ಬೀದರ್‌ | ವಿವಿಧ ಬೇಡಿಕೆ ಈಡೇರಿಕೆಗೆ ಅನುದಾನಿತ ಪಿಂಚಣಿ ವಂಚಿತ ನೌಕರರ ಆಗ್ರಹ

Date:

ಕರ್ನಾಟಕ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದಿಂದ
ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

- Advertisement -

ಈ ಕುರಿತು‌ ಶನಿವಾರ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ವಿಜಯಕುಮಾರ ಪಾಟೀಲ್ ಯರನಳ್ಳಿ ನೇತೃತ್ವದಲ್ಲಿ ಬೀದರ್ ತಹಸೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ʼರಾಜ್ಯ ಸರಕಾರವು ಈಗಾಗಲೇ ರಾಜ್ಯ ಸರಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವ ಆದೇಶ ಹೊರಡಿಸಿದ್ದು, ಶೀಘ್ರವೇ ಅದನ್ನು ಜಾರಿಗೊಳಿಸಬೇಕು. ಪ್ರಾಧಿಕಾರದ ವಂತಿಗೆಯನ್ನು ಆಡಳಿತ ಮಂಡಳಿಗಳ ಬದಲಾಗಿ ಸರಕಾರವೇ ಭರಿಸಲು ಕ್ರಮ ವಹಿಸಬೇಕು. ಸಿಬ್ಬಂದಿ ವೇತನ ನಿವೃತ್ತಿ ಮತ್ತು ಇತರ ಸೌಲಭ್ಯಗಳಿಗೆ ಸಂಬಂಧಿಸಿದ ವಿಧೇಯಕ್ಕೆ ತಿದ್ದುಪಡಿ ಅಥವಾ ರದ್ದುಪಡಿಸಿ ಭವಿಷ್ಯಾವರ್ತಿಯಾಗಿ ಜಾರಿಗೆ ಬರುವಂತೆ ಕ್ರಮವಹಿಸಬೇಕು” ಎಂದು ಒತ್ತಾಯಿಸಿದರು.

ʼಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ದಶಕಗಳಿಂದ ಖಾಲಿ ಇರುವ ಹುದ್ದೆಗಳನ್ನು ಭರ್ತಿಗೆ ಶೀಘ್ರ ಕ್ರಮವಹಿಸಬೇಕು. ಅನುದಾನಿತ ನೌಕರರಿಗೂ ಕೂಡ ಸರಕಾರಿ ನೌಕರರೆಂದು ʼಜ್ಯೋತಿ ಸಂಜೀವಿನಿʼ ಯೋಜನೆಗೆ ಒಳಪಡಿಸಬೇಕು. ಸರಕಾರಿ ಹಾಗೂ ಅನುದಾನಿತ ಶಾಲಾ-ಕಾಲೇಜುಗಳ ವಿದ್ಯಾರ್ಥಿ ಮತ್ತು ನೌಕರರಿಗೆ ಯಾವುದೇ ತಾರತಮ್ಯ ಮಾಡಬಾರದುʼ ಎಂದರು.

ʼಸರಕಾರ ರಚನೆಗೊಂಡು ವರ್ಷ ಕಳೆದರೂ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಹಳೆ ಪಿಂಚಣಿ ಯೋಜನೆ ಇನ್ನೂ ಜಾರಿಗೊಂಡಿಲ್ಲ. ಹಳೇ ಪಿಂಚಣಿ ಯೋಜನೆ ಶೀಘ್ರ ಜಾರಿಗೊಳಿಸಿ ನೌಕರರ ನ್ಯಾಯಯುತ ಬೇಡಿಕೆಗಳು ಈಡೇರಿಸಬೇಕು. ಇಲ್ಲದಿದ್ದರೆ ಪ್ರತಿಭಟನೆಗೆ ಇಳಿಯಬೇಕಾಗುತ್ತದೆʼ ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಣಿ ಅವಘಡಗಳಿಂದ ಬಯಲಾದ ಮೋದಿಯವರ ‘ಅಭಿವೃದ್ಧಿ ಮತ್ತು ಆಡಳಿತ’

ಈ ಸಂಧರ್ಭದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಪ್ರಮುಖರಾದ ಉಮೇಶ ಪಾಟೀಲ, ಪ್ರಹ್ಲಾದ್ ತಳಘಟಕರ್, ಬಳಿರಾಮ ಕುಸನಾಳೆ, ಲಕ್ಷ್ಮಣ ಪೂಜಾರಿ, ಗಣೇಶ ಬಿರಾದರ, ಬಾಲಾಜಿ ಫುಲೆ, ಗೋಪಾಲ ಕುಲಕರ್ಣಿ, ಅರಶಿಯಾ ಜಮೀನ್ ಡಾ. ಹನೀಫ್, ಪರಮೇಶ್ವರ ಬಿರಾದರ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...