ಅನ್ಯಕೋಮಿನ ಜೋಡಿಯೊಂದರ ಮೇಲೆ ಅನೈತಿಕ ಪೊಲೀಸ್‌ಗಿರಿ ನಡೆಸಿದ ಬಜರಂಗದಳದ ಇಬ್ಬರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ.
ಸೋಮವಾರ, ಹಿಂದು ಯುವಕ ಮತ್ತು ಮುಸ್ಲಿಂ ಯುವತಿ ಮಂಗಳೂರಿನಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ಬಜರಂಗದಳದ ಕಾರ್ಯಕರ್ತರು ಅಡ್ಡಗಟ್ಟಿ ಗಲಾಟೆ ಮಾಡಿದ್ದಾರೆ. ಈ ವೇಳೆ, ಎರಡೂ ಕೋಮಿನ ಗುಂಪು ಸ್ಥಳಕ್ಕೆ ಬಂದಿದ್ದು, ಮಾತಿನ ಚಕಮಕಿ ನಡೆದಿದೆ.
ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಬಂದು ಗುಂಪುಗಳನ್ನು ಚದುರಿಸಿದ್ದಾರೆ. ಬಜರಂಗದಳದ ಇಬ್ಬರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.