ಉಳ್ಳಾಲ | ದೇಶದ ಕ್ರೀಡಾ ಸಂಸ್ಥೆಗಳು ಆಳುವವರ ಕೈಗೊಂಬೆಯಾಗಿವೆ: ಸಂತೋಷ್ ಬಜಾಲ್

Date:

Advertisements

ಈ ದೇಶದ ಪ್ರತಿಷ್ಠಿತ ಕ್ರೀಡಾ ಸಂಸ್ಥೆಗಳು ಆಳುವವರ ಕೈಗೊಂಬೆಯಾಗಿವೆ ಎಂದು ಡೆಮಾಕ್ರಟಿಕ್‌ ಯೂತ್‌ ಫೆಡರೇಷನ್‌ ಆಫ್‌ ಇಂಡಿಯಾ (ಡಿವೈಎಫ್ಐ)ದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಸಂತೋಷ್‌ ಬಜಾಲ್‌ ಹೇಳಿದರು.

ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ನೇತೃತ್ವದಲ್ಲಿ ಸಾಂಗತ್ಯ ಬಳಗ ಭಗತ್ ಸಿಂಗ್ ಟ್ರೋಫಿ-2025 ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಕೂಟ ಉಳ್ಳಾಲ ಬೈಲ್ ಕೀರ್ತಿ ಮೈದಾನದಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಒಂದು ಕಾಲದಲ್ಲಿ ಗುಜರಾತ್ ಕ್ರಿಕೆಟ್ ಅಸೋಸಿಯೇಶನ್ನ ಅಧ್ಯಕ್ಷ ಸ್ಥಾನ ನರೇಂದ್ರ ಮೋದಿ ಅವರ ಕೈಯಲ್ಲಿತ್ತು. ಕ್ರಿಕೆಟ್ ಬಗ್ಗೆ ಗಂಧ ಗಾಳಿಯೇ ಗೊತ್ತಿಲ್ಲದ ಅಮಿತ್ ಷಾ ರವರ ಮಗ ಜಯ್ ಷಾ ಈಗ ಬಿಸಿಸಿಐ ಕಾರ್ಯದರ್ಶಿಯಾಗಿದ್ದಾರೆ. ದೇಶದಲ್ಲಿರುವ ಅರ್ಹ ಯುವ ಪ್ರತಿಭೆಗಳಿಗೆ ಅವಕಾಶಗಳು ದೆೊರೆಯುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

WhatsApp Image 2025 02 24 at 9.57.07 AM

ಪಂದ್ಯಾಕೂಟದಲ್ಲಿ 16 ತಂಡಗಳು ಭಾಗವಹಿಸಿದ್ದವು. ʼಕೀರ್ತಿ ಸ್ಪೋರ್ಟ್ಸ್ ಕ್ಲಬ್ ಉಳ್ಳಾಲʼ ಬೈಲ್ ಪಂದ್ಯಾಕೂಟದ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ʼವೀರಾಂಜನೇಯ ಕುತ್ತಾರುʼ ತಂಡ ರನ್ನರ್ಸ್ ಅಪ್ ಪಡೆದುಕೊಂಡಿತು. ಪಂದ್ಯಾಕೂಟದ ಉತ್ತಮ ಬ್ಯಾಟರ್ ಆಗಿ ವೀರಾಂಜನೇಯ ತಂಡದ ವಂಶಿಕ್ ಉತ್ತಮ ಬೌಲರ್ ಆಗಿ ಗುರುದತ್ ಮೂಡಿಬಂದರು. ಕೀರ್ತಿ ಸ್ಪೋರ್ಟ್ಸ್ ತಂಡದ ತ್ವಾಯಿಫ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಹಾಗೂ ನಿಝಾಮ್ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು.

Advertisements

ಇದನ್ನೂ ಓದಿ: ಮಂಗಳೂರು | ಬಂಜಾರ ಸಮುದಾಯ ಸಂಘಟನೆಯಲ್ಲಿ ಸಂತ ಸೇವಾಲಾಲ್ ಪಾತ್ರ ಅಪಾರ: ಉಳ್ಳಾಲ್

ಸಮಾರಂಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಾಜಿದ್ ಉಳ್ಳಾಲ, ಕೀರ್ತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಫಾರೂಕ್, ಡಿವೈಎಫ್ಐ ಉಳ್ಳಾಲ ತಾಲೂಕು ಅಧ್ಯಕ್ಷ ಅಡ್ವೊಕೇಟ್ ನಿತಿನ್ ಕುತ್ತಾರ್, ಜೀವನ್ ರಾಜ್ ಕುತ್ತಾರ್, ಹರೇಕಳ ಗ್ರಾಮ ಪಂಚಾಯತ್ ಸದಸ್ಯ ಅಶ್ರಫ್ ಹರೇಕಳ, ಸುನೀಲ್ ತೇವುಲ, ಅಶ್ಫಾಕ್ ಅಲೇಕಳ, ಅಮೀರ್ ಉಳ್ಳಾಲ ಬೈಲ್, ರಝಾಕ್ ಮೊಂಟೆಪದವು, ಶರೀಫ್ ಮೊಂಟೆಪದವು, ಮಿಥುನ್ ಕುತ್ತಾರ್, ರಝಾಕ್ ಮುಡಿಪು, ನವೀಝ್ ಉಳ್ಳಾಲ ಬೈಲ್ ಉಪಸ್ಥಿತರಿದ್ದರು. ಡಿವೈಎಫ್ಐ ಉಳ್ಳಾಲ ತಾಲೂಕು ಕಾರ್ಯದರ್ಶಿ ರಿಝ್ವಾನ್ ಹರೇಕಳ ಮುಂತಾದವರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X