ಹಿಂದೂ ಧರ್ಮದ ಯುವತಿಯನ್ನು ಪ್ರೀತಿಸಿದ್ದಕ್ಕೆ ಮುಸ್ಲಿಂ ಯುವಕನಿಗೆ ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿದ ಅನೈತಿಕ ಪೊಲೀಸ್‌ಗಿರಿ ನಡೆಸಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಯಾದಗಿರಿ ನಗರದ ಯುವಕನೊಬ್ಬ ಮಾ.18 ರಂದು ಕಾಲೇಜಿನಿಂದ ಮನೆಗೆ ಬರುವಾಗ ಅಪಹರಿಸಿದ 9 ಜನರ ಗುಂಪು ನಂತರ ಕೋಣೆಯಲ್ಲಿ ಕೂಡಿ ಹಾಕಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಹೊಟ್ಟೆಗೆ ಚಾಕು ಹಾಕಿ ಕೊಲೆ ಮಾಡಲು ಯತ್ನಿಸಿದೆ. ತಪ್ಪಾಗಿದೆ ಅಂತ ಕಾಲಿಗೆ ಬಿದ್ದು ಯುವಕ ಜೀವ ಉಳಿಸಿಕೊಂಡು ಬಂದಿದ್ದಾನೆ ಎಂದು ತಿಳಿದು ಬಂದಿದೆ.
ಯುವತಿಗೆ ಹಾಗೂ ಹಲ್ಲೆ ಮಾಡಿದ ಗ್ಯಾಂಗ್ಗೆ ಯಾವುದೇ ಸಂಬಂಧವಿಲ್ಲ. ಆದರೆ ಯುವತಿಯನ್ನು ಪ್ರೀತಿಸಿದವನು ಅನ್ಯಕೋಮಿನವನು ಎಂಬ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲೆಲ್ಲೂ ಪುರುಷರದೇ ಪಾರುಪತ್ಯ; ಮಹಿಳಾ ಪ್ರಾತಿನಿಧ್ಯ ಕನ್ನಡಿಯೊಳಗಿನ ಗಂಟು
ಯಾದಗಿರಿ ನಗರ ಠಾಣೆಯಲ್ಲಿ ಹಲ್ಲೆ ಮಾಡಿದ 9 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.