ಜಾನುವಾರುಗಳ ಅನಧಿಕೃತ ಸಾಗಾಟ: ಪೊಲೀಸ್ ಜೀಪಿಗೆ ಡಿಕ್ಕಿ ಹೊಡೆದು ಕೊಲೆಯತ್ನ; ಆರೋಪಿಗೆ ಗುಂಡೇಟು

Date:

ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದ ಪೊಲೀಸರ ಮೇಲೆ ಹಲ್ಲೆ ನಡೆಸಿ ಕೊಲೆಯತ್ನ ಮಾಡಿದ ಆರೋಪಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರ ಮಂಗಳ ಪ್ರದೇಶದಲ್ಲಿ ನಡೆದಿದೆ.

- Advertisement -

ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರ ಪ್ರಕಾರ, ಕೇರಳದ ಕಾಸರಗೋಡು ಮೂಲದ ಅಬ್ದುಲ್ಲಾ ಎಂಬಾತ ಐಚರ್ ವಾಹನದಲ್ಲಿ 10 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ. ಪೊಲೀಸರು ವಾಹನವನ್ನು ನಿಲ್ಲಿಸಲು ಸೂಚಿಸಿದರೂ ಆತನು ವೇಗವನ್ನು ಕಡಿಮೆ ಮಾಡದೆ, ಸುಮಾರು 10 ಕಿಲೋಮೀಟರ್ ದೂರ ಪೊಲೀಸರನ್ನು ಬೆನ್ನಟ್ಟುವಂತೆ ಮಾಡಿದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ವೇಳೆ ಆರೋಪಿ ಅಬ್ದುಲ್ಲಾ ಪೊಲೀಸರ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಕೊಲೆಯತ್ನ ನಡೆಸಿದ್ದಾನೆ. ಪ್ರತಿಯಾಗಿ ಪಿಎಸ್ಐ ರವರು ಆತ್ಮರಕ್ಷಣೆಯ ದೃಷ್ಟಿಯಿಂದ ಎರಡು ಸುತ್ತು ಗುಂಡು ಹಾರಿಸಿದ್ದು, ಅದರಲ್ಲಿ ಒಂದು ಗುಂಡು ಐಚರ್ ವಾಹನದ ಮೇಲೆ, ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಈ ದಿನ ಸಂಪಾದಕೀಯ | ಸಂಘಪರಿವಾರದ ಹುನ್ನಾರಗಳನ್ನು ಅರಿತ ದಲಿತರು

ಘಟನೆಯ ವೇಳೆ ವಾಹನದಲ್ಲಿದ್ದ ಮತ್ತೊಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಗಾಯಗೊಂಡ ಅಬ್ದುಲ್ಲನನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಹೇಳುವಂತೆ, ಈ ಅಬ್ದುಲ್ಲನ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿಯೂ 33/2025ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...