ದಕ್ಷಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ ಹೆಚ್ಚಾಗುತ್ತಿದೆ. ಕಳೆದ ಎರಡು ತಿಂಗಳಿಂದ ಪದೇ-ಪದೇ ಅನೈತಿಕ ಪೊಲೀಸ್‌ಗಿರಿ ನಡೆಸಿದ ಬಗ್ಗೆ ವರದಿಯಾಗುತ್ತಿವೆ. ಇದೀಗ, ಮಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದೆ. ಪಟ್ಟಣದ ಹಂಪನಕಟ್ಟೆ ಬಳಿಯ ಮಿಲಾಗ್ರಿಸ್‌ನಲ್ಲಿ ಎರಡು ಕೋಮಿನ ಯುವಕ-ಯುವತಿ ಮೇಲೆ ಹಿಂದುತ್ವವಾದಿ ಕೋಮು ಕಾರ್ಯಕರ್ತರು ದಾಳಿ ನಡೆಸಿದ್ದು, ಹಲ್ಲೆಗೆ ಯತ್ನಿಸಿದ್ದಾರೆ.
ಮಿಲಾಗ್ರಿಸ್ ಬಳಿ ಯುವಕ-ಯುವತಿ ಜೊತೆಯಲ್ಲಿ ನಿಂತಿದ್ದರು. ಆ ವೇಳೆ, ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಅವರೊಂದಿಗೆ ಗಲಾಟೆ ಮಾಡಿದ್ದಾರೆ. ಹಲ್ಲೆ ಮಾಡಲು ಯತ್ನಿಸಿದ್ದಾರೆ. ಆದರೆ, ಸ್ಥಳಕ್ಕೆ ಪೊಲೀಸರು ಬರುತ್ತಿರುವುದನ್ನು ಕಂಡು ಪರಾರಿಯಾಗಿದ್ದಾರೆ.
ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.