ಅವೈಜ್ಞಾನಿಕ ಎನ್‌ಇಪಿ ಜಾರಿ; ಪ್ರವೇಶಾತಿ ಕುಸಿತ

Date:

ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜುಗಳಲ್ಲಿ ಪ್ರಸ್ತುತ ವರ್ಷದ ಪ್ರವೇಶಾತಿ ಸಂಖ್ಯೆಯು ಕುಸಿದಿದೆ. ಈ ಪರಿಸ್ಥಿತಿಗೆ ಕಳೆದ ಸರ್ಕಾರ 2020ರಲ್ಲಿ ತಂದ ಹೊಸ ಶಿಕ್ಷಣ ನೀತಿ(ಎನ್‌ಇಪಿ) ಹೇರಿಕೆಯಿಂದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ದೂರ ಉಳಿದಿದ್ದಾರೆ ಎಂದು ಎಐಡಿಎಸ್‌ಒ ಅಭಿಪ್ರಾಯ ವ್ಯಕ್ತಪಡಿಸಿದೆ.

- Advertisement -

ಕರ್ನಾಟಕ ರಾಜ್ಯದ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಉಳಿಸಿ, ಗುಲ್ಬರ್ಗಾ ವಿಶ್ವವಿದ್ಯಾಲಯಗಳನ್ನು ಉಳಿಸಿ ಎಂದು ಕಲಬುರಗಿ ವಿವಿ ವಿದ್ಯಾರ್ಥಿಗಳು ಕಲಬುರಗಿ ಶಿಕ್ಷಣ ಸಂಸ್ಥೆಯ ಜಂಟಿ ನೀರ್ದೆಶಕರು, ಕಲಬುರಗಿ ಈಶನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಗುಲ್ಬರ್ಗಾ ಕೂಡ ಈ ಸಮಸ್ಯೆಗಳಿಂದ ಹೊರತಾಗಿಲ್ಲ. ಸರ್ಕಾರಿ ಕಾಲೇಜುಗಳಲ್ಲಿನ ಶುಲ್ಕ ಏರಿಕೆ ಸರ್ಕಾರಿ ಸಂಸ್ಥೆಗಳನ್ನು ಸ್ವಾಯತ್ತ ಸಂಸ್ಥೆಗಳನ್ನಾಗಿ ಮಾಡುತ್ತಿರುವುದು ಎನ್‌ಇಪಿಯ ಒಂದು ಭಾಗವಾಗಿದೆ. ಇದರಿಂ ದ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣದಿಂದಲೇ ದೂರ ಉಳಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ” ಎಂದರು.

“ಸರ್ಕಾರಿ ಪದವಿ ಕಾಲೇಜುಗಳಲ್ಲಿ ಮೂಲ ಸೌಕರ್ಯಗಳ ಕೊರತೆ, ವಿದ್ಯಾರ್ಥಿವೇತನ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸೂಕ್ತ ಬಸ್‌ ಸೌಲಭ್ಯವಿಲ್ಲದಿರುವುದು, ಸಮರ್ಪಕವಾಗಿ ತರಗತಿಗಳನ್ನ ನಡೆಸಲು ಶಿಕ್ಷಕರ ಕೊರತೆ ಇವೆಲ್ಲವೂ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ತಿಲಾಂಜಲಿ ಹಾಡುತ್ತಿವೆ. ಇಂಥ ಪರಿಸ್ಥಿತಿಯಿಂದ ಉನ್ನತ ಶಿಕ್ಷಣ ಸಂಸ್ಥೆಗಳನ್ನು ರಕ್ಷಿಸಿ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವನ್ನು ಹಸನಾಗಿಸುವ ತುರ್ತು ಅವಶ್ಯಕತೆ ಎದುರಾಗಿದೆ” ಎಂದು ಹೇಳಿದರು.

