ಉತ್ತರ ಕನ್ನಡ | 2-3 ದಿನಗಳಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ₹62.56 ಕೋಟಿ ಜಮೆ: ಸತೀಶ್ ನಾಯ್ಕ ಸ್ಪಷ್ಟನೆ

Date:

ಉತ್ತರ ಕನ್ನಡ: ಜಿಲ್ಲೆಯ ಗೃಹಲಕ್ಷ್ಮಿ ಯೋಜನೆಯ ಅರ್ಹ 3,12,818 ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಮುಂದಿನ ಎರಡು ಅಥವಾ ಮೂರು ದಿನಗಳಲ್ಲಿ ಒಟ್ಟು ₹62,56,36,000 ಮೊತ್ತ ಜಮೆಯಾಗಲಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ಪಿ. ನಾಯ್ಕ ತಿಳಿಸಿದ್ದಾರೆ.

- Advertisement -

ಕಾರವಾರದಲ್ಲಿರುವ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಚೇರಿಯಲ್ಲಿ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಕುರಿತು ನಡೆದ ಅಧಿಕಾರಿಗಳ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ರಾಜ್ಯ ಸರ್ಕಾರದ ನಿರ್ದೇಶನದಂತೆ ಗೃಹಲಕ್ಷ್ಮಿ ಯೋಜನೆಯ ಒಂದೇ ಫಲಾನುಭವಿ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಜಿಲ್ಲೆಯ 26,986 ಫಲಾನುಭವಿಗಳ ಖಾತೆಗಳನ್ನು ಮರುಪರಿಶೀಲನೆ ನಡೆಸಲಾಗಿದೆ. ಈ ಪರಿಶೀಲನೆಯಲ್ಲಿ ಜಿಲ್ಲೆಯ ಯಾವುದೇ ಫಲಾನುಭವಿಯ ಖಾತೆಗೆ ಒಂದೇ ತಿಂಗಳಲ್ಲಿ ಎರಡು ಬಾರಿ ಹಣ ಜಮೆಯಾಗಿರುವುದು ಕಂಡುಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ಆರತಿಬೈಲು ಬಳಿ ಭೀಕರ ಅಪಘಾತ; ಪ್ರವಾಸಕ್ಕೆ ಹೊರಟಿದ್ದ ಧಾರವಾಡದ ಆರು ಮಂದಿ ದುರ್ಮರಣ

ಹೀಗಾಗಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಸತೀಶ್ ಪಿ. ನಾಯ್ಕ ಹೇಳಿದರು. ಇದೇ ವೇಳೆ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಅರ್ಹತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ವೇಳೆ ಫಲಾನುಭವಿಗಳು ಕಡ್ಡಾಯವಾಗಿ ತಮ್ಮ ಮತದಾರರ ಗುರುತಿನ ಚೀಟಿ (ವೋಟರ್ ಐಡಿ) ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅಧಿಕಾರಿಗಳಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಮರುಪರಿಶೀಲನೆಗೆ ಬರುವ ಅಧಿಕಾರಿಗಳಿಗೆ ಅಗತ್ಯ ದಾಖಲೆಗಳನ್ನು ನೀಡಲು ನಿರಾಕರಿಸುವ ಫಲಾನುಭವಿಗಳಿಗೆ ಗೃಹಜ್ಯೋತಿ ಯೋಜನೆಯ ಸೌಲಭ್ಯ ಮುಂದುವರಿಯುವುದು ಕಷ್ಟವಾಗಬಹುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ನಿರಂತರ ಮಳೆಯ ಕಾರಣದಿಂದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಪರಿಶೀಲನಾ ಕಾರ್ಯ ಕೆಲವೆಡೆ ನಿಧಾನಗತಿಯಲ್ಲಿ ಸಾಗುತ್ತಿದೆ. ಆದರೂ ಮುಂಬರುವ ದಿನಗಳಲ್ಲಿ ಈ ಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಿ ಶೀಘ್ರವೇ ಪೂರ್ಣಗೊಳಿಸಲಾಗುವುದು ಎಂದು ಅವರು ತಿಳಿಸಿದರು. ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...