ಉತ್ತರ ಕನ್ನಡ | ಐವರು ರೌಡಿ ಶೀಟರ್‌ಗಳಿಗೆ 6 ತಿಂಗಳ ಗಡಿಪಾರು ಆದೇಶ

Date:

ಸಮಾಜಘಾತಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ತರುತ್ತಿದ್ದ ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಐವರು ರೌಡಿ ಶೀಟರ್‌ಗಳನ್ನು ಉತ್ತರ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಗಡಿಪಾರು ಮಾಡಿ ಭಟ್ಕಳ ಉಪವಿಭಾಗಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

- Advertisement -

ಗಡಿಪಾರು ಶಿಕ್ಷೆಗೆ ಒಳಗಾದವರು ಚಂದ್ರಹಿತ್ತು ಹಾಗೂ ಬೈಲೂರು ನಿವಾಸಿಗಳಾದ ಭಾಸ್ಕರ್ ಮಹಾದೇವ ನಾಯ್ಕ (40), ರಾಜು ಮಹಾದೇವ ನಾಯ್ಕ (36), ಕೇಶವ ಖುತಿಕ್ ಮಹಾದೇವ ನಾಯ್ಕ (27), ಗಣೇಶ್ ಬಾಬು ನಾಯ್ಕ (25) ಮತ್ತು ಗಣೇಶ್ ಬಾಕಪ್ಪ ಜಯಂತ್ ನಾಯ್ಕ (23) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಇವರ ವಿರುದ್ಧ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಈ ಆರೋಪಿಗಳ ಮೇಲೆ ರೌಡಿ ಶೀಟ್ ತೆರೆದು ಇವರ ಚಲನವಲನಗಳ ಮೇಲೆ ನಿರಂತರ ನಿಗಾ ವಹಿಸಲಾಗಿತ್ತು. ಆದರೂ ಸಹ ಇವರು ತಮ್ಮ ಕ್ರಿಮಿನಲ್ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದ ಹಿನ್ನೆಲೆಯಲ್ಲಿ,

ಈ ಸುದ್ದಿ ಓದಿದ್ದೀರಾ? ಶಿರಸಿ | ಜಗಜೀವನ್ ರಾಮ್ ಜಯಂತಿ ನಿರ್ಲಕ್ಷ್ಯ: ಅಧಿಕಾರಿಗಳ ವಿರುದ್ಧ ಭೀಮಘರ್ಜನೆ ಸಂಘಟನೆ ಆಕ್ರೋಶ

ಜಿಲ್ಲಾ ಪೊಲೀಸ್ ಅಧೀಕ್ಷಕರ ಮೂಲಕ ಭಟ್ಕಳ ಉಪವಿಭಾಗಾಧಿಕಾರಿಗಳ ನ್ಯಾಯಾಲಯಕ್ಕೆ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55 (ಎ) ಮತ್ತು (ಬಿ) ಅಡಿಯಲ್ಲಿ ಗಡಿಪಾರು ಮಾಡಲು ವರದಿ ಸಲ್ಲಿಸಲಾಗಿತ್ತು. ವರದಿಯನ್ನು ಪರಿಶೀಲಿಸಿದ ಉಪವಿಭಾಗಾಧಿಕಾರಿಗಳು ಏಪ್ರಿಲ್ 2ರಂದು ಈ ಐವರನ್ನು ಜಿಲ್ಲೆಯಿಂದ ಹೊರಹಾಕಲು ಆದೇಶಿಸಿದ್ದರು.

ಆದೇಶದ ಅನ್ವಯ ಈ ಐವರನ್ನು ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳಿಗೆ ಕಳುಹಿಸಲಾಗಿದೆ, ಭಾಸ್ಕರ್ ಮಹಾದೇವ ನಾಯ್ಕ, ಬಾಗಲಕೋಟೆ ಜಿಲ್ಲೆಯ ನವನಗರ ಠಾಣಾ ವ್ಯಾಪ್ತಿಗೆ. ರಾಜು ಮಹಾದೇವ ನಾಯ್ಕ ಬೀದರ್ ಜಿಲ್ಲೆಯ ನ್ಯೂಟೌನ್ ಠಾಣಾ ವ್ಯಾಪ್ತಿಗೆ.

ಕೇಶವ ಖುತಿಕ್ ಮಹಾದೇವ ನಾಯ್ಕ ಗದಗ ಜಿಲ್ಲೆಯ ಬೆಟಗೇರಿ ಠಾಣಾ ವ್ಯಾಪ್ತಿಗೆ. ಗಣೇಶ್ ಬಾಬು ನಾಯ್ಕ ವಿಜಯಪುರ ಜಿಲ್ಲೆಯ ಗಾಂಧಿ ಚೌಕ್ ಠಾಣಾ ವ್ಯಾಪ್ತಿಗೆ. ಗಣೇಶ್ ಬಾಕಪ್ಪ ಜಯಂತ್ ನಾಯ್ಕ ಕಲಬುರಗಿ ಜಿಲ್ಲೆಯ ಚೌಕ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

ಏಪ್ರಿಲ್ 5 ಮತ್ತು 6ರಂದು ಮುರುಡೇಶ್ವರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಈ ಐವರು ಆರೋಪಿಗಳನ್ನು ಸಂಬಂಧಪಟ್ಟ ಜಿಲ್ಲೆಗಳ ಪೊಲೀಸ್ ಠಾಣಾಧಿಕಾರಿಗಳ ಮುಂದೆ ಹಾಜರುಪಡಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ಈ ಕ್ರಮ ಸಾರ್ವಜನಿಕ ವಲಯದಲ್ಲಿ ಶ್ಲಾಘನೆಗೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...