ಮೈಸೂರು | ಕೆಆರ್ ಆಸ್ಪತ್ರೆ ವಿರುದ್ಧ ಸುಮೊಟೊ ಪ್ರಕರಣ

Date:

ಮೈಸೂರಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿರುವ ಕೆಆರ್ ಆಸ್ಪತ್ರೆ ಮತ್ತು ಚೆಲುವಾಂಬ ಆಸ್ಪತ್ರೆಗೆ ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ ಭೇಟಿ ನೀಡಿದ್ದರು. ಆಸ್ಪತ್ರೆಗಳಲ್ಲಿನ ದುರಾಡಳಿತವನ್ನು ಗಮನಿಸಿರುವ ಅವರು ವೈದ್ಯಕೀಯ ಅಧೀಕ್ಷಕರು ಮತ್ತು ವೈದ್ಯಾಧಿಕಾರಿಗಳ ವಿರುದ್ಧ ಸ್ವಯಂ ಪ್ರೇರಿತ (ಸುಮೊಟೊ) ಪ್ರಕರಣಗಳನ್ನು ದಾಖಲಿಸಿದ್ದಾರೆ.

- Advertisement -

ಕಸ ನಿರ್ವಹಣೆ, ಪ್ಲಾಸ್ಟಿಕ್ ಸುರಿಯುವುದು ಮತ್ತು ಪ್ರವೇಶದ್ವಾರದಲ್ಲಿ ವಾಹನಗಳ ಅಡ್ಡಾದಿಡ್ಡಿ ಪಾರ್ಕಿಂಗ್, ಗ್ಯಾಂಗ್ರೀನ್ ಮತ್ತು ಸೆಲ್ಯುಲೈಟಿಸ್ ರೋಗಿಗಳ ಬಗ್ಗೆ ಕಾಳಜಿವಹಿಸದಿರುವುದು, ಹೊರರೋಗಿ ವಿಭಾಗದಲ್ಲಿ ರೋಗಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸದಿರುವುದನ್ನು ಉಪ ಲೋಕಾಯುಕ್ತರು ಪಟ್ಟಿದ್ದಾರೆ. ಜುಲೈ 19ರಂದು ಲೋಕಾಯುಕ್ತ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಎರಡೂ ಆಸ್ಪತ್ರೆಗಳ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲು ಸೂಚಿಸಲಾಗಿದೆ. ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಮತ್ತು ನಿರ್ದೇಶಕರು ಸಮಸ್ಯೆಗಳನ್ನು ಪರಿಹರಿಸಿ ಎರಡು ವಾರಗಳಲ್ಲಿ ಉಪ ಲೋಕಾಯುಕ್ತ ಕಚೇರಿಗೆ ಅನುಪಾಲನಾ ವರದಿ ಸಲ್ಲಿಸಬೇಕೆಂದು ಉಪ ಲೋಕಾಯುಕ್ತರು ಆದೇಶಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ಲೋಕಾಯುಕ್ತ ತಿಳಿಸಿದೆ.

ಎರಡೂ ಆಸ್ಪತ್ರೆಗಳಲ್ಲಿ ಔಷಧಿಗಳನ್ನು ಹೊರಗಿನ ಮೆಡಿಕಲ್ ಸ್ಟೋರ್‌ಗಳಲ್ಲಿ ಖರೀದಿಸುವಂತೆ ಮತ್ತು ಹತ್ತಿರ ಲ್ಯಾಬ್‌ಗಳಲ್ಲಿ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವಂತೆ ವೈದ್ಯರು ಒತ್ತಾಯಿಸಿದ್ದಾರೆ ಎಂದು ಕೆಲವು ರೋಗಿಗಳು ಉಪ ಲೋಕಾಯುಕ್ತರ ಮುಂದೆ ದೂರಿದ್ದಾರೆ. ವಿಶೇಷಚೇತನ ರೋಗಿಗಳಿಗೆ ವಿಶೇಷವಾದ ವಿಶ್ರಾಂತಿ ಕೊಠಡಿ ಸೌಲಭ್ಯಗಳು ಇಲ್ಲವೆಂಬುದನ್ನೂ ಅವರು ಗಮನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬೆಂ-ಮೈ ಎಕ್ಸ್‌ಪ್ರೆಸ್‌ವೇ: ಮತ್ತೊಂದು ಟೋಲ್‌ ಹೊರೆ; ಮಂಡ್ಯದಲ್ಲಿ ಸುಂಕ ವಸೂಲಿ ಆರಂಭ

“ಕೆ.ಆರ್‌ ಆಸ್ಪತ್ರೆಯ ಸಿಬ್ಬಂದಿಗಳು ರೋಗಿಗಳ ಪೋಷಕರಿಂದ ಹಣ ಕೇಳುವ ಅಭ್ಯಾಸವನ್ನು ಹೊಂದಿದ್ದಾರೆ ಎಂಬುದು ತಿಳಿದುಬಂದಿದೆ. ರೋಗಿಗಳಿಗೆ ಹಾಸಿಗೆ ನೀಡಿಲ್ಲ. ಕಬ್ಬಿಣದ ಮಂಚಗಳು ತುಕ್ಕು ಹಿಡಿದಿವೆ. ಆಸ್ಪತ್ರೆಯ ಆವರಣಗಳಲ್ಲಿ ಇಲಿ, ಹೆಗ್ಗಣಗಳ ಅನೇಕ ಬಿಲಗಳಿವೆ. ಇದು ಆಸ್ಪತ್ರೆಯ ಅವ್ಯವಸ್ಥೆಯನ್ನು ಎತ್ತಿ ತೋರಿಸುತ್ತದೆ” ಎಂದು ಉಪ ಲೋಕಾಯುಕ್ತರು ಹೇಳಿದ್ದಾರೆ.

“ಚೆಲುವಾಂಬ ಆಸ್ಪತ್ರೆಯಲ್ಲೂ ವಾರ್ಡ್‌ಗಳ ನಿರ್ವಹಣೆ ಸರಿಯಾಗಿಲ್ಲ. ರೋಗಿಗಳ ಪೋಷಕರಿಗೆ ವಸತಿ ನಿಲಯ ಮತ್ತು ಕಾಯುವ ಸ್ಥಳದ ಸೌಲಭ್ಯಗಳಿಲ್ಲ. ವಿಪರೀತ ಶುಲ್ಕ ವಿಧಿಸುವ ಖಾಸಗಿ ಲ್ಯಾಬ್‌ಗಳಿಂದ ಎಂಆರ್‌ಐ ಮತ್ತು ಅಲ್ಟ್ರಾಸೌಂಡ್ ಪರೀಕ್ಷೆಗಳನ್ನು ಮಾಡುವಂತೆ ಒತ್ತಾಯಿಸಲಾಗುತ್ತಿದೆ ಎಂಬುದನ್ನು ಗಮನಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಡಿಎಚ್ ಒ ಕೆ.ಎಚ್.ಪ್ರಸಾದ್, ಕೆ.ಆರ್.ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ನಂಜುಂಡಸ್ವಾಮಿ, ನಿವಾಸಿ ವೈದ್ಯಾಧಿಕಾರಿ ರಾಜೇಶ್ ಕುಮಾರ್, ಚೆಲುವಾಂಬ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ರಾಜೇಂದ್ರಕುಮಾರ್, ಆರ್‌ಎಂಒ
ಶಿವರಾಮಕೃಷ್ಣ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಿ, ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ” ಎಂದು ಲೋಕಯುಕ್ತ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...