ಉಳ್ಳಾಲ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ | ತಂಗಿಯನ್ನು ರೈಲಿಗೆ ಹತ್ತಿಸುವಂತೆ ಆರೋಪಿಗೆ ₹2000 ಗೂಗಲ್‌ ಪೇ ಮಾಡಿದ್ದ ಅಕ್ಕ!

Date:

Advertisements

ಉಳ್ಳಾಲದ ಮುನ್ನೂರು ಬಂಗುಲೆ ಸಮೀಪ ಸಾಮೂಹಿಕ ಅತ್ಯಾಚಾರಕ್ಕೀಡಾದ ಪಶ್ಚಿಮ ಬಂಗಾಳದ ಯುವತಿಯ ಅಕ್ಕ, ಆಟೊ ಚಾಲಕನಿಗೆ ‘ಗೂಗಲ್‌ ಪೇ’ ಮೂಲಕ ₹2,000 ಪಾವತಿಸಿ, ತಂಗಿಯನ್ನು ಸುರಕ್ಷಿತವಾಗಿ ರೈಲು ಹತ್ತಿಸುವಂತೆ ಕೇಳಿಕೊಂಡಿದ್ದಳು ಎಂಬುದು ತನಿಖೆ ವೇಳೆ ತಿಳಿದುಬಂದಿದೆ.

ಆರೋಪಿಗಳಾದ ಆಟೊ ಚಾಲಕ ಪ್ರಭುರಾಜ್, ಆತನ ಸ್ನೇಹಿತರಾದ ಮಣಿ, ಮಿಥುನ್‌ ಎಂಬುವರನ್ನು ಘಟನೆ ನಡೆದ 24ಗಂಟೆಯೊಳಗೆ ಬಂಧಿಸಲಾಗಿತ್ತು.

ಸಂತ್ರಸ್ತೆಯು ಸುಮಾರು 3 ತಿಂಗಳ ಹಿಂದೆ ಪ್ರಿಯತಮನ ಜತೆ ಕೇರಳದ ಕಡೆಗೆ ಕೆಲಸಕ್ಕೆ ಬಂದಿದ್ದಳು. ಏಪ್ರಿಲ್‌ 16ರಂದು ಇಬ್ಬರ ನಡುವೆ ಜಗಳ ನಡೆದಿದ್ದು, ಪ್ರಿಯತಮ ಜಗಳ ಮಾಡಿ ಮೊಬೈಲ್‌ ಒಡೆದು ಹಾಕಿ ಮನೆಯಿಂದ ಹೊರಹಾಕಿದ್ದನು. ಇದರಿಂದ ನೊಂದ ಯುವತಿ ಕೇರಳದಿಂದ ಮಂಗಳೂರಿಗೆ ಬರುವ ರೈಲು ಹತ್ತಿದ್ದಳು. ಮಂಗಳೂರಿನಲ್ಲಿ ಇಳಿದ ಆಕೆ ಊರಿಗೆ ಹೋಗಲು ಹಣವಿಲ್ಲದೆ ಅಸಹಾಯಕಳಾಗಿದ್ದಳು. ಈ ಬಗ್ಗೆ ಆಟೊ ಚಾಲಕ ಪ್ರಭುರಾಜ್‌ ಜತೆಗೆ ಅಲವತ್ತುಕೊಂಡಿದ್ದಳು. ಅದನ್ನೇ ದುರ್ಬಳಕೆ ಮಾಡಿಕೊಂಡ ಚಾಲಕ ಆಕೆಯ ಮೊಬೈಲ್‌ ರಿಪೇರಿ ಮಾಡಿಸಿ ಪಶ್ಚಿಮ ಬಂಗಾಳದಲ್ಲಿರುವ ಸಹೋದರಿಗೆ ಕರೆ ಮಾಡುವಂತೆ ತಿಳಿಸಿದ್ದ. ‌

Advertisements

ತಂಗಿ ಊರಿಗೆ ಬರುವ ಇಂಗಿತ ವ್ಯಕ್ತಪಡಿಸುತ್ತಿದ್ದಂತೆ ಆಟೊ ರಿಕ್ಷಾ ಚಾಲಕನ ಸಹಾಯ ಯಾಚಿಸಿದ ಅಕ್ಕ, ₹2,000ವನ್ನು ಗೂಗಲ್‌ ಪೇ ಮಾಡಿ ರೈಲು ಹತ್ತಿಸುವಂತೆ ತಿಳಿಸಿದ್ದಳು. ಪಶ್ಚಿಮ ಬಂಗಾಳದ ರೈಲು ತಡವಾಗಿದೆಯೆಂದು ನಂಬಿಸಿದ ಚಾಲಕ ಸುಮಾರು 6 ಗಂಟೆಗಳ ಕಾಲ ರಿಕ್ಷಾದಲ್ಲೇ ಸುತ್ತಾಡಿಸಿ ಮತ್ತು ಬರುವ ಪಾನೀಯ ಕುಡಿಸಿ ತಡರಾತ್ರಿ ಮೂವರು ಸೇರಿ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂಬುದು ತನಿಖೆ ವೇಳೆ ಗೊತ್ತಾಗಿರುವುದಾಗಿ ಮೂಲಗಳು ತಿಳಿಸಿವೆ.

ಆರೋಪಿ ಮಿಥುನ್‌ ವಿರುದ್ಧ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣ ಇದೆ. ಡೆಲಿವರಿ ಬಾಯ್‌ ಮಣಿ ವಿರುದ್ಧ ಕಂಕನಾಡಿ ಠಾಣೆಯಲ್ಲಿ ಕಳವು ಪ್ರಕರಣ ಇದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಏಪ್ರಿಲ್‌ 25ರವರೆಗೆ ಪೊಲೀಸ್ ವಶಕ್ಕೆ ನೀಡಲಾಗಿದೆ.

“ಸಂತ್ರಸ್ತೆ ಚೇತರಿಸಿಕೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಶುಕ್ರವಾರದ ಸಂಜೆವರೆಗೂ ಆಕೆಯ ಮನೆಯಿಂದ ಯಾರೂ ಬಂದಿಲ್ಲ. ಆಕೆಯನ್ನು ಊರಿನಿಂದ ಕರೆತಂದ ಪ್ರಿಯತಮನ ವಿಚಾರಣೆಯೂ ನಡೆದಿಲ್ಲ” ಎಂದು ಮೂಲಗಳಿಂದ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಪ್ರತಿಭಟನಾಕಾರರು ಸರ್ಕಾರಿ ಕಾರು ಬಳಸಿದ ಆರೋಪ; ನಗರ‌ ಪೊಲೀಸ್‌ ಆಯುಕ್ತರ ಸ್ಪಷ್ಟನೆ

ಕಾನೂನಿನ ಭಯವೇ ಇಲ್ಲದಿರು ಕಿರಾತಕರು ಬದುಕುತ್ತಿರುವ ಈ ಸಮಾಜದಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷತೆ ಇಲ್ಲದಂತಾಗಿದೆ. ಹೆಣ್ಣುಮಕ್ಕಳನ್ನು ಕಂಡ ಕೂಡಲೇ ರಣಹದ್ದುಗಳಂತೆ ಹಾತೊರೆಯುವ ಪೈಶಾಚಿಕ ಗಂಡು ಮನಸುಗಳಿರುವವರೆಗೆ ಈ ನಾಡು ಗಾಂಧಿ ಕಂಡ ರಾಮರಾಜ್ಯವಾಗಲು ಹೇಗೆ ಸಾಧ್ಯವಾದೀತು?

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X