜರಿ, 1752 ವಿದ್ಯಾರ್ಥಿಗಳು ಗೈರು

ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಏ.16, 17ರಂದು ಎರಡು ದಿನಗಳ ಕಾಲ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನಡೆದ ಯು.ಜಿ-ಸಿಇಟಿ ಪರೀಕ್ಷೆಯು ಜಿಲ್ಲಾದ್ಯಂತ ಸುಸೂತ್ರವಾಗಿ ನೆರವೇರಿತು.

- Advertisement -

ಒಟ್ಟು 15 ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪಗಳಿಲ್ಲದೆ ಅತ್ಯಂತ ಯಶಸ್ವಿಯಾಗಿ ಪರೀಕ್ಷೆ ನಡೆದಿದ್ದು, ಸದರಿ ಪರೀಕ್ಷೆಗೆ ಒಟ್ಟು 7302 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 5275 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಮೊದಲ ದಿನ 572, ಎರಡನೇ ದಿನ 1230 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಜಿಲ್ಲಾಡಳಿತ ವತಿಯಿಂದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕಣ್ಗಾವಲು ಮತ್ತು ವೆಬ್‌ ಕಾಸ್ಟಿಂಗ್‌ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು. ಜತೆಗೆ ವಿದ್ಯಾರ್ಥಿಗಳಿಗೆ ಅಗತ್ಯವಾದ ಕುಡಿಯುವ ನೀರು, ಶೌಚಾಲಯ ಇತ್ಯಾದಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿತ್ತು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಏ.26ರಂದು ರಾಜ್ಯಮಟ್ಟದ ಸಂವಿಧಾನ ಸಂರಕ್ಷಕರ ಸಮಾವೇಶ

ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ನಡೆದ ಯು.ಜಿ-ಸಿಇಟಿ ಪರೀಕ್ಷೆಯು ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಇಲ್ಲದಂತೆ ವೆಬ್ ಕ್ಯಾಸ್ಟಿಂಗ್ ಸಾಕ್ಷಿಯಲ್ಲಿ ಯಶಸ್ವಿಯಾಗಿ ಮುಗಿದಿದೆ. ಪರೀಕ್ಷಾ ಕಾರ್ಯವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟ ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ, ಪ್ರಾಂಶುಪಾಲರಿಗೆ, ಕೊಠಡಿ ಮೇಲ್ವಿಚಾರಕರು, ಜಾಗೃತ ದಳದ ಸದಸ್ಯರಿಗೆ, ಪೊಲೀಸ್, ಗೃಹರಕ್ಷಕ ದಳದ ಸಿಬ್ಬಂದಿಗೆ ಜಿಲ್ಲಾಡಳಿತದ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...