ಗುಲ್ಬರ್ಗಾ ವಿಶ್ವವಿದ್ಯಾಲಯದ ತುಳಜರಾಮ ಎನ್ ಕೆ ಮಾತನಾಡಿ, “ಅಸಮಪರ್ಕ ಆಡಳಿತದಿಂದಾಗಿ ಶೈಕ್ಷಣಿಕ ವರ್ಷ ಹಾಳಗಿದ್ದು, ಸರಿಯಾದ ಸಮಯಕ್ಕೆ ತರಗತಿ, ಪರೀಕ್ಷೆ ನಡೆಸದಿರುವುದು, ತಾಂತ್ರಿಕ ಸಮಸ್ಯೆಗಳಿಂದಾಗಿ ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬವಾಗುತ್ತಿದೆ. ಇನ್ನೊಂದಡೆ ಅಂಕ ಪಟ್ಟಿ ವಿತರಣೆ ಮಾಡುತ್ತಿಲ್ಲ. ವಿಶ್ವವಿದ್ಯಾಲಯಕ್ಕೆ ಕೇಳಲು ಹೋದ ವಿದ್ಯಾರ್ಥಿಗಳಿಗೆ ಅಲ್ಲಿನ ಸಿಬ್ಬಂದಿಗಳು ಹಣ ಕೇಳುತ್ತಿರುವುದಾಗಿ ಕೇಳಿಬಂದಿದೆ” ಎಂದು ಆರೋಪಿಸಿದರು.

“ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಿ , ಮೂಲಭೂತ ಸೌಕರ್ಯಗಳನ್ನು ಒದಗಿಸಿ ಪ್ರವೇಶಾತಿ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜ್ ಸ್ಥಾಪಿಸಬೇಕು. ವಿದ್ಯಾರ್ಥಿವೇತನ ಮತ್ತು ಹಾಸ್ಟೆಲ್ ಸೌಲಭ್ಯಗಳನ್ನು ಖಾತ್ರಿಪಡಿಸಿ, ಶುಲ್ಕ ವಿನಾಯಿತಿಯನ್ನು ಪ್ರವೇಶಾತಿ ಸಂದರ್ಭದಲ್ಲಿಯೇ ಒದಗಿಸಿ ಅರ್ಜಿ ಸಲ್ಲಿಸಿರುವ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಬಸ್ ಸೌಲಭ್ಯ ಕಲ್ಪಿಸುವಂತೆ ಕರವೇ ಆಗ್ರಹ

“ಎನ್‌ಇಪಿ 2020ರ ಪ್ರಜಾತಾಂತಿಕ ಹೇರಿಕೆಯನ್ನು ಹಿಂಪಡೆಯಬೇಕು. ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಸ್ವಾಯತ್ತ ಸಂಸ್ಥೆಗಳನ್ನಾಗಿ ಮಾಡುವ ಪ್ರಸ್ತಾವನೆಯನ್ನು ಕೈಬಿಡಬೇಕು. ಖಾಲಿ ಇರುವ ಶಿಕ್ಷಕರ ಮತ್ತು ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಬೇಕು” ಎಂದು ಆಗ್ರಹಿಸಿದರು.

ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಹಣಮಂತ ಎಸ್ ಎಚ್, ಜಿಲ್ಲಾ ಉಪಾಧ್ಯಕ್ಷ ಸ್ನೇಹ ಕಟ್ಟಿಮನಿ, ಜಿಲ್ಲಾ ಕಾರ್ಯದರ್ಶಿ ತುಳಜರಾಮ ಎನ್ ಕೆ, ಜಿಲ್ಲಾ ಸಮಿತಿ ಸದಸ್ಯ ಪ್ರೀತಿ ದೊಡ್ಡಮನಿ, ಗೋವಿಂದ ಯಳವರ, ನಾಗರಜ್ ರಾವೂರ, ಸಿದ್ದಾರ್ಥ, ಯುವರಾಜ್ ರಾಠೋಡ್, ಇಂದುಮತಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಇದ್ದರು .

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...