ಉಳ್ಳಾಲದ ಶ್ರೀ ಚೀರುಂಭ ಭಗವತಿ ಕ್ಷೇತ್ರ ಮತ್ತು ಶ್ರೀ ಚೀರುಂಭ ಭಗವತಿ ತಿಯಾ ಸಮಾಜ ಸೇವಾ ಸಂಘದಿಂದ ಆಯೋಜಿಸಿದ್ದ ತೀಯರೆ ಚೇರ್‌ಲಿ ಒರಿನಾಳ್ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಪಾಲ್ಗೊಂಡಿದ್ದರು.
ರವಿವಾರ ಮಾಡೂರು ಶ್ರೀ ಪಾಡಾಂಗರ ಭಗವತಿ ಕ್ಷೇತ್ರದ ಬಳಿಯ ಗದ್ದೆಯಲ್ಲಿ ನಡೆದ ಕ್ರೀಡಾಕೂಟದಲ್ಲಿ ಯು.ಟಿ. ಖಾದರ್ ಅವರು ಕೆಸರು ಗದ್ದೆಗೆ ಇಳಿದು ಸಾರ್ವಜನಿಕರ ಗಮನ ಸೆಳೆದರು. ಖಾದರ್ ಜತೆಗೆ ಎಲ್ಲರೂ ಕ್ರೀಡಾಕೂಟದಲ್ಲಿ ಸಂತೋಷದಿಂದ ಭಾಗವಹಿಸಿದ್ದರು.
ಇದನ್ನೂ ಓದಿ: ಶಕ್ತಿಯೋಜನೆ: ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕು
ಕ್ರೀಡಾಕೂಟಕ್ಕೆ ಬೆಂಗಳೂರಿನ ಶಿಲ್ಪಾ ಎಚ್ ಮತ್ತು ಎಂ.ನವೀನ್ ದಂಪತಿ ಚಾಲನೆ ನೀಡಿದರು. ತೊಕ್ಕೊಟ್ಟು ಸಾಯಿ ಪರಿವಾರ್ ಸೇವಾ ಟ್ರಸ್ಟ್ ಗೌರವಾಧ್ಯಕ್ಷ ಪ್ರವೀಣ್ ಶೆಟ್ಟಿ ಪಿಲಾರು ಮೇಗಿನಮನೆ ಅವರು ಕೆಸರುಗದ್ದೆ ಕೂಟಕ್ಕೆ ಚಾಲನೆ ನೀಡಿದರು. ಚೀರುಂಭ ಭಗವತೀ ಕ್ಷೇತ್ರದ ಅಧ್ಯಕ್ಷ ಚಿದಾನಂದ ಗುರಿಕಾರ ನಂದ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ ನಡೆಯಿತು. ಆಡಳಿತ ಮೊಕ್ತಸರ ಸುರೇಶ್ ಭಟ್ನಾಗರ್ ಉಪಸ್ಥಿತರಿದ್ದರು.