ಉತ್ತರ ಕನ್ನಡ | ಭೂಕುಸಿತ, ಕಡಲ್ಕೊರೆತ ತಡೆಗೆ ₹800 ಕೋಟಿ ಅನುದಾನ: ಸಚಿವ ಕೃಷ್ಣ ಬೈರೇಗೌಡ

Date:

Advertisements

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಭೂಕುಸಿತ, ಕಡಲ್ಕೊರೆತ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಗಳಲ್ಲಿ ತುರ್ತು ಕಾಮಗಾರಿ ಕೈಗೊಳ್ಳಲು ₹800 ಕೋಟಿ ಅನುದಾನಕ್ಕೆ ಶೀಘ್ರವೇ ಅನುಮೋದನೆ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಉತ್ತರ ಕನ್ನಡ ಜಿಲ್ಲೆಯ ಭೂ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಮಟಾದಲ್ಲಿ ಅವರು ಮಾತನಾಡಿದರು.

“ರಾಜ್ಯದ 6 ಜಿಲ್ಲೆಗಳಲ್ಲಿ ಭೂಕುಸಿತ ಸಮಸ್ಯೆ ತೀವ್ರವಾಗಿದ್ದು, ಈ ಭಾಗದಲ್ಲಿ ತಡೆಗೋಡೆ ನಿರ್ಮಿಸುವ ಕಾಮಗಾರಿಗಾಗಿ ₹500 ಕೋಟಿ ಮೀಸಲಿಡಲಾಗುತ್ತಿದೆ ಎಂದರು. ರಾಜ್ಯದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕಡಲು ಕೊರೆತ ಸಮಸ್ಯೆ ತಡೆಗೆ ಪ್ರತಿ ಜಿಲ್ಲೆಗೆ ನೂರು ಕೋಟಿಯಂತೆ 300 ಕೋಟಿ ಒದಗಿಸಲಾಗುವುದು. ತಡೆಗೋಡೆ ನಿರ್ಮಾಣ ಸೇರಿದಂತೆ ಪ್ರಕೃತಿ ವಿಕೋಪ ತಡೆಗೆ ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆಯಾಗಲು ವಿಳಂಬವಾಗಿದೆ. ಈ ಕುರಿತಂತೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಕೇಂದ್ರದ ಅನುದಾನ ಬಿಡುಗಡೆ ವಿಳಂಬವಾಗಿರುವುದರಿಂದ ತಡೆಗೋಡೆ ಹಾಗೂ ಪ್ರಕೃತಿ ವಿಕೋಪದ ಕಾಮಗಾರಿ ನಡೆಸಲು ವಿಳಂಬವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿನ 136ಕ್ಕೂ ಹೆಚ್ಚು ಮಳೆಮಾಪನ ಯಂತ್ರಗಳು ಹಾಳಾಗಿದೆ. ರಾಜ್ಯದ ಸುಮಾರು 1,500 ಸ್ಥಳಗಳಲ್ಲಿ ಮಳೆ ಮಾಪನ ಕೇಂದ್ರಗಳು ದುಸ್ಥಿತಿಯಲ್ಲಿವೆ. ಅವುಗಳನ್ನು ದುರಸ್ತಿ ಮಾಡಿಸುವ ಕೆಲಸ ನಡೆಯಲಿದೆ. ಯಂತ್ರಗಳು ಸಂಪೂರ್ಣ ಹಾಳಾಗಿದ್ದರೆ ಹೊಸ ಯಂತ್ರಗಳ ಅಳವಡಿಕೆ ನಡೆಯಲಿದೆ” ಎಂದು ಮಾಹಿತಿ ನೀಡಿದರು.

Advertisements
WhatsApp Image 2025 07 22 at 1.14.03 PM

“ಕಂದಾಯ ದಾಖಲೆಗಳನ್ನು ಗಣಕೀಕರಣ ಮಾಡಲಾಗುತ್ತಿದೆ. ಜನರಿಗೆ ದಾಖಲೆಗಳು ಸುಲಭವಾಗಿ ಸಿಗುವಂತೆ ಮಾಡಲಾಗುತ್ತಿದೆ. ಮುಂದಿನ 6 ತಿಂಗಳ ಒಳಗೆ ರಾಜ್ಯದ ಎಲ್ಲ ಕಂದಾಯ ದಾಖಲೆಗಳನ್ನು ಸಂಪೂರ್ಣ ಗಣಕೀಕರಣ ಮಾಡುವ ಗುರಿ ಹೊಂದಲಾಗಿದೆ ಎಂದ ಅವರು ರಾಜ್ಯದಲ್ಲಿ ಪೌತಿ ಖಾತೆ ಆಂದೋಲನ ನಡೆಸಲಾಗುತ್ತಿದ್ದು ಮೃತರ ಅಧಿಕೃತ ವಾರಿಸುದಾರರಿಗೆ ಪಹಣಿ ದಾಖಲೆಗಳನ್ನು ವರ್ಗಾವಣೆ ಮಾಡಲಾಗುವುದು” ಎಂದರು.

ಇದನ್ನೂ ಓದಿ: ಉತ್ತರ ಕನ್ನಡ | ಕಾರಿನ ಮೇಲೆ ಮರ ಬಿದ್ದು ಮಹಿಳೆ ಸಾವು

ಶಿರಸಿ ತಾಲೂಕಿನ ಬೆಣ್ಣೆಹೊಳೆ ಸೇತುವೆ, ಭೂಕುಸಿತ ಸಂಭವಿಸಿರುವ ಕುಮಟಾ ತಾಲೂಕಿನ ದೇವಿಮನೆ ಘಟ್ಟ ಪ್ರದೇಶದಲ್ಲಿ ಪರಿಶೀಲನೆ ನಡೆಸಿದರು. ದೇವಿಮನೆ ಘಟ್ಟದಲ್ಲಿ ತಡೆಗೋಡೆ ನಿರ್ಮಿಸದೆ ಹೆದ್ದಾರಿ ಕಾಮಗಾರಿ ಕೈಗೆತ್ತಿಕೊಂಡಿದ್ದಕ್ಕೆ ಆರ್.ಎನ್.ಎಸ್ ಇನ್‌ಫ್ರಾಸ್ಟ್ರಕ್ಟರ್ ಕಂಪನಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

WhatsApp Image 2025 07 22 at 1.13.42 PM

ಈ ವೇಳೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ, ಶಾಸಕರಾದ ಭೀಮಣ್ಣ ನಾಯ್ಕ, ದಿನಕರ ಶೆಟ್ಟಿ, ಜಿಲ್ಲಾಧಿಕಾರಿ ಕೆ.ಲಕ್ಷ್ಮಿ ಪ್ರಿಯ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X