ಉತ್ತರ ಕನ್ನಡ | ಬಸ್ಸಿನಲ್ಲಿ ಕಿರುಕುಳ ನೀಡಿದ ಕಾಮುಕನಿಗೆ ತಕ್ಕ ಪಾಠ; ವಿಡಿಯೋ ಮೂಲಕ ವಿಕೃತಿ ಬಯಲಿಗೆಳೆದ ಧೈರ್ಯಶಾಲಿ ಯುವತಿ

Date:

ಉತ್ತರ ಕನ್ನಡ: ಕಾರವಾರದಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ಬಸ್‌ನಲ್ಲಿ ವ್ಯಕ್ತಿಯೊಬ್ಬ ಪಕ್ಕದಲ್ಲಿ ಕುಳಿತ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿ ನಿದ್ದೆ ಮಾಡುತ್ತಿದ್ದಾಗ, ಪಕ್ಕದ ಆಸನದಲ್ಲಿ ಕುಳಿತಿದ್ದ ಯುವಕ ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ನಿದ್ದೆಯಿಂದ ಏಕಾಏಕಿ ಎಚ್ಚರಗೊಂಡ ಯುವತಿ, ಆರೋಪಿಯ ಕೈ ತನ್ನ ಎದೆ ಮೇಲಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಆದರೆ ಗಾಬರಿಗೊಳ್ಳದೆ ಧೈರ್ಯ ತೋರಿದ ಯುವತಿ, ತಕ್ಷಣವೇ ತನ್ನ ಮೊಬೈಲ್‌ ಫೋನ್‌ನಲ್ಲಿ ಆರೋಪಿಯ ವಿಡಿಯೋವನ್ನು ಚಿತ್ರೀಕರಿಸಿದ್ದಾಳೆ. ಬಳಿಕ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ಯುವಕನ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾಳೆ.

ವಿಡಿಯೋದಲ್ಲಿ ಯುವತಿ ಆರೋಪಿಯ ವರ್ತನೆಯನ್ನು ಖಂಡಿಸಿದ್ದು ಇಂತಹ ಕೃತ್ಯ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾಳೆ. ಜೊತೆಗೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಟ್ಯಾಗ್ ಮಾಡಿ, ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾಳೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ಮಹಿಳೆಯರು ತಮ್ಮ ರಕ್ಷಣೆಗೆ ತಾವೇ ಧೈರ್ಯದಿಂದ ಮುಂದೆ ಬರಬೇಕು ಎಂಬ ಸಂದೇಶವನ್ನೂ ಯುವತಿ ನೀಡಿದ್ದಾಳೆ.

ಘಟನೆ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ವಿಡಿಯೋ ವೈರಲ್ ಆದ ಬೆನ್ನಲ್ಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಪ್ರಕರಣ ದಾಖಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ವರದಿಯಾದರೂ ಅಲುಗಾಡದ ಆಡಳಿತ: ಅಧಿಕಾರಿಗಳ ‘ಮೌನ’ಕ್ಕೆ ಕಾರಣವೇನು?

ಧೈರ್ಯ ತೋರಿದ ಈ ಯುವತಿಯ ನಡೆಗೆ ಈಗ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸಭ್ಯವಾಗಿ ವರ್ತಿಸುವವರಿಗೆ ಇಂತಹ ಪಾಠ ಕಲಿಸುವುದು ಅನಿವಾರ್ಯ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...