ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

Date:

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ ಹಿಂದೆ ಇ-ಕೆವೈಸಿ ಮಾಡಿಸಿಕೊಂಡಿದ್ದು, ಇದೀಗ ಅಂತಹ ಸದಸ್ಯರು ಪುನಃ ಇ-ಕೆವೈಸಿ ಮಾಡಿಸಿಕೊಳ್ಳಬೇಕಾಗಿದೆ.

- Advertisement -

ಸೆಪ್ಟೆಂಬರ್ 27ರ ವರೆಗೆ ಜಿಲ್ಲೆಯಲ್ಲಿ 2,44,930 ಫಲಾನುಭವಿಗಳು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ಇನ್ನೂ 3,24,114 ಫಲಾನುಭವಿಗಳ ಇ-ಕೆವೈಸಿ ಬಾಕಿ ಇದೆ. ಇ-ಕೆವೈಸಿ ಮಾಡಿಸಿಕೊಳ್ಳಲು ಅಕ್ಟೊಬರ್ 20 ಕೊನೆಯ ದಿನಾಂಕವಾಗಿದ್ದು, ಕೊನೆಯ ದಿನದವರೆಗೆ ಕಾಯದೆ ತಕ್ಷಣವೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಇಲಾಖೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಇ-ಕೆವೈಸಿ ಮಾಡಿಸಿಕೊಳ್ಳದೆ ಬಾಕಿ ಉಳಿದಲ್ಲಿ, ಪಡಿತರ ಚೀಟಿಯ ಆಧಾರದ ಮೇಲೆ ಸರ್ಕಾರದಿಂದ ಪಡೆಯುತ್ತಿರುವ ವಿವಿಧ ಸೌಲಭ್ಯಗಳು ಮುಂದಿನ ದಿನಗಳಲ್ಲಿ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಜಿಲ್ಲೆಯ ಎಲ್ಲಾ ಪಡಿತರ ಚೀಟಿ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಉಚಿತವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಪ್ರಕ್ರಿಯೆಗೆ ಹಣ ಪಡೆದರೆ ಆಹಾರ ಇಲಾಖೆ ಗ್ರಾಹಕರ ಸಹಾಯವಾಣಿ 1967 ಅಥವಾ ಸಂಬಂಧಪಟ್ಟ ತಹಶೀಲ್ದಾರ ಕಚೇರಿಯ ಆಹಾರ ಶಿರಸ್ತೇದಾರ ಹಾಗೂ ಆಹಾರ ನಿರೀಕ್ಷಕರಿಗೆ ದೂರು ಸಲ್ಲಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...