ಬೀದರ್‌ | ಮರಾಠಿಗರ ಒಗ್ಗಟ್ಟಿನ ಲಾಭ ರಾಜಕೀಯ ಪಕ್ಷಗಳು ಬಳಕೆ : ಮನೋಜ ಜರಾಂಗೇ ಪಾಟೀಲ್

Date:

ಕರ್ನಾಟಕ ರಾಜ್ಯದಲ್ಲಿ ಸುಮಾರು 40-50 ಲಕ್ಷ ಮರಾಠಿಗರಿದ್ದಾರೆ, ಹಲವು ವರ್ಷಗಳಿಂದ ಇಲ್ಲಿಯ ಮರಾಠಿಗರು ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ, ಮರಾಠಿಗರ ಒಗ್ಗಟ್ಟಿನ ಲಾಭ ರಾಜಕೀಯ ಪಕ್ಷಗಳು ಬಳಸಿಕೊಳ್ಳುತ್ತಿವೆ. ಹೊರತು ಮರಾಠಿಗರ ಮೀಸಲಾತಿ ಸೇರಿ ವಿವಿಧ ಬೇಡಿಕೆ ಈಡೇರುತ್ತಿಲ್ಲ ಎಂದು ಮರಾಠ ಸಮಾಜದ ಹೋರಾಟಗಾರ ಮನೋಜ ಜರಾಂಗೇ ಪಾಟೀಲ್ ಆತಂಕ ವ್ಯಕ್ತಪಡಿಸಿದರು.

- Advertisement -

ಭಾಲ್ಕಿ ಪಟ್ಟಣದ ಹೊರವಲಯದ ಹುಮನಾಬಾದ್ ರಸ್ತೆಯ ಪ್ರಯಾಗ ಫಂಕ್ಷನ್ ಹಾಲ್ ಸಮೀಪದ ಬಯಲು ಪ್ರದೇಶದಲ್ಲಿ ಸಕಲ ಮರಾಠ ಸಮಾಜದ ವತಿಯಿಂದ ಬುಧವಾರ ಏರ್ಪಡಿಸಿದ್ದ ಮರಾಠ ಸಮಾಜದ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಅನ್ಯಾಯದ ವಿರುದ್ಧ ಹೋರಾಟ ನಡೆಸಲು ನಾನು ಸದಾ ಸಿದ್ಧನಿದ್ದೇನೆ. ರಾಜ್ಯದ ಎಲ್ಲ ಮರಾಠಿಗರು ಒಗ್ಗೂಡಿ ನಿಮ್ಮ ನ್ಯಾಯಯುತ ಹೋರಾಟಕ್ಕೆ ಧ್ವನಿಯಾಗುತ್ತೇನೆ. ಎಲ್ಲ ಮರಾಠಿಗರು ಸೇರಿ ರಾಜ್ಯದಲ್ಲಿ ಬೃಹತ್ ಸಮಾವೇಶ ಏರ್ಪಡಿಸಿ ನಮ್ಮ ಧ್ವನಿಯನ್ನು ಆಳುವ ಸರಕಾರಕ್ಕೆ ಮುಟ್ಟಿಸೋಣ” ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಪದ್ಮಾಕರ ಪಾಟೀಲ ಮಾತನಾಡಿ, “ಬೀದರ್‌ನಲ್ಲಿ ಏ.12ರಂದು ನಡೆಯುವ ಸಭೆಯಲ್ಲಿ ಮರಾಠ ಸಮಾಜದ ಜನರನ್ನು ಸೇರಿಸಿ ಮುಂದಿನ ರಾಜಕೀಯ ನಿರ್ಧಾರ ಕೈಗೊಳ್ಳಲಾಗುತ್ತದೆ. ಮರಾಠ ಸಮಾಜ ಶಿಕ್ಷಣ, ಕೃಷಿ, ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ತೀರಾ ಹಿಂದುಳಿದಿದೆ. ನಮ್ಮ ಸಮುದಾಯವನ್ನು ಎಲ್ಲರೂ ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಆದರೆ, ಮೀಸಲಾತಿ ಸೇರಿ ನ್ಯಾಯಯುತ ವಿವಿಧ ಬೇಡಿಕೆ ಈಡೇರುತ್ತಿಲ್ಲ. ಹೀಗಾಗಿ ಮರಾಠ ಸಮುದಾಯದ ಎಲ್ಲ ಜನರು ಒಂದಾಗಿ ಶಕ್ತಿ ಪ್ರದರ್ಶಿಸಬೇಕು” ಎಂದು ತಿಳಿಸಿದರು.

ಸಾನ್ನಿಧ್ಯ ವಹಿಸಿದ ಬೆಂಗಳೂರು ಗೋಸಾಯಿ ಮಹಾಸಂಸ್ಥಾನ ಮಠದ ಮಂಜುನಾಥ ಭಾರತಿ ಸ್ವಾಮೀಜಿ ಮಾತನಾಡಿ, “ಶಿವಾಜಿ ಮಹಾರಾಜರ ಜೀವನ, ಚರಿತ್ರೆ ಪ್ರತಿಯೊಬ್ಬರಿಗೂ ಪ್ರೇರಣೆಯಾಗಿದೆ. ಅವರಲ್ಲಿನ ಸಾಹಸ, ಧೈರ್ಯ, ಶೌರ್ಯ, ದೇಶಪ್ರೇಮ, ದೇಶಭಕ್ತಿ, ಸಹೋದರತ್ವ ಪ್ರತಿಯೊಬ್ಬರೂ ಅನುಸರಿಸುವ ಮೂಲಕ ಅವರಿಗೆ ನಿಜವಾದ ಗೌರವ ಕೊಡಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಾಲ್ಯದ ನೆನಪು | ಈದ್ ಗೌಜಿ ಮತ್ತು ಹೊಸ ಬಟ್ಟೆ ಖರೀದ

ಕಾರ್ಯಕ್ರಮದಲ್ಲಿ ಮರಾಠಾ ಸಮಾಜದ ಪ್ರಮುಖರಾದ ಜನಾರ್ಧನ ಬಿರಾದಾರ, ನಂದುಕುಮಾರ ಸಾಳುಂಕೆ, ಅಶೋಕರಾವ ಸೋನಜಿ ಸೇರಿದಂತೆ ಹಲವರು ಇದ್ದರು. ಡಾ.ದಿನಕರ ಮೋರೆ ಸ್ವಾಗತಿಸಿದರು. ತುಕಾರಾಮ ಮೋರೆ, ಪಟೇಲ್ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...