ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾಲ್ಕಿ ತಾಲ್ಲೂಕಿನ ಪಾಂಡರಿ ಗ್ರಾಮದ ಬಳಿ ಗುರುವಾರ ಸಂಜೆ ನಡೆದಿದೆ.
ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ನಾಗುರಾವ್ (40), ಭಾನುದಾಸ್ (42) ಮೃತರು.
ಮೂವರು ದ್ವಿಚಕ್ರ ಮೇಲೆ ಔರಾದ್-ಲಾತೂರ್ ರಾಜ್ಯ ಹೆದ್ದಾರಿ ಮಾರ್ಗವಾಗಿ ನಾಂದೇಡ ಕಡೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಇನ್ನೋರ್ವ ಬೈಕ್ ಸವಾರನನ್ನು ಭಾಲ್ಕಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ಮೇಹಕರ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.