ಉಳ್ಳಾಲ | ಮೀನು ಸಂಸ್ಕರಣಾ ಘಟಕಗಳಲ್ಲಿ ಕಲ್ಲಿದ್ದಲು ಬಳಸದಂತೆ ಜಿಲ್ಲಾಧಿಕಾರಿಗೆ ಡಿವೈಎಫ್‌ಐ ಮನವಿ

Date:

ಉಳ್ಳಾಲದ ಕೋಟೆಪುರ ಸಮುದ್ರ ದಂಡೆಯಲ್ಲಿರುವ ಮೀನು ಸಂಸ್ಕರಣಾ ಘಟಕಗಳಲ್ಲಿ ಹಾನಿಕಾರಕ ಕಲ್ಲಿದ್ದಲನ್ನು ಇಂಧನವಾಗಿ ಬಳಸದಂತೆ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.

- Advertisement -

“ಸಮುದ್ರ ದಂಡೆಯಲ್ಲಿರುವ ಯುನೈಟೆಡ್ ಮರೈನ್ ಮತ್ತು ಇಂಡೋ ಫಿಶ್ಮೀಲ್ ಕಂಪೆನಿಗಳು ಮೀನು ಸಂಸ್ಕರಿಸಲು ಜನರ ಆರೋಗ್ಯಕ್ಕೆ ಹಾನಿಕಾರಕವಾದ ಕಲ್ಲಿದ್ದಲನ್ನು ಇಂಧನವಾಗಿ ಬಳಸುತ್ತಿವೆ. ಇದು ಅಲ್ಲಿನ ಸ್ಥಳೀಯ ಜನರಲ್ಲಿ ಆರೋಗ್ಯ ಸಮಸ್ಯೆಗಳಾದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಶ್ವಾಸಕೋಶದ ತೊಂದರೆ, ಎದೆನೋವು, ಕೆಮ್ಮು, ಉಸಿರಾಟದ ತೊಂದರೆ ಮುಂತಾದ ಗಂಭೀರ ರೋಗಗಳನ್ನು ಉಂಟು ಮಾಡುತ್ತಿದೆ. ಅಲ್ಲದೆ ಕಲ್ಲಿದ್ದಲಿನ ಬಳಕೆಯಿಂದ ಅಂತರ್ಜಲ ಕಲುಷಿತಗೊಂಡುಮತ್ತಷ್ಟು ಗಂಭೀರ ಪರಿಣಾಮಗಳನ್ನು ಸೃಷ್ಟಿಸುವ ಆತಂಕ ಹೆಚ್ಚಾಗಿದೆ. ಇದನ್ನು ಜಿಲ್ಲಾ ಆರೋಗ್ಯ ಇಲಾಖೆ ಕೂಡ ದೃಢಪಡಿಸಿದೆ. ಇಷ್ಟಾದರೂ ಸಂಸ್ಕರಣಾ ಘಟಕಗಳಲ್ಲಿ ನಿಯಮ ಮೀರಿ ಕಲ್ಲಿದ್ದಲು ಬಳಸಲಾಗುತ್ತಿದೆ. ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಕಾನೂನುಗಳನ್ನು ಉಲ್ಲಂಘಿಸಿ ನಿರ್ಮಿಸಲಾಗಿರುವ ಕಟ್ಟಡಗಳಿಂದಾಗಿ ನದಿಯೇ ಮುಚ್ಚಿಹೋಗಿ ಕೋಟೆಪುರ ಮತ್ತು ಮುಳಿಹಿತ್ಲು ನಡುವೆ ದೋಣಿ ಸಂಪರ್ಕ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ಉಳ್ಳಾಲ ಕೋಟೆಪುರದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಘಟಕಗಳು ಮೀನು ಸಂಸ್ಕರಣೆ ಮಾಡುವ ಸಂದರ್ಭದಲ್ಲಿ ಕೆಟ್ಟ ವಾಸನೆ ಹೊರ ಸೂಸುತ್ತಿದ್ದು ಇದರಿಂದ ಸ್ಥಳೀಯ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮೀನು ಸಂಸ್ಕರಣೆಯಿಂದ ಹೊರ ಬರುವ ಕೊಳೆತ ನೀರನ್ನು ಸಮುದ್ರಕ್ಕೆ ಬಿಡಲಾಗುತ್ತಿದೆ ಇದರಿಂದ ಜಲಚರ ಜೀವಿಗಳು ನಾಶವಾಗುತ್ತಿವೆ. ಘಟಕಗಳಿಂದ ನಿಯಮ ಮೀರಿದ ಶಬ್ಧಗಳು ಹೊರ ಬರುತ್ತಿದ್ದು, ಶಬ್ಧ ಮಾಲಿನ್ಯವೂ ಉಂಟಾಗುತ್ತಿದೆ. ಒಟ್ಟಾರೆಯಾಗಿ ಮೀನು ಸಂಸ್ಕರಣಾ ಘಟಕಗಳು ಪರಿಸರಕ್ಕೆ ಮಾರಕವಾಗಿದೆ” ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಜ್‌ ಕಳವಳ ವ್ಯಕ್ತಪಡಿಸಿದರು.

“ಈ ಬಗ್ಗೆ ಡಿವೈಎಫ್ಐ ಕಳೆದೆರಡು ವರ್ಷಗಳಲ್ಲಿ ಸಂಬಂಧಪಟ್ಟ ಇಲಾಖೆಗೆ ಮನವಿ ಸಲ್ಲಿಸಿ ಹೋರಾಟ ಮಾಡುತ್ತಿದೆ. ಆದರೂ ಯಾವುದೇ ಇಲಾಖೆ ಸೂಕ್ತ ಕ್ರಮ ಕೈಗೊಂಡಿಲ್ಲ. ಜನರ ಪ್ರಾಣಕ್ಕೆ ಹಾನಿಯುಂಟು ಮಾಡುವ ಇಂತಹ ಘಟಕಗಳ ವಿರುದ್ದ ಶೀಘ್ರವೇ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು. ಹಾನಿಕಾರಕ ಕಲ್ಲಿದ್ದಲನ್ನು ಇಂಧನವಾಗಿ ಬಳಸುವುದನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ?: ಉಳ್ಳಾಲ | ಬಂದೂಕು ತೋರಿಸಿ ಹಾಡಹಗಲಲ್ಲೇ ಬ್ಯಾಂಕ್ ದರೋಡೆ

ಈ ವೇಳೆ ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಕಾರ್ಯದರ್ಶಿ ಸಂತೋಷ್ ಬಜಾಲ್, ಕೋಡಿ-ಕೋಟೆಪುರ ಘಟಕ ಅಧ್ಯಕ್ಷ ವಾಕರ್ ಕೋಟೆಪುರ, ಕಾರ್ಯದರ್ಶಿ ನೌಫಲ್ ಕೋಟೆಪುರ, ಮುಖಂಡರಾದ ಮುಝಮ್ಮಿಲ್ ಕೋಟೆಪುರ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...