ಚಾಮರಾಜನಗರ | ಘೋಷಿತ ತುರ್ತು ಪರಿಸ್ಥಿತಿಗಿಂತ ಅಘೋಷಿತ ತುರ್ತು ಪರಿಸ್ಥಿತಿ ಅತ್ಯಂತ ಅಪಾಯಕಾರಿ : ಅರವಿಂದ ನಾರಾಯಣ

Date:

Advertisements

ಚಾಮರಾಜನಗರದ ರೋಟರಿ ಭವನದಲ್ಲಿ ಪಿಯುಸಿಎಲ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ರೋಟರಿ ಸಂಸ್ಥೆ ಸಹಯೋಗದಲ್ಲಿ ಶನಿವಾರ ಸಂಜೆ ನಡೆದ ಹಿರಿಯ ಪತ್ರಕರ್ತ ಅಬ್ರಹಾಂ ಡಿ. ಸಿಲ್ವಾ ಅವರ ‘ ತುರ್ತು ಪರಿಸ್ಥಿತಿ ಸೆರೆವಾಸದ ಆ ದಿನಗಳು ‘ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಿಯುಸಿಎಲ್ ರಾಜ್ಯಾಧ್ಯಕ್ಷ ಅರವಿಂದ ನಾರಾಯಣ ಮಾತನಾಡಿ ‘ ಘೋಷಿತ ತುರ್ತು ಪರಿಸ್ಥಿತಿಗಿಂತ ಅಘೋಷಿತ ತುರ್ತು ಪರಿಸ್ಥಿತಿ ಅತ್ಯಂತ ಅಪಾಯಕಾರಿ ‘ ಎಂದರು.

” 1975 ರಿಂದ 1977 ರ ವರಗೆ ದೇಶಾದ್ಯಂತ ಭಾರತ ಸರ್ಕಾರ ತುರ್ತು ಪರಿಸ್ಥಿತಿ ಹೇರಿದ್ದ ಸಂದರ್ಭದಲ್ಲಿ ಸರ್ಕಾರ ಮಾಡಿದ್ದೆ ಕಾನೂನಾಗಿತ್ತು. ಸರ್ಕಾರದ ವಿರುದ್ಧ ಪ್ರಶ್ನಿಸುವವರನ್ನು ಜೈಲಿಗೆ ಕಳುಹಿಸಲಾಗುತ್ತಿತ್ತು. ಮಾಧ್ಯಮಗಳ ಮೇಲೂ ನಿರ್ಬಂಧ ಹೇರಲಾಗಿತ್ತು. ದೇಶದಲ್ಲಿ ಒಂದು ರೀತಿಯ ಅಘೋಷಿತ ಸರ್ವಧಿಕಾರಿ ಧೋರಣೆಯ ಆಡಳಿತವಿತ್ತು ” ಎಂದು ವಿಷಾಧಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪಿಯುಸಿಎಲ್ ಉಪಾಧ್ಯಕ್ಷ ಕೆ. ವೆಂಕಟರಾಜು ” ಸಮಾಜದಲ್ಲಿ ಸರ್ವರೂ ಸ್ವತಂತ್ರರು ಅವರವರ ಉಡುಗೆ, ತೊಡುಗೆ, ಆಹಾರ ಕ್ರಮ ಅವರಿಚ್ಚೆ. ಆದರೆ, ಬದಲಾದ ಸಂದರ್ಭದಲ್ಲಿ ತಿನ್ನುವ ಆಹಾರ, ಉಡುವ ಬಟ್ಟೆಗೂ ಭಯ ಪಡುವ ಅಗತ್ಯತೆ ಎದುರಾಗಿದೆ. ಯಾವುದೇ ಹೋರಾಟ ನಡೆಸಬೇಕಾದರೆ ಸಂವಿಧಾನ ಅವಲಂಬಿಸಿದ್ದೇವೆ, ಸಾಮಾಜಿಕ ಅಸಮಾನತೆ, ಆರ್ಥಿಕ ಅಸಮಾನತೆ ಹೋಗಲಾಡಿಸಬೇಕಾದರೆ ಸಂವಿಧಾನದಿಂದ ಮಾತ ಸಾಧ್ಯ ” ಎಂದರು

Advertisements

ಅಂಗನವಾಡಿ ಕೇಂದ್ರವೊಂದರಲ್ಲಿ ಹುಳ ಹುಪ್ಪಟೆ ಮಿಶ್ರಿತ ಕಳಪೆ ಆಹಾರ ಕೊಡುತ್ತಿದ್ದ ಪ್ರಕರಣವನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಐತಿಹಾಸಿಕ ತೀರ್ಪು ಪಡೆದಿರುವುದು. ಮಲೆ ಮಹದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮದಲ್ಲಿ ಲೋಕಸಭೆ ಚುನಾವಣೆಯಲ್ಲಿ ಮತಗಟ್ಟೆ ಧ್ವಂಸ ಪ್ರಕರಣ, ಗುಂಡ್ಲು ಪೇಟೆಯ ಗುಮ್ಮಕಲ್ಲು ಗುಡ್ಡ ಕುಸಿದು ಕಾರ್ಮಿಕರು ಸಾವಿಗೀಡಾದ ಪ್ರಕರಣಗಳನ್ನು ಸತ್ಯಶೋಧನೆ ನಡೆಸಿ ಸರ್ಕಾರದ ಮುಂದಿಡುತ್ತಾ ಬಂದಿದೆ ಪಿಯುಸಿಎಲ್ ಮುಂದೆಯೂ ಇಂತಹ ಹೋರಾಟ ನಡೆಸಲಿದ್ದೇವೆ ಎಂದರು.

ಹಿರಿಯ ಪತ್ರಕರ್ತ ಅಬ್ರಹಾಂ ಡಿ. ಸಿಲ್ವ ಅವರ ಮೊಮ್ಮಗಳಾದ ಕುಮಾರಿ ಇಂಪನ ‘ ತುರ್ತು ಪರಿಸ್ಥಿತಿಯ ಸೆರೆವಾಸದೆ ಆ ದಿನಗಳು ‘ ಕೃತಿಯನ್ನು ಲೋಕಾರ್ಪಣೆ ಮಾಡಿದಳು. ಪಿಯುಸಿಎಲ್ ಜಿಲ್ಲಾಧ್ಯಕ್ಷ ಪುಣಜನೂರು ದೊರೆಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸುವ ಸಂಕಲ್ಪ; ಗಮನ ಸೆಳೆದ ವಾಕಥಾನ್

ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಪ್ರಕಾಶ್ ರಾಜ್ ಮೇಹು, ಲೇಖಕ ನಂಜನಗೂಡು ಕೆ. ಜೆ. ಅಲಮೇಲು, ರೋಟರಿ ಅಧ್ಯಕ್ಷ ನಾಗರಾಜು, ಸಾಹಿತಿ ಹೊರೆಯಾಲ ದೊರೆಸ್ವಾಮಿ, ಅಪೂರ್ವ ಡಿ. ಸಿಲ್ವ, ಪುನರ್ಚಿತ್ ಸಂಸ್ಥೆಯ ವೀರಭದ್ರ ನಾಯಕ, ಕೊಣನೂರು ನಾಗರಾಜು ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X