ಉಳ್ಳಾಲ | ರೈಲ್ವೆ ಟ್ರ್ಯಾಕ್‌ ಅಂಡರ್‌ಪಾಸ್‌ ಕಾಮಗಾರಿಗೆ ರೈಲ್ವೆಯಿಂದ ಗ್ರೀನ್ ಸಿಗ್ನಲ್

Date:

Advertisements

ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲ ಬೈಲ್‌ವರೆಗೆ ರೂ.35 ಕೋಟಿ ವೆಚ್ಚದಲ್ಲಿ ಅಗಲೀಕರಣ ಕಾಮಗಾರಿ ಶೀಘ್ರದಲ್ಲೇ ನಡೆಯಲಿದೆ. ಕಳೆದ 75 ವರ್ಷಗಳಿಂದ ದೊಡ್ಡ ಬೇಡಿಕೆಯಾಗಿದ್ದ, ಒಳಪೇಟೆ ಸಂಪರ್ಕಿಸುವ ರೈಲ್ವೆ ಟ್ರಾಕ್‌ಗೆ ಅಂಡರ್‌ಪಾಸ್‌ ಕಾಮಗಾರಿ ನಡೆಸಲು ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ಈ ಹಿನ್ನೆಲೆ ರೂ.2 ಕೋಟಿ ವೆಚ್ಚದಲ್ಲಿ ಅಂಡರ್‌ಪಾಸ್‌ ಕಾಮಗಾರಿ ನಡೆಯಲಿದೆ ಎಂದು ಸ್ಪೀಕರ್ ಯು.ಟಿ.ಖಾದ‌ರ್ ಹೇಳಿದರು.

ಅವರು ತೊಕ್ಕೊಟ್ಟು ಒಳಪೇಟೆಯಲ್ಲಿ ರೈಲ್ವೆ ಹಳಿಗೆ ಅಂಡರ್‌ಪಾಸ್‌ ನಿರ್ಮಾಣ ಮತ್ತು ರೈಲ್ವೆ ಓವರ್‌ಬ್ರಿಡ್ಜ್ ಅಗಲೀಕರಣಕ್ಕೆ ಸಂಬಂಧಿಸಿದಂತೆ ರೈಲ್ವೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದರು.

ಇದನ್ನೂ ಓದಿ: ಶಕ್ತಿಯೋಜನೆ: ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕು

Advertisements

ತೊಕ್ಕೊಟ್ಟು ಒಳಪೇಟೆ ಉಳ್ಳಾಲದ ಕೇಂದ್ರ ಪ್ರದೇಶ, ರಾಷ್ಟ್ರೀಯ ಹೆದ್ದಾರಿಯಿಂದ ಉಳ್ಳಾಲ ನಗರಕ್ಕೆ ಸಂಪರ್ಕಿಸುವ ಕೊಂಡಿ ರಸ್ತೆಯಾಗಿದ್ದು, ರೈಲ್ವೆ ಹಳಿಯನ್ನು ದಾಟಿಕೊಂಡು ಸಾರ್ವಜನಿಕ ಮೈದಾನ, ಮಾರ್ಕೆಟ್, ಶಾಲಾ-ಕಾಲೇಜು, ದರ್ಗಾ, ದೇವಸ್ಥಾನ, ಚರ್ಚ್‌ಗೆ ನಿತ್ಯ ಸಾವಿರಾರು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೋಗುತ್ತಿದ್ದಾರೆ. ರೈಲ್ವೆ ಹಳಿ ದಾಟುವ ವೇಳೆ ಕೆಲವು ಕಡೆ ಅನಾಹುತಗಳು ಆಗಿದ್ದವು, ಇದರ ಬಗ್ಗೆ ರೈಲ್ವೆಯವರು ಬಹಳಷ್ಟು ವರ್ಷದಿಂದ ಈ ರಸ್ತೆಯನ್ನು ಬಂದ್‌ ಮಾಡಲು ಬೇಡಿಕೆಯನ್ನಿಟ್ಟಿದ್ದರು.

ಕಳೆದ ವರ್ಷ ರೈಲ್ವೆಯವರು ಕೆಲವೊಂದು ಪ್ರದೇಶದಲ್ಲಿ ಸಾವು ನೋವು ಆದ್ದರಿಂದ ಜನಸಾಮಾನ್ಯರ ಹಿತದೃಷ್ಟಿಯ ಉದ್ದೇಶದಿಂದ ಈ ಗೇಟ್ ಬಂದ್ ಮಾಡುವುದು ಅನಿವಾರ್ಯ ಎಂದಾಗ ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕೆಂದು ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಜಿಲ್ಲಾಧಿಕಾರಿ ವರದಿಯಂತೆ ರೈಲ್ವೆ ಸಚಿವ ಸೋಮಣ್ಣ ಅವರು ಮಂಗಳೂರಿಗೆ ಬಂದಾಗ ಮನವರಿಕೆ ಮಾಡಿದ್ದರು. ಇದೀಗ ಕೇಂದ್ರ ರೈಲ್ವೆ ಇಲಾಖೆಯವರು ಅಂಡರ್‌ಪಾಸ್‌ ನಿರ್ಮಾಣಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದರು.‌

ಇದನ್ನೂ ಓದಿ: ಮಂಗಳೂರು | ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಬಸ್

ಈ ಅಂಡರ್‌ಪಾಸ್‌ನಲ್ಲಿ ಜನಸಾಮಾನ್ಯರು ನಡೆದುಕೊಂಡು ಹೋಗಲು ಮತ್ತು ದ್ವಿಚಕ್ರ ವಾಹನ ಸಂಚರಿಸಲು ಅವಕಾಶ ಇದೆ. ಇದರೊಂದಿಗೆ ಉಳ್ಳಾಲ ನಗರವನ್ನು ಸಂಪರ್ಕಿಸುವ ಓವರ್‌ಬ್ರಿಡ್ಜ್ ಅಗಲೀಕರಣಕ್ಕೂ ಒಪ್ಪಿಗೆ ಸಿಕ್ಕಿದ್ದು ರೂ.3 ಕೋಟಿ ವೆಚ್ಚದಲ್ಲಿ ಅಗಲೀಕರಣ ಕಾಮಗಾರಿ ನಡೆಯಲಿದೆ.

ಈಗಾಗಲೇ ಉಳ್ಳಾಲ ಜಂಕ್ಷನ್‌ನಿಂದ ಉಳ್ಳಾಲ ಬೈಲುವರೆಗೆ ದ್ವಿಪಥ ರಸ್ತೆಯೊಂದಿಗೆ ಅಭಿವೃದ್ಧಿ ಕಾಮಗಾರಿ ನಡೆದಿದ್ದು, ಉಳ್ಳಾಲ ಬೈಲ್‌ನಿಂದ ರಾಷ್ಟ್ರೀಯ ಹೆದ್ದಾರಿ 66ರ ಸಂಪರ್ಕಿಸುವ ತೊಕ್ಕೊಟ್ಟು ಓವರ್‌ಬ್ರಿಡ್‌ವರೆಗೆ ರಸ್ತೆ ಅಗಲೀಕರಣಕ್ಕೆ ರೂ.35ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯಲಿದ್ದು, ಯೋಜನೆ ಸಿದ್ಧಗೊಂಡು ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆ ಬಾಕಿ ಇದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